Thursday, September 29, 2022

ಕೊರೊನಾ : ಉಡುಪಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯಲ್ಲಿ ಸಾರ್ವಜನಿಕರಿಗೆ ಅವಕಾಶ ಇಲ್ಲ..!

ಕೊರೊನಾ : ಉಡುಪಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯಲ್ಲಿ ಸಾರ್ವಜನಿಕರಿಗೆ ಅವಕಾಶ ಇಲ್ಲ..!

ಉಡುಪಿ : ಕೊರೊನಾ ಸೋಂಕಿನ ಹಿನ್ನೆಲೆ ಈ ಬಾರಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯಲ್ಲಿ ಸಾರ್ವಜನಿಕರಿಗೆ ಭಾಗಿಯಾಗುವ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಸ್ಪಷ್ಟನೆ ನೀಡಿದ್ದಾರೆ.

ದೇವಾಲಯಗಳ ನಗರಿ ಎಂದೇ ಖ್ಯಾತಿ ಪಡೆದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಗುರುವಾರ ಕೃಷ್ಣ ಜನ್ಮಾಷ್ಠಮಿ ಹಾಗು ಶುಕ್ರವಾರ  ರಥಬೀದಿಯಲ್ಲಿ  ವಿಟ್ಲ ಪಿಂಡಿ ಮಹೋತ್ಸವ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು ಸೆಪ್ಟಂಬರ್ 21ರವರೆಗೆ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ.

ಮಠವು ಈ ಹಿಂದಿನ ಕೋವಿಡ್19  ಸೂಚನೆಯನ್ನೇ ಪಾಲಿಸಬೇಕಾಗುತ್ತದೆ .ವಿಟ್ಲಪಿಂಡಿ ಆಚರಣೆಗೆ ನೂರು ಜನ ಸೇರುವುದಕ್ಕೆ  ಅವಕಾಶವೂ ಇಲ್ಲ.

ಈ ವಿಚಾರ ಬಗ್ಗೆ ಕೃಷ್ಣ ಮಠದ ಪರ್ಯಾಯ ಸ್ವಾಮೀಜಿ ಜೊತೆ ಮಾತನಾಡಿದ್ದೇನೆ . ಕೃಷ್ಣ ಜನ್ಮಾಷ್ಟಮಿ, ವಿಟ್ಲಪಿಂಡಿ ಆಚರಣೆಯಲ್ಲಿ ಸಾರ್ವಜನಿಕರಿಗೆ ಭಾಗಿಯಾಗುವ ಅವಕಾಶ ಇಲ್ಲ.

ಸರ್ಕಾರದ ನಿಯಮವನ್ನು ಪಾಲಿಸುವುದಾಗಿ ಸ್ವಾಮೀಜಿ ಒಪ್ಪಿಕೊಂಡಿದ್ದಾರೆ. ಸಾಂಪ್ರದಾಯಿಕ ರೀತಿಯಲ್ಲಿ ಅಷ್ಟಮಿ ಮತ್ತು ವಿಟ್ಲಪಿಂಡಿ ಆಚರಣೆ ನಡೆಯುತ್ತದೆ.

ಕೃಷ್ಣ ಮಠಕ್ಕೆ ಬರುವ ಸಾರ್ವಜನಿಕ ರಸ್ತೆ ಗಳನ್ನು ಬಂದ್ ಮಾಡುತ್ತೇವೆ. ಅಷ್ಟಮಿ ಮತ್ತು ವಿಟ್ಲಪಿಂಡಿಯಂದು ಯಾವುದೇ ವೇಷಗಳಿಗೆ ಅವಕಾಶ ಇಲ್ಲ.

ಮಠದ ಸಿಬ್ಬಂದಿ ಮೊಸರು ಕುಡಿಕೆಯನ್ನು ಸಾಂಪ್ರದಾಯಕವಾಗಿ ನಡೆಸುತ್ತಾರೆ .ಸಾರ್ವಜನಿಕರಿಗೆ ಯಾವುದೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಇಲ್ಲ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಲೋಕಕಂಟಕ ನಿವೃತ್ತಿಗಾಗಿ ವೆಂಕಟರಮಣ ದೇಗುಲದಲ್ಲಿ ಸಹಸ್ರ ಚಂಡಿಕಾ ಮಹಾಯಾಗ ಪ್ರಾರಂಭ

ಮಂಗಳೂರು: ಶಾರದಾ ಮಹೋತ್ಸವದ 100ನೇ ವರ್ಷದ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದ ರಾಜಾಂಗಣದಲ್ಲಿ ಶ್ರೀ ಸಹಸ್ರ ಚಂಡಿಕಾ ಮಹಾಯಾಗ ಇಂದು ಪ್ರಾರಂಭಗೊಂಡಿತು.ಲೋಕ ಕಂಟಕ ನಿವೃತ್ತಿಗಾಗಿ ಲೋಕದಲ್ಲಿ ಉಂಟಾದ ಕ್ಷೋಭೆಯ...

ಉಡುಪಿ: ರಸ್ತೆ ಅವ್ಯವಸ್ಥೆ-ಕೋಣಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು...

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...