Monday, August 15, 2022

ಕರಾವಳಿ ಜಿಲ್ಲೆಗಳಲ್ಲಿ ಕೊರೊನಾದ ನಾಗಲೋಟ : ಅವಿಭಾಜ್ಯ ದಕ್ಷಿಣ ಕನ್ನಡದಲ್ಲಿ 557 ಪಾಸಿಟಿವ್-13 ಬಲಿ…

ಕರಾವಳಿ ಜಿಲ್ಲೆಗಳಲ್ಲಿ ಕೊರೊನಾದ ನಾಗಲೋಟ : ಅವಿಭಾಜ್ಯ ದಕ್ಷಿಣ ಕನ್ನಡದಲ್ಲಿ 557 ಪಾಸಿಟಿವ್-13 ಬಲಿ…

ದ.ಕ/ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಕೊರೊನಾದ ನಾಗಲೋಟ ಮುಂದುವರೆದಿದೆ. ಅವಿಭಾಜ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 577 ಮಂದಿಯಲ್ಲಿ ಕೊರೋನಾ ಸೋಂಕು ಧೃಡಪಟ್ಟಿದೆ.

ದಕ್ಷಿಣ ಕನ್ನಡದಲ್ಲಿಂದು 350 ಪಾಸಿಟಿವ್‌ ಪ್ರಕರಣ ದಾಖಲಾಗಿದೆ. 9 ಮಂದಿ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 427ಕ್ಕೇರಿಕೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ  ಸಂಖ್ಯೆ 3273ಕ್ಕೆ ಏರಿಕೆಯಾಗಿದೆ.

ಆಸ್ಪತ್ರೆಯಿಂದ ಚೇತರಿಸಿಕೊಂಡು 170 ಮಂದಿ ಬಿಡುಗಡೆಯಾಗಿದ್ದಾರೆ. ಒಟ್ಟು ಬಿಡುಗಡೆಯಾದವರ ಸಂಖ್ಯೆ 12,412 ಆಗಿದೆ.

ಇಂದು ದಾಖಲಾದ 350 ಪ್ರಕರಣಗಳಲ್ಲಿ 100 ಪ್ರಾಥಮಿಕ ಸಂಪರ್ಕದ 119 ಐಎಲ್‌ಐ, 27 ಉಸಿರಾಟ ತೊಂದರೆಯ, 104 ವಿಚಾರಣಾ ಹಂತದಲ್ಲಿರುವ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಉಡುಪಿ ವರದಿ : ಇನ್ನು ಉಡುಪಿಯಲ್ಲಿ ನೋವೆಲ್ ಕೊರೋನ ಸೋಂಕಿಗೆ ನಾಲ್ವರು ಮೃತಪಟ್ಟಿದ್ದು, ಈವರೆಗೆ ಮೃತರಾದವರ ಒಟ್ಟು ಸಂಖ್ಯೆ 126ಕ್ಕೇರಿದೆ.

ಅಲ್ಲದೇ ಇಂದು  227 ಮಂದಿಯಲ್ಲಿ ಹೊಸದಾಗಿ ಕೊರೋನ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರಾದವರ ಒಟ್ಟು ಸಂಖ್ಯೆ 13572ಕ್ಕೇರಿದೆ.

ಇಂದು ಕೋವಿಡ್ ಪಾಸಿಟಿವ್ ದೃಢಪಟ್ಟ 227 ಮಂದಿಯಲ್ಲಿ ಉಡುಪಿ ತಾಲೂಕಿನ 119 ಮಂದಿ, ಕುಂದಾಪುರ ತಾಲೂಕಿನ 42 ಹಾಗೂ ಕಾರ್ಕಳ ತಾಲೂಕಿನ 56 ಮಂದಿ ಇದ್ದು, ಹೊರಜಿಲ್ಲೆಯಿಂದ ಉಡುಪಿಗೆ ಚಿಕಿತ್ಸೆಗೆಂದು ಬಂದ 10 ಮಂದಿಯಲ್ಲಿ ಸಹ ಕೊರೋನ ಪಾಸಿಟಿವ್ ಪತ್ತೆಯಾಗಿದೆ ಎಂದವರು ತಿಳಿಸಿದರು.

ಇಂದು ಮಕ್ಕಳು ಸೇರಿದಂತೆ 123 ಮಂದಿ ಪುರುಷರು ಹಾಗೂ 104 ಮಂದಿ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ 49 ಪುರುಷರು ಹಾಗೂ 57 ಮಹಿಳೆಯರಲ್ಲಿ ರೋಗದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ,

ಪಾಸಿಟಿವ್ ದೃಢಗೊಂಡ 227 ಮಂದಿಯಲ್ಲಿ 124 ಮಂದಿ ಪಾಸಿಟಿವ್ ಬಂದವರ ಸಂಪರ್ಕದಿಂದ, 58 ಮಂದಿ ಶೀತಜ್ವರದಿಂದ ಹಾಗೂ 9 ಮಂದಿ ಉಸಿರಾಟದ ತೊಂದರೆಯಿಂದ ಬಳಲುತಿದ್ದು ಸೋಂಕು ಕಾಣಿಸಿಕೊಂಡಿದೆ.

ಉಳಿದಂತೆ 36 ಮಂದಿಯ ಸೋಂಕಿನ ಸಂಪರ್ಕ ಇನ್ನೂ ಪತ್ತೆಯಾಗಬೇಕಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.

 

LEAVE A REPLY

Please enter your comment!
Please enter your name here

Hot Topics

ಉಡುಪಿ ಜಿಲ್ಲಾಡಳಿತದಿಂದ ‘ಆಜಾದಿ ಕಾ ಅಮೃತ್‌ ಮಹೋತ್ಸವ’

ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಆಜಾದಿ ಕಾ ಅಮೃತ್‌ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭ ಇಂದು ಅಜ್ಜರಕಾಡಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ...

ಸೌದಿ ಅರೇಬಿಯಾದಲ್ಲಿ ಭಾರತದ ಸ್ವಾತಂತ್ರ್ಯ ಸಂಭ್ರಮ: ಕೇಕ್‌ ಕತ್ತರಿಸಿ ಆಚರಿಸಿದ ಅನಿವಾಸಿಗರು

ಮಂಗಳೂರು: ಇಂದು ಭಾರತ ದೇಶಾದ್ಯಂತ ಹಬ್ಬದ ವಾತಾವರಣ. ಸ್ವಾತಂತ್ರ್ಯದ ಅಮೃತಮಹೋತ್ಸವವಾದ ಇಂದು ಬೆಳಗ್ಗೆ ದೇಶಾದ್ಯಂತ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿದ್ದರೆ ಸಪ್ತ ಸಮುದ್ರಾಚೆಗಿರುವ ಸೌದಿ ಅರೇಬಿಯಾದಲ್ಲಿ ಅನಿವಾಸಿ ಭಾರತೀಯರು ಸ್ವಾತಂತ್ರ್ಯವನ್ನು ಆಚರಿಸಿದರು.ಸೌದಿ ಅರೇಬಿಯಾ...

ಮೂಡುಬಿದಿರೆ: ಎಂ.ಜೆ.ಎಂ ಮಸ್ಜಿದ್ ಕುಂಡದ ಬೆಟ್ಟುವಿನಲ್ಲಿ ಫ್ರೀಡಂ ಸಂಗಮ, ಸನ್ಮಾನ

ಮೂಡುಬಿದಿರೆ: ಇಲ್ಲಿನ ವೇಣೂರಿನ ಎಂ.ಜೆ.ಎಂ ಮಸ್ಜಿದ್ ಕುಂಡದ ಬೆಟ್ಟು ಹಾಗೂ ಎಸ್.ಬಿ.ಎಸ್ ದಾರುಸ್ಸಲಾಂ ಮದ್ರಸ ಕುಂಡದಬೆಟ್ಟು ಇದರ ವತಿಯಿಂದ ಫ್ರೀಡಂ ಸಂಗಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಕುಂಡದಬೆಟ್ಟುವಿನಲ್ಲಿ ನಡೆಯಿತು.ಎಸ್.ಎನ್.ಎಂ ಪಾಲಿಟೆಕ್ನಿಕ್ ಮೂಡಬಿದಿರೆಯ...