Friday, August 19, 2022

ಕಡಬ: ಕೊರೊನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಅಡ್ಡಿ

ಕಡಬ : ಕಡಬ ತಾಲೂಕಿನ ಇಚ್ಲಂಪ್ಪಾಡಿಯಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದ ವ್ಯಕ್ತಿ ಕೊರೊನಾ ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರವನ್ನು ನಡೆಸುವುದಕ್ಕೆ ಸ್ಥಳೀಯ ವ್ಯಕ್ತಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರು.

ಬಳಿಕ ಘಟನಾ ಸ್ಥಳಕ್ಕೆ ಆಗಮಿಸಿದ ನೆಲ್ಯಾಡಿ ಪೊಲೀಸರು, ನೆಲ್ಯಾಡಿ ವೈದ್ಯಾಧಿಕಾರಿ ಸೌಮ್ಯಾ ನೇತೃತ್ವದ ತಂಡ ಈ ವ್ಯಕ್ತಿ ಮನವೊಲಿಸಿ ಅಲ್ಲೇ ಅಂತ್ಯಸಂಸ್ಕಾರವನ್ನು ಪೂರ್ಣಗೊಳಿಸಲಾಯಿತು. ಈ ವೇಳೆ ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ವ್ಯಕ್ತಿ ಮೃತದೇಹವನ್ನು ಕೊರೊನಾ ವರದಿ ಬರುವವರೆಗೆ ಬೆಳ್ತಂಗಡಿಯ ಆಸ್ಪತ್ರೆಯಲ್ಲಿ ಇಡಲಾಗಿತ್ತು. ವರದಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರದ ವಿಚಾರದಲ್ಲಿ ಗೊಂದಲ ಏರ್ಪಟ್ಟಿತ್ತು. ಬಳಿಕ ಅಧಿಕಾರಿಗಳು ಬಂದು ಮಾತುಕತೆ ನಡೆಸಿದರು.

ನೆಲ್ಯಾಡಿಯ ಸಾಮಾಜಿಕ ಕಾರ್ಯಕರ್ತರು ಅಂತ್ಯ ಸಂಸ್ಕಾರ ಸರ್ಕಾರದ ನಿಯಮಾವಳಿ ಮತ್ತು ಮುಂಜಾಗೃತ ಕ್ರಮಗಳನ್ನು ಅನುಸರಿಸಿ ನೆರವೇರಿಸಿದರು. ಕಂದಾಯ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಮುನ್ನೆಚ್ಚರಿಕೆ ವಹಿಸಿದರು.

LEAVE A REPLY

Please enter your comment!
Please enter your name here

Hot Topics

ಲಾಠಿ ಹಿಡಿದ ಕೈಯಲ್ಲಿ ಪೊರಕೆ ಹಿಡಿದು ಕಲ್ಲಡ್ಕ ಬಸ್ಟ್ಯಾಂಡ್ ಕ್ಲೀನ್: ಮೆಲ್ಕಾರ್ ಟ್ರಾಫಿಕ್ ಪೊಲೀಸರ ಸಮಾಜಮುಖಿ ಕಾರ್ಯ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ‌ ಧೂಳು ಕೆಸರಿನಿಂದ ಕೂಡಿದ್ದ ಬಸ್ ನಿಲ್ದಾಣವನ್ನು ಪ್ರತಿ ವಾರಕ್ಕೊಮ್ಮೆ ಪೊಲೀಸರ ತಂಡ ನೀರು ಹಾಕಿ ತೊಳೆಯುವ ಅದ್ಭುತ ಘಟನೆ ಬಂಟ್ವಾಳದ ಕಲ್ಲಡ್ಕದಲ್ಲಿ ನಡೆಯುತ್ತಿದೆ.ಕಲ್ಲಡ್ಕದ ಪೇಟೆಯಲ್ಲಿರುವ ಬಸ್ ನಿಲ್ದಾಣ...

ದೇರಳಕಟ್ಟೆಯಲ್ಲೂ ಕಾಣಿಸಿಕೊಂಡ ಸಾವರ್ಕರ್‌ ಫ್ಲೆಕ್ಸ್

ಮಂಗಳೂರು: ಶಿವಮೊಗ್ಗದಲ್ಲಿ ಸಾರ್ವಕರ್‌ ಫ್ಲೆಕ್ಸ್‌ನಿಂದ ಗಲಭೆ ಉಂಟಾದ ಬೆನ್ನಲ್ಲೇ ಮಂಗಳೂರು ನಗರದ ಹೊರವಲಯದ ದೇರಳಕಟ್ಟೆಯಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡರೊಬ್ಬರು ಸಾವರ್ಕರ್ ಪರವಾಗಿ ಫ್ಲೆಕ್ಸ್ ಹಾಕಿದ್ದಾರೆ. ಪೊಲೀಸರು ಅದನ್ನು ತೆರವುಗೊಳಿಸಿದ್ದಾರೆ.ದೇರಳಕಟ್ಟೆ ಮತ್ತು ಅಸೈಗೋಳಿಯಲ್ಲಿ...

ಇಂದು & ನಾಳೆ ಮಂಗಳೂರಿನಲ್ಲಿ ಮೂಡುಬಿದ್ರೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ

ಮಂಗಳೂರು: ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಿವೇಕ್ ಮೋಟಾರ್ ಫೀಡರ್ ಮತ್ತು 11ಕೆ.ವಿ ಮಾರ್ಕೆಟ್ ಫೀಡರ್‍ಗಳಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.ಆದ ಕಾರಣ ಇಂದು ಬೆಳಿಗ್ಗೆ 10...