ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿಗೂ ಕೊರೊನಾ ವೈರಸ್ ಸೂತಕ..
Published
5 years agoon
By
Adminಕೊರೊನಾ ವೈರಸ್ ಹಿನ್ನಲೆ ಪೊಳಲಿ ಕ್ಷೇತ್ರದಲ್ಲಿ ತೀರ್ಥ ಸ್ನಾನ, ತೀರ್ಥ ಸಂಪ್ರೋಕ್ಷಣೆ ರದ್ದು
ಬಂಟ್ವಾಳ: ವಿಶ್ವದಾದ್ಯಂತ ಜನತೆಯನ್ನು ಅತ್ಯಂತ ಭಯಭೀತರನ್ನಾಗಿಸಿದ ಕೊರೋನಾ ವೈರಸ್.. ಬಿಸಿ ಇದೀಗ ಪುಣ್ಯ ಕ್ಷೇತ್ರಗಳಿಗೆ ತಟ್ಟಿದಂತಾಗಿದೆ.
ಈ ಹಿನ್ನಲೆಯಲ್ಲಿ ದೇವಾಲಯಕ್ಕೆ ಬರುವ ಭಕ್ತರ ಮೇಲೆ ಕೂಡ ತೀವ್ರ ನಿಗಾ ವಹಿಸಲಾಗಿದೆ.
ಇತ್ತ ಕರಾವಳಿಯ ಇತಿಹಾಸ ಪ್ರಸಿದ್ಧ ಪುಣ್ಯ ಕ್ಷೇತ್ರವಾದ ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ನಿನ್ನೆಯಿಂದ ಜಾತ್ರೋತ್ಸವಕ್ಕೆ ಸಕಲ ಸಿದ್ಧತೆಗಳು ಆರಂಭವಾಗಿದೆ.
ಎ.3 ರಿಂದ 13ರ ವರೆಗೆ ಶ್ರೀದೇವಿಗೆ ವಿವಿಧ ರೀತಿಯ ಪೂಜೆ, ವೈದಿಕ ವಿಧಿ-ವಿಧಾನಗಳು ನಡೆಯಲಿದೆ.
ಇನ್ನು ದೇಶಾದ್ಯಂತ ಮಾರಕ ರೋಗ ಕೊರೊನಾ ವೈರಸ್ ಹಬ್ಬಿರುವ ಹಿನ್ನಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಪೊಳಲಿ ದೇವಸ್ಥಾನದಲ್ಲಿ ತೀರ್ಥ, ಬ್ರಹ್ಮಾರ್ಪಣ, ತೀರ್ಥಸ್ನಾನ, ಕಲಶ ಸ್ನಾನಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
You may like
LATEST NEWS
ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ಕೇಸ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಮೃತರ ಸಂಖ್ಯೆ 3ಕ್ಕೆ ಏರಿಕೆ
Published
34 seconds agoon
27/12/2024By
NEWS DESK2ಹುಬ್ಬಳ್ಳಿ: ನಗರದಲ್ಲಿ ಡಿ.22ರಂದು ನಡೆದಿದ್ದಂತ ಸಿಲಿಂಡರ್ ಸ್ಪೋಟ ಘಟನೆಯಲ್ಲಿ 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇವರಲ್ಲಿ ಈಗಾಗಲೇ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಇಂದು ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಹುಬ್ಬಳ್ಳಿಯ ಸಾಯಿ ನಗರದ ಈಶ್ವರದೇವಸ್ಥಾನದಲ್ಲಿ ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿ ಡಿಸೆಂಬರ್.22ರಂದು ಸಿಲಿಂಡರ್ ಸ್ಪೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇವರಲ್ಲಿ ಈಗಾಗಲೇ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಇಂದು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅಯ್ಯಪ್ಪ ಮಾಲಾಧಾರಿ ರಾಜು ಅರ್ಲಾಪೂರ ಎಂಬುವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 3ಕ್ಕೆ ಏರಿಕೆಯಾದಂತೆ ಆಗಿದೆ.
ಅಂದಹಾಗೇ ಈಗಾಗಲೇ ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ.
LATEST NEWS
ಮಂಗಳೂರು: ನ್ಯೂ ಇಯರ್ ಪಾರ್ಟಿಗಳಿಗೆ ಹಿಂದೂಪರ ಸಂಘಟನೆಗಳು ವಿರೋಧ
Published
41 minutes agoon
27/12/2024By
NEWS DESK2ಮಂಗಳೂರು: 2025 ಹೊಸ ವರ್ಷ ಸಂಭ್ರಮಾಚರಣೆಗೆ ದಿನಗಣನೆ ಶುರುವಾಗಿದೆ. ಪಬ್, ರೆಸಾರ್ಟ್, ಹೋಟೆಲ್, ಕ್ಲಬ್‌ಗಳಲ್ಲೂ ಆಚರಣೆಗೆ ಪ್ಲ್ಯಾನ್‌ಗಳು ಜೋರಾಗಿದೆ. ಈ ನಡುವೆ ಕಡಲನಗರಿ ಮಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಮೊದಲೇ ಪಾರ್ಟಿ ಆಯೋಜನೆ ಮಾಡಲಾಗಿದ್ದು, ನ್ಯೂ ಇಯರ್ ನೆಪದಲ್ಲಿ ಡ್ರಗ್ಸ್ ಪಾರ್ಟಿ ನಡೆಯುತ್ತಿರುವುದಾಗಿ ಹಿಂದೂಪರ ಸಂಘಟನೆಗಳು ಆರೋಪ ಮಾಡಿವೆ.
ನ್ಯೂ ಇಯರ್ಗೆ ನಾಲ್ಕು ದಿನದ ಮೊದಲೇ ಅಂದರೆ ಇಂದು ಸಂಜೆ ಮಂಗಳೂರಿನ ಬೋಳಾರದ ಸಿಟಿ ಬೀಚ್ ನಲ್ಲಿ ಇಸ್ರೇಲ್ ಮೂಲದ ಅಂತಾರಾಷ್ಟ್ರೀಯ ಮಟ್ಟದ ಖ್ಯಾತ ಡಿಜೆ ಪ್ಲೇಯರ್ ಸಜಂಕಾ ಕಾರ್ಯಕ್ರಮ ಆಯೋಜಿಸಲಾಗಿದೆ. ಹೊಸ ವರ್ಷದ ನೆಪದಲ್ಲಿ ಡ್ರಗ್ಸ್ ಪಾರ್ಟಿ ಮತ್ತು ಡಿಜೆ ಪ್ಲೇಯರ್ ಸಜಂಕಾ ಹಿಂದೂ ದೇವರ ಹಾಡುಗಳನ್ನು ವಿಚಿತ್ರವಾಗಿ ವಿಡಂಬಿಸಿದ್ದು, ಇದು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಇಂದಿನ ಡಿಜೆ ಪಾರ್ಟಿಗೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಕಾರ್ಯಕ್ರಮಕ್ಕೆ ತಡೆ ನೀಡುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.
ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಗೂ ಮನವಿ ನೀಡಿರುವ ಬಜರಂಗದಳ ಮತ್ತು ದುರ್ಗಾವಾಹಿನಿ ಸಂಘಟನೆಯ ಕಾರ್ಯಕರ್ತರು, ಇಂದು ಸಂಜೆ 6 ಗಂಟೆಗೆ ಪಾರ್ಟಿ ಆಯೋಜನೆಯ ಸ್ಥಳದಲ್ಲಿ ಪ್ರತಿಭಟನೆಗೂ ಕರೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್ ಸಜಂಕಾ ಎಂದು ಬಜರಂಗದಳ ಮುಖಂಡ ಪುನೀತ್ ಅತ್ತಾವರ ಕರೆ ನೀಡಿದ್ದು, ಪ್ರತಿಭಟನೆ ಎದುರಿಸಲು ಸಿದ್ದರಾಗಿ ಎಂಬ ಸಂದೇಶ ರವಾನೆ ಮಾಡಲಾಗಿದೆ.
ಸಜಂಕಾ ಎಂಬ ವ್ಯಕ್ತಿಯು ಈ ಡಿಜೆ ಪಾರ್ಟಿಗೆ ಬರುವ ಬಗ್ಗೆ ಗಮನಕ್ಕೆ ಬಂದಿದೆ. ಈತನ ಪ್ರತಿಯೊಂದು ಹಾಡುಗಳು ಹಿಂದೂ ದೇವರನ್ನು, ಮಂತ್ರಗಳನ್ನು ಅವಹೇಳನ ಮಾಡುವುದಾಗಿದೆ. ಡ್ರಗ್ಸ್ಗೆ ಉತ್ತೇಜನ ಕೊಡುವ ಹಾಡುಗಳು ಹಾಕುತ್ತಾನೆ. ಹೀಗಾಗಿ ಯಾವುದೇ ಕಾರಣಕ್ಕೂ ಇಂತಹ ಡಿಜೆ ಪಾರ್ಟಿಗಳಿಗೆ ಅವಕಾಶ ಕೊಡಬಾರದು. ಸ್ಥಳೀಯರು ಸಹ ಈ ಬಗ್ಗೆ ಮನವಿ ಪತ್ರ ನೀಡಿದ್ದಾರೆ ಎಂದರು.
ಪೊಲೀಸರು ಹಿರಿಯ ಅಧಿಕಾರಿಗಳ ಜೊತೆ ಮಾತನಾಡುವುದಾಗಿ ಹೇಳಿದ್ದಾರೆ. ಸ್ಥಳೀಯರು ಶಾಂತಿ ಭಂಗ ಆಗುವ ಸಾಧ್ಯತೆ ಇದೆ ಎಂದು ಮನವಿ ನೀಡಿದ್ದಾರೆ. ಕಾನೂನಾತ್ಮಕವಾಗಿ ಪಾರ್ಟಿ ನಿಲ್ಲಿಸುವ ಪ್ರಯತ್ನ ಮಾಡುತ್ತೇವೆ. ಸ್ಥಳೀಯರು ಸಹ ಪ್ರತಿಭಟನೆ ಮಾಡುವುದಾಗಿ ಹೇಳಿದ್ದಾರೆ. ಪೊಲೀಸರು ಸಂಘರ್ಷಕ್ಕೆ ಅವಕಾಶ ಕೊಡಲ ಎಂದು ತಿಳಿಸಿದ್ದಾರೆ ಎಂದಿದ್ದಾರೆ.
ಮಂಗಳೂರು/ಬೆಂಗಳೂರು: ಕನ್ನಡದ ‘ಮುದ್ದುಲಕ್ಷ್ಮಿ’ ಸೇರಿದಂತೆ ಹಲವು ಸೀರಿಯಲ್ನಲ್ಲಿ ನಟಿಸಿದ ನಟ ಚರಿತ್ ಬಾಳಪ್ಪ ಪರಿಚಯವಿದ್ದ ಗೆಳತಿಯ ಮೇಲೆ ಲೈಂ*ಗಿಕ ದೌ*ರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು ಆರ್ಆರ್ ನಗರ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತೆಲುಗಿನಲ್ಲೂ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಗುರುತಿಸಿಕೊಂಡಿದ್ದಾರೆ.
ಚರಿತ್ ಪ್ರೀತಿಸುತ್ತೇನೆ ಎಂದು ಹೇಳಿ ದೈ*ಹಿಕ ಸಂ*ಪರ್ಕಕ್ಕೆ ಒತ್ತಾಯ ಮಾಡಿದ್ದಾರೆ ಎಂದು ಗೆಳತಿ ಆರೋಪ ಮಾಡಿದ್ದಾಳೆ. ಯುವತಿ ವಾಸ ಮಾಡುತ್ತಿದ್ದ ಮನೆಗೆ ಸಹಚರರ ಜೊತೆ ನುಗ್ಗಿದ ಚರಿತ್ ಕಿ*ರುಕುಳ ನೀಡಿದ್ದು ಮಾತ್ರವಲ್ಲದೇ ಯುವತಿ ಬಳಿ ಹಣಕ್ಕೂ ಬೇಡಿಕೆ ಇಟ್ಟಿರುವ ಆರೋಪ ಇದೆ. ಹಣ ಕೊಡದಿದ್ದರೆ ಆಕೆಯ ಖಾ*ಸಗಿ ಫೋಟೋ, ವಿ*ಡಿಯೋ ಹರಿಬಿಡುವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಚರಿತ್ ವಿರುದ್ಧ ಲೈಂ*ಗಿಕ ದೌ*ರ್ಜನ್ಯ, ಹ*ಲ್ಲೆ, ಕೊ*ಲೆ ಬೆ*ದರಿಕೆ ಆರೋಪಗಳು ಕೇಳಿಬಂದಿವೆ. ಯುವತಿ ನೀಡಿದ ದೂರಿನ ಅನ್ವಯ ಆರೋಪಿ ಚರಿತ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಚರಿತ್ ಗೆ ಈಗಾಗಲೇ ಮದುವೆಯಾಗಿ ವಿಚ್ಛೇದನ ಕೂಡ ಪಡೆದಿದ್ದಾರೆ. ಡಿವೋರ್ಸ್ ನಂತರವೂ ಅವರು ಮಾಜಿ ಪತ್ನಿಯ ಜೊತೆ ಕಿರಿಕ್ ಮಾಡಿಕೊಂಡಿದ್ದರು. 2017ರಲ್ಲಿ ನಟಿ ಮಂಜು ಜೊತೆ ವಿವಾಹ ಆಗಿತ್ತು. 2022ರ ಬಳಿಕ ಅವರ ಸಂಸಾರದಲ್ಲಿ ಬಿರುಕು ಮೂಡಿತ್ತು. ನಂತರ ಅವರಿಬ್ಬರು ನ್ಯಾಯಾಲಯದಲ್ಲಿ ವಿಚ್ಚೇದನ ಪಡೆದುಕೊಂಡಿದ್ದರು. ಕೋರ್ಟ್ ಆಜ್ಞೆಯಂತೆ ಡೈವರ್ಸ್ ಪರಿಹಾರ ಹಣಕ್ಕೆ ನೋಟಿಸ್ ಕಳಿಸಿದ್ದಕ್ಕೆ ಮಾಜಿ ಪತ್ನಿಗೆ ಬೆದರಿಕೆ ಹಾಕಿದ್ದಾರೆ ಎಂದು ಚರಿತ್ ಬಾಳಪ್ಪ ವಿರುದ್ಧ ಕಳೆದ ಜೂನ್ ತಿಂಗಳಲ್ಲಿ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.