Connect with us

DAKSHINA KANNADA

ಕರಾವಳಿ ಜಿಲ್ಲೆಗಳಲ್ಲಿ ಕೊರೊನಾ ಅಟ್ಟಹಾಸ: ಅನೇಕ ನಿರ್ಬಂಧಗಳನ್ನು ಹೇರಿದ ರಾಜ್ಯ ಸರ್ಕಾರ..!

Published

on

ಮಂಗಳೂರು/ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಮಹಾಮಾರಿ ಕೊರೊನಾ ವೇಗವಾಗಿ ಹರಡುತ್ತಿದೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಎರಡನೇ ಅಲೆಯ ಆತಂಕದೊಂದಿಗೆ ಕೊರೋನಾ ಪಾಸಿಟಿವ್ ಸಂಖ್ಯೆಗಳು ವೇಗವಾಗಿ ಹೆಚ್ಚಾಗುತ್ತಿರುವುದು ಕಳವಳ ತಂದಿದೆ.

ಇಂದು( ಶುಕ್ರವಾರ ) ಜಿಲ್ಲೆಯಲ್ಲಿ‌ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ 100ರ ಗಡಿ ದಾಟಿದ್ದು 105 ಮಂದಿಯಲ್ಲಿ ಪಾಸಿಟಿವ್ ಧೃಡಪಟ್ಟಿದೆ.

ಆದರೂ ಜಿಲ್ಲೆಯಲ್ಲಿ ಇಂದು ಕೊರೋನಾಗೆ ಯಾರೂ ಬಲಿಯಾಗಿಲ್ಲ ಎಂಬುವುದು ತುಸು ಸಮಾಧಾನ ತಂದಿದೆ. ಜಿಲ್ಲೆಯಲ್ಲಿ ಈವರೆಗೆ 742 ಮಂದಿ ಬಲಿಯಾಗಿದ್ದು ಇಂದು 65 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 35,832 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದರೆ ಇನ್ನೂ ಒಟ್ಟು 604 ಆಕ್ವೀವ್ ಕೇಸ್ ಗಳಿವೆ.

ಉಡುಪಿ ವರದಿ : ಉಡುಪಿಯಲ್ಲಿ ಇಂದು 95 ಕೊರೋನಾ ಪಾಸಿಟಿವ್ ದಾಖಲಾಗಿದೆ. ಮಣಿಪಾಲ ಎಂಐಟಿ ಕ್ಯಾಂಪಸ್ ನಲ್ಲಿ 22 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ.

ಇದುವರೆಗೆ ಎಂಐಟಿ ಕ್ಯಾಂಪಸ್ ನ 1028ಮಂದಿಗೆ ಕೊರೋನಾ ಪಾಸಿಟಿವ್ ಧೃಡಪಟ್ಟಿದೆ. ಈವರೆಗೆ 192 ಮಂದಿ ಕೋವಿಡ್ ನಿಂದ ಉಡುಪಿಯಲ್ಲಿ ಸಾವನ್ನಪ್ಪಿದ್ದಾರೆ.ಜಿಲ್ಲೆಯಲ್ಲಿ 443 ಸಕ್ರೀಯ ಪ್ರಕರಣಗಳಿದ್ದು ಪಾಸಿಟಿವ್ ಪ್ರಕರಣಗಳ ಸಂಖ್ಯೆ 25,389ಕ್ಕೆ ಏರಿಕೆಯಾಗಿದೆ ಎಂದು ಡಿಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ.

ಕಠಿಣ ಮಾರ್ಗಸೂಚಿ ಜಾರಿ : ಇನ್ನು ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಕೊರೊನಾ ಮಾರ್ಗಸೂಚಿ ಇನ್ನೂ ಕಠಿಣವಾಗಲಿದೆ. ವಿದ್ಯಾಗಮ ಸೇರಿದಂತೆ 6ರಿಂದ 9ನೆ ತರಗತಿ ಶಾಲೆಗಳನ್ನು ಸ್ಥಗಿತಗೊಳಿಸಲಾಗಿದೆ. 10, 11 ಮತ್ತು 12ನೆ ತರಗತಿ ಪ್ರಸ್ತುತ ಇರುವಂತೆಯೇ ಮುಂದುವರಿಯಲಿದ್ದು, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ.ಎಂದು ಶಿಕ್ಷಣ ಇಲಾಖೆ ಹೇಳಿದೆ.

ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್ ಗಳ ತರಗತಿಗಳಲ್ಲಿ ಮಂಡಳಿಯ/ವಿ.ವಿ.ಗಳ ಪರೀಕ್ಷೆ ಬರೆಯುವ ಹಾಗೂ ವೈದ್ಯಕೀಯ ಶಿಕ್ಷಣದ ತರಗತಿಗಳನ್ನು ಹೊರತುಪಡಿಸಿ, ವಸತಿ ಶಾಲೆಗಳು ಹಾಗೂ ಬೋರ್ಡಿಂಗ್ ಇರುವ ಶಾಲೆಗಳಲ್ಲಿ 10, 11, 12ನೆ ತರಗತಿಯ ಬೋರ್ಡ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇತರ ಎಲ್ಲ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಬಿಬಿಎಂಪಿ ಸೇರಿದಂತೆ ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಕಲಬುರ್ಗಿ, ಬೀದರ್ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಸಿನಿಮಾ ಹಾಲ್‍ಗಳಲ್ಲಿ ಪರ್ಯಾಯ ಆಸನಗಳಲ್ಲಿ ಗರಿಷ್ಠ ಶೇ.50ರಷ್ಟು ವೀಕ್ಷಕರಿಗೆ ಮಾತ್ರ ಅವಕಾಶ. ಅಲ್ಲದೆ, ಮೇಲ್ಕಂಡ ಜಿಲ್ಲೆಗಳಲ್ಲಿ ಪಬ್, ಬಾರ್, ಕ್ಲಬ್, ರೆಸ್ಟೋರೆಂಟ್‍ಗಳಲ್ಲಿ ಗರಿಷ್ಠ ಗ್ರಾಹಕರ ಸಂಖ್ಯೆ ಶೇ.50ರಷ್ಟು ಮೀರುವಂತಿಲ್ಲ. ಎಂದು ಸ್ಪಷ್ಟಪಡಿಸಲಾಗಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಶೇ.20ರಷ್ಟು ಬೆಡ್ ನಿಗದಿ ಮಾಡಲು ನಿರ್ಧರಿಸಲಾಗಿದೆ. ಮಾಸ್ಕ್ ಧರಿಸುವುದು ಕಡ್ಡಾಯ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳಬೇಕು.

ರಾಜ್ಯಾದ್ಯಂತ ಧಾರ್ಮಿಕ ಸ್ಥಳಗಳಲ್ಲಿ ವೈಯಕ್ತಿಕವಾಗಿ ಪ್ರಾರ್ಥನೆ ಮಾಡಲು ಅವಕಾಶವಿದೆ. ಆದರೆ, ಗುಂಪು ಸೇರುವ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಅಪಾರ್ಟ್‍ಮೆಂಟ್ ಕಾಂಪ್ಲೆಕ್ಸ್ ಗಳಲ್ಲಿ ಸಾಮಾನ್ಯವಾಗಿ ನಿವಾಸಿಗಳು/ಜನರು ಸೇರುವ ಸ್ಥಳಗಳಾದ ಪಾರ್ಟಿ ಹಾಲ್‍ಗಳು/ ಕ್ಲಬ್‍ಗಳು, ಈಜುಕೊಳಗಳು, ಎಲ್ಲ ಜಿಮ್‍ಗಳನ್ನು ಮುಚ್ಚಲ್ಟಟ್ಟಿರುತ್ತವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಯಾವುದೇ ರೀತಿಯ ಪ್ರತಿಭಟನೆ, ರ್‍ಯಾಲಿ, ಮುಷ್ಕರ, ಧರಣಿ ಸತ್ಯಾಗ್ರಹಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸಾರಿಗೆ ಬಸ್‍ಗಳಲ್ಲಿ ಪ್ರಯಾಣಿಕರ ಸಂಖ್ಯೆ ನಿಗದಿಪಡಿಸಿದ ಆಸನದ ವ್ಯವಸ್ಥೆಯನ್ನು ಮೀರುವಂತಿಲ್ಲ. ಕಚೇರಿ ಹಾಗೂ ಇತರೆ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಸಾಧ್ಯವಾದಷ್ಟು ಮನೆಯಿಂದಲೇ ಕೆಲಸ ನಿರ್ವಹಿಸುವ ಅಭ್ಯಾಸ/ವ್ಯವಸ್ಥೆಯನ್ನು ಪಾಲಿಸುವುದು.

ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು ಹಾಗೂ ಜಾತ್ರೆ ಮಹೋತ್ಸವಗಳ, ಮೇಳಗಳು, ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ವಿವಿಧ ಸಭೆ/ಸಮಾರಂಭಗಳಲ್ಲಿ ಭಾಗವಹಿಸುವ ಸಂಬಂಧ ಮಾರ್ಚ್ 12ರ ಸುತ್ತೋಲೆ ಮುಂದುವರಿಯಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ನಿಯಮ ಪಾಲನೆಗೆ ಸ್ಥಳೀಯ ಆಡಳಿತ ಹಾಗೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಮಾಲ್‍ಗಳು, ಮುಚ್ಚಿದ ಪ್ರದೇಶಗಳಲ್ಲಿರುವ ಮಾರ್ಕೆಟ್‍ಗಳು ಹಾಗೂ ಡಿಪಾಟ್‍ಮೆಂಟಲ್ ಸ್ಟೋರ್ ಗಳಲ್ಲಿ ಶಿಷ್ಟಾಚಾರದನ್ವಯ ಕೋವಿಡ್ ಮುನ್ನೆಚ್ಚರಿಕೆ ಪಾಲಿಸಬೇಕು. ನಿಯಮ ಉಲ್ಲಂಘಿಸಿದರೆ ಮೇಲ್ಕಂಡ ಸ್ಥಳಗಳನ್ನು ಕೋವಿಡ್ ಪರಿಸ್ಥಿತಿ ಸುಧಾರಿಸುವವರೆಗೂ ಮುಚ್ಚಲಾಗುವುದು ಎಂದು ಎಚ್ಚರಿಕೆ ನೀಡಲಾಗಿದ್ದು ಈ ತಿಂಗಳ 20ರವರೆಗೆ ಕೋವಿಡ್ ಹೊಸ ಮಾರ್ಗಸೂಚಿ ಅನ್ವಯವಾಗಲಿದೆ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending