ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಪ್ರಕರಣಗಲು ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 25,753 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,249 ಮಂದಿಗೆ ಸೋಂಕು ದೃಢಪಟ್ಟಿದೆ.
1,154 ಮಂದಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 39 ಲಕ್ಷದ 22 ಸಾವಿರದ 541 ಮಂದಿ ಗುಣಮುಖರಾಗಿದ್ದಾರೆ.
ಇನ್ನು ಕರ್ನಾಟಕದಲ್ಲಿ ಕೋವಿಡ್ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳು 5,707ಕ್ಕೆ ಏರಿಕೆಯಾಗಿದ್ದು, ಈ ಮೂಲಕ ಸೋಂಕಿತರ ಪ್ರಮಾಣ ಶೇ. 4.84 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 3.35 ರಷ್ಟಿದೆ.
ಇಲ್ಲಿಯವರೆಗೂ ಪರೀಕ್ಷಿಸಲಾದ ಒಟ್ಟು ಸಂಖ್ಯೆ 6 ಕೋಟಿ 69 ಲಕ್ಷದ 62 ಸಾವಿರದ 355 ಆಗಿದೆ. ವಾರದ ಸಾವಿನ ಪ್ರಮಾಣ ಶೇ.0.05 ರಷ್ಟಿದೆ.
ದಕ ಜಿಲ್ಲೆಯಲ್ಲೂ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಕಳೆದ 24 ಗಂಟೆಗಳಲ್ಲಿ 29 ಕೇಸ್ ಪತ್ತೆಯಾಗಿದ್ದು 69 ಸಕ್ರೀಯ ಪ್ರಕರಣಗಳಿವೆ.
ಸಾವಿನ ಪ್ರಮಾಣ 3.12ಕ್ಕೆ ಏರಿಕೆಯಾಗಿದೆ. ದ.ಕ ಜಿಲ್ಲೆಯಲ್ಲಿ ಸಕ್ರಿಯ ಕೊರೋನಾ ಪ್ರಕರಣಗಳು ಹೆಚ್ಚಿದ್ದು ಒಬ್ಬ ವ್ಯಕ್ತಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರು.