Friday, August 19, 2022

ದಕ್ಷಿಣಕನ್ನಡ ಜಿಲ್ಲೆಯಲ್ಲಿ 10 ಸಾವಿರದ ಸನಿಹಕ್ಕೆ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 202 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 5 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 202 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 9914 ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ 64 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2420 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಕೂಡ ಜಿಲ್ಲೆಯಲ್ಲಿ 5 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 301 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು -139, ಬಂಟ್ವಾಳ – 35, ಸುಳ್ಯ -3, ಬೆಳ್ತಂಗಡಿ – 4, ಪುತ್ತೂರು – 11, ಹೊರ ಜಿಲ್ಲೆಯವರು – 10 ಪ್ರಕರಣಗಳಿವೆ.

ಉಡುಪಿ ಕೊರೊನಾ ಮಾಹಿತಿ

ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 278 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 9668 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಇಬ್ಬರು ಸಾವನಪ್ಪಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 6857 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2729 ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 1130 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 1599 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ.

ಇಂದು ಉಡುಪಿಯಲ್ಲಿ ಕೊರೊನಾದಿಂದಾಗಿ ಇಬ್ಬರು ಸಾವನಪ್ಪಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 82 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ – 159, ಕುಂದಾಪುರ -99 , ಕಾರ್ಕಳ -14, ಜಿಲ್ಲೆಯ ಹೊರಗಿನ – 6 ಪ್ರಕರಣಗಳಿವೆ.

LEAVE A REPLY

Please enter your comment!
Please enter your name here

Hot Topics

ಚಿಕ್ಕಮಗಳೂರಿನಲ್ಲೂ ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶನ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಮೀಪ ಬಿಜೆಪಿಯವರು ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶಿಸಿದರು.ಪ್ರತಿಯಾಗಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬಾವುಟ ಪ್ರದರ್ಶಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಗುಂಪುಗಳ...

“ಹಿಂದೂಗಳು ಸತ್ರೆ BJPಗೆ ಓಟು ಬರುತ್ತದೆ-ಅಲ್ಪಸಂಖ್ಯಾತರು ಸತ್ತರೆ ಓಟ್ ಸಿಗಲ್ಲ”

ಮಂಗಳೂರು: ಬಿಜೆಪಿಗರಿಗೆ ಹಿಂದೂಗಳು ಸತ್ತರೆ ಅದ್ರಲ್ಲೂ ಬಿಲ್ಲವರು ಸತ್ತರೆ ಮಾತ್ರ ಓಟು ಬರುತ್ತದೆ. ಅಲ್ಪಸಂಖ್ಯಾತರು ಸತ್ತರೆ ಓಟು ಬರೋದಿಲ್ಲ. ಅದಕ್ಕಾಗಿ ಹರೀಶ್ ಪೂಜಾರಿಯವರ ಹತ್ಯೆಯಾಯ್ತು. ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮರಸ್ಯವನ್ನು ಬಯಸುವ ಪಕ್ಷ....

ದೇರಳಕಟ್ಟೆಯಲ್ಲೂ ಕಾಣಿಸಿಕೊಂಡ ಸಾವರ್ಕರ್‌ ಫ್ಲೆಕ್ಸ್

ಮಂಗಳೂರು: ಶಿವಮೊಗ್ಗದಲ್ಲಿ ಸಾರ್ವಕರ್‌ ಫ್ಲೆಕ್ಸ್‌ನಿಂದ ಗಲಭೆ ಉಂಟಾದ ಬೆನ್ನಲ್ಲೇ ಮಂಗಳೂರು ನಗರದ ಹೊರವಲಯದ ದೇರಳಕಟ್ಟೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡರೊಬ್ಬರು ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿದ್ದಾರೆ. ಪೊಲೀಸರು ಅದನ್ನು ತೆರವುಗೊಳಿಸಿದ್ದಾರೆ.ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ...