LATEST NEWS
ದೇಶದಲ್ಲಿ ಕೊರೋನಾ ಗಣನೀಯ ಪ್ರಮಾಣದಲ್ಲಿ ಹೆಚ್ಚಳ: ಉಚಿತ ಬೂಸ್ಟರ್ ಲಸಿಕೆಗೆ ಸಿದ್ಧತೆ
ನವದೆಹಲಿ: ದೇಶದಲ್ಲಿ ಕೊರೊನಾ ಗಣನೀಯ ಪ್ರಮಾಣದಲ್ಲಿ ಹೆಚ್ಚಳ ಕಂಡು ಬರುತ್ತಿದ್ದು ಮತ್ತೆ ಆತಂಕ ಎದುರಾಗಿದೆ. ಈ ಮಧ್ಯೆ ಕೊರೊನಾದಿಂದ ಮುಕ್ತಿ ಪಡೆಯಲು ಉಚಿತ ಬೂಸ್ಟರ್ ಲಸಿಕೆ ಡೋಸ್ ವಿತರಣೆ ಸಿದ್ದತೆಗಳನ್ನು ಸರ್ಕಾರ ಆರಂಭಿಸಿದೆ.
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 20,528 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 4,37,50,599ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಯಲ್ಲಿ 49 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಒಟ್ಟು ಸಾವಿನ ಸಂಖ್ಯೆ 5,25,709ಕ್ಕೆ ಏರಿಕೆಯಾಗಿದೆ.
ಸದ್ಯ ದೇಶದಲ್ಲಿ 1,43,449 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 17,790 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,30,81,441ಕ್ಕೆ ಏರಿದೆ.
ಸಾವಿನ ಪ್ರಮಾಣ ಶೇ.1.20 ರಷ್ಟಿದೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ. 98.47 ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ. 4.44 ಮತ್ತು ಸಾಪ್ತಾಹಿಕ ಪಾಸಿಟಿವಿಟಿ ದರ ಶೇ.4.30ರಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಈವರೆಗೆ 199.98 ಕೋಟಿ ಲಸಿಕೆ ನೀಡಲಾಗಿದೆ. ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲೂ ಕೋವಿಡ್ ಪ್ರಕರಣಗಳಲ್ಲಿ ಗಣನೀಯ ಏರಿಕೆ
ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ದಿನೇ ದಿನೆ ಹೆಚ್ಚಳವಾಗುತ್ತಿದೆ. ಕಳೆದ 24ಗಂಟೆಗಳಲ್ಲಿ 1,374 ಕೇಸ್‌ಗಳು ದಾಖಲಾಗಿದ್ದು ಬೆಂಗಳೂರಿನಲ್ಲೇ 1,234 ಪ್ರಕರಣಗಳು ವರದಿಯಾಗಿವೆ.
ಜೊತೆಗೆ ಮೂರು ಪ್ರಕರಣ ದಾಖಲಾಗಿದೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 7,296ಕ್ಕೆ ತಲುಪಿದೆ. ಬೆಂಗಳೂರಿನ ಬಳಿಕ ರಾಜ್ಯದಲ್ಲಿ ಅತೀ ಹೆಚ್ಚು ಕೋವಿಡ್ ಕೇಸ್‌ಗಳು ಧಾರವಾಡದಲ್ಲಿ ದಾಖಲಾಗಿದೆ.
ರಾಜ್ಯದ 3 ಮರಣ ಪ್ರಕರಣ ಪೈಕಿ ಬೆಂಗಳೂರು ನಗರದಲ್ಲಿ 2 ಹಾಗೂ ಬಳ್ಳಾರಿಯಲ್ಲಿ 1 ಕೇಸ್ ವರದಿಯಾಗಿದೆ. ಪಾಸಿಟಿವಿಟಿ ರೇಟ್ ಶೇ.4.86 ಕ್ಕೆ ತಲುಪಿದೆ.
LATEST NEWS
ಬೈಕ್ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!
ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.
ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.
ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.
ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.
ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FILM
ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!
ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.
‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು ಮನವಿ ಮಾಡಿದ್ದಾರೆ.
ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
bengaluru
ನಟ ನಾಗಭೂಷಣ್ ಕಾರು ಅಪಘಾತ – ಮಹಿಳೆ ಸಾವು..!
ಬೆಂಗಳೂರು: ಕನ್ನಡದ ಹೆಸರಾಂತ ನಟ ನಾಗಭೂಷಣ್ ಅವರು ಚಲಾಯಿಸುತ್ತಿದ್ದ ಕಾರು ದಂಪತಿಗಳಿಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಹಿಳೆಯ ಸಾವಿಗೆ ಕಾರಣರಾದ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ವಸಂತಪುರದ ನಿವಾಸಿ ಪ್ರೇಮಾ (48) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ನಾಗಭೂಷಣ್ ಶೂಟಿಂಗ್ ಮುಗಿಸಿಕೊಂಡು ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.
ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮಾ ಅವರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮಾಹಿತಿ ಪಡೆಯುತ್ತಿದ್ದಾರೆ.
ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
- DAKSHINA KANNADA6 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- LATEST NEWS6 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!
- DAKSHINA KANNADA6 days ago
Puttur: ಕಾಲೇಜು ವಿದ್ಯಾರ್ಥಿನಿ ಜಿವಾಂತ್ಯ..!
- DAKSHINA KANNADA6 days ago
Ullala: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ವ್ಯಕ್ತಿ ಜೀವಾಂತ್ಯ..!