Connect with us

    LATEST NEWS

    ಎಚ್ಚರ..! ಇಂದು ಮಧ್ಯರಾತ್ರಿಯಿಂದ ಶುರುವಾಗ್ತಿದೆ ಕೊರೊನಾದ ನಿರ್ಣಾಯಕ ಸಮಯ..!

    Published

    on

    ನವದೆಹಲಿ :  ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದೆ. ಆದ್ರೆ ಇಂದು ರಾತ್ರಿ 12 ಗಂಟೆಯ ನಂತರ ನಿರ್ಣಾಯಕ ಸಮಯ ಪ್ರಾರಂಭವಾಗಲಿದೆ ಎಂದು ಮೆಡಂತಾ ಆಸ್ಪತ್ರೆ ಸಿಎಂಡಿ ನರೇಶ್ ಟ್ರೆಹನ್ ಹೇಳಿದ್ದಾರೆ. ಅವ್ರ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

    ಡಾ. ಟ್ರೆಹನ್, ನಾನು ನಿಮಗೆ ಒಂದು ವಿಶೇಷ ಸಂದೇಶವನ್ನು ನೀಡಲಿದ್ದೇನೆ ಎಂದು ದೇಶದ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಚೀನಾ, ಇಟಲಿ ಮತ್ತು ಡಬ್ಲ್ಯುಎಚ್‌ಒಗಳಿಂದ ನಾನು ವೈಯಕ್ತಿಕ ಮಾಹಿತಿ ಸ್ವೀಕರಿಸಿದ್ದೇನೆ. 23 ರಿಂದ ಅಪಾಯಕಾರಿ ಸಮಯ ಪ್ರಾರಂಭವಾಗಿದೆ. ಮೊದಲ ನಾಲ್ಕು ದಿನಗಳು ಮತ್ತು ನಂತರ ನಾಲ್ಕು ದಿನಗಳನ್ನು ಲೆಕ್ಕ ಹಾಕಬೇಕು. ಈ ಎಂಟು ದಿನಗಳಲ್ಲಿ ಕೊರೊನಾ ವೈರಸ್ ಗಂಟಲಿನಿಂದ ಎದೆಯವರೆಗೆ ತಲುಪುತ್ತದೆ. ಶನಿವಾರ ಒಂಬತ್ತನೇ ದಿನ ಪ್ರಾರಂಭವಾಗಲಿದ್ದು, ಸೋಂಕಿತರ ಸಂಖ್ಯೆ ಏಕಾಏಕಿ ಏರಿಕೆಯಾಗಲಿದೆ ಎಂದಿದ್ದಾರೆ.

    ಈ ಸಂದರ್ಭದಲ್ಲಿ ಕಾಳಜಿ ವಹಿಸುವುದು ಅತ್ಯಗತ್ಯವೆಂದು ಅವರು ಹೇಳಿದ್ದಾರೆ. ಅನವಶ್ಯಕ ಓಡಾಟ ಬೇಡವೆಂದು ಅವರು ಹೇಳಿದ್ದಾರೆ. ಮನೆ ಸಾಮಗ್ರಿಗಳನ್ನು ತರುವಾಗ ಎಚ್ಚರವಿರಲಿ ಎಂದವರು ಹೇಳಿದ್ದಾರೆ. ಮಾಸ್ಕ್ ಕಡ್ಡಾಯವಾಗಿರಲಿ. ಕೈಗಳಿಗೆ ಗ್ಲೌಸ್ ಬಳಸಿ ಎಂದಿದ್ದಾರೆ. ಮನೆಯಲ್ಲಿ ಮಕ್ಕಳು ಅಥವಾ ಹಿರಿಯ ನಾಗರಿಕರಿದ್ದರೆ ಅಪಾಯ ಹೆಚ್ಚು. ಕೊರೊನಾ ವೈರಸ್ ಸೋಂಕಿತ ಆರು ಅಡಿ ದೂರದಲ್ಲಿದ್ದರೂ ಈಗ ಸೋಂಕು ಹರಡುತ್ತದೆ ಎಂದವರು ಹೇಳಿದ್ದಾರೆ.

    ಇಟಲಿಯಲ್ಲಿ ಏನಾಯಿತು ಎಂದು ಅವರು ವಿವರಿಸಿದ್ದಾರೆ. ಮೊದಲ 15 ದಿನಗಳು ಅಲ್ಲಿ ಒಂದು ಅಥವಾ ಎರಡು ಪ್ರಕರಣಗಳು ಬಂದಿದ್ದವು. ಆದರೆ ಒಂಬತ್ತನೇ ದಿನದಿಂದ ಪ್ರಕರಣಗಳು ಹೆಚ್ಚಾದವು. ನಂತರ ಸಾವಿರಾರು ಜನರು ಸೋಂಕಿಗೆ ಒಳಗಾದರು. ಹಾಗಾಗಿ ನಾವು ಎಚ್ಚರಿಕೆಯಿಂದಿರಬೇಕೆಂದು ಅವರು ಹೇಳಿದ್ದಾರೆ.

    ನೆರೆಹೊರೆಯವರ ಭೇಟಿಯನ್ನು ನಿರಾಕರಿಸಿ. ಏಪ್ರಿಲ್ 14 ರ ನಂತರ ಎಲ್ಲವೂ ಸರಿಯಾಗಿರುತ್ತದೆ. ಎಲ್ಲರ ಆರೋಗ್ಯ ಬಹಳ ಮುಖ್ಯವೆಂದು ಅವರು ಹೇಳಿದ್ದಾರೆ. ನಿಮಗೆ ಸೋಂಕು ಇದ್ದಲ್ಲಿ ಅದಕ್ಕೆ ಉತ್ತಮ ಚಿಕಿತ್ಸೆ ಪಡೆಯಿರಿ. ಮನೆಯ ತಿಂಡಿ ಸೇವನೆ ಮಾಡಿ. ಬಿಸಿ ನೀರು ಸೇವಿಸಿ. ಫ್ರಿಜ್ ಆಹಾರ ಸೇವನೆ ಮಾಡಬೇಡಿ. ಒಂದು ಹೊತ್ತಿಗೆ ಅಗತ್ಯವಿರುವ ಆಹಾರವನ್ನು ಮಾತ್ರ ತಯಾರಿಸಿಕೊಳ್ಳಿ ಎಂದವರು ಸಲಹೆ ನೀಡಿದ್ದಾರೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending