Saturday, July 2, 2022

ಮಂಗಳೂರಲ್ಲೂ ಕೊರೊನಾ ಸದ್ದು : ಮಂಗಳೂರು ವಿವಿ ಸೀಲ್ ಡೌನ್..!

ಮಂಗಳೂರು: ಮಂಗಳೂರಿನಲ್ಲೂ ಮಹಾಮಾರಿ ಕೊರೊನಾ ಸದ್ದು ಮಾಡಲಾರಂಭಿಸಿದೆ. ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಲ್ಲಿ ಕೊರೊನಾ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ನಾತಕೋತ್ತರ ತರಗತಿಗಳನ್ನು ರದ್ದು ಮಾಡಲಾಗಿದೆ.

ಜೊತೆಗೆ ವಿಶ್ವವಿದ್ಯಾಲಯ ಪ್ರದೇಶವನ್ನು ಕಂಟೋನ್ಮೆಂಟ್ ಝೋನ್ ಎಂದು ಘೋಷಣೆ ಮಾಡಲಾಗಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಕೆಲವು ವಿದ್ಯಾರ್ಥಿಗಳಲ್ಲಿ ಕೊರೊನಾ ಕಾಣಿಸಿಕೊಂಡಿತ್ತು. ಇದರಿಂದ ಇನ್ನಷ್ಟು ವಿದ್ಯಾರ್ಥಿಗಳಲ್ಲಿ ಕೊರೊನಾ ಹರಡದಂತೆ ತಡೆಯಲು ಒಂದು ವಾರಗಳ ಕಾಲ‌ ಸ್ನಾತಕೋತ್ತರ ತರಗತಿಗಳನ್ನು ರದ್ದುಗೊಳಿಸಿ ವಿವಿ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು, ವಿದ್ಯಾರ್ಥಿಗಳಲ್ಲಿ ಕೊರೊನಾ ಪ್ರಕರಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ತರಗತಿಗಳನ್ನು ರದ್ದುಗೊಳಿಸಲಾಗಿದೆ. ಇಡೀ ವಿಶ್ವವಿದ್ಯಾನಿಲಯ ಪ್ರಸಕ್ತ ವಿದ್ಯಮಾನವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದ್ದು ನಿಗಾ ವಹಿಸಲಾಗಿದೆ.

ವಿಶ್ವವಿದ್ಯಾಲಯ ಕಂಟೋನ್ಮೆಂಟ್ ಝೋನ್ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲೇ  ಇರುವಂತೆ ವ್ಯವಸ್ಥೆ ಮಾಡಲಾಗಿದೆ. ಅವರ ಆರ್​ಟಿಪಿಸಿಆರ್ ತಪಾಸಣೆಯನ್ನು ಆರೋಗ್ಯ ಇಲಾಖೆ ನಡೆಸುತ್ತಿದೆ ಎಂದು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here

Hot Topics

ಅಗ್ನಿಪಥ್‌ ರಾಜಕೀಯ ಪ್ರೇರಿತ ಬಿಜೆಪಿ ಅಸ್ತ್ರ-ಮಾಜಿ ಶಾಸಕ ಲೋಬೋ

ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ನಗರ ಹಾಗು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರಕಾರದ ಅಗ್ನಿಪಥ್‌ ಯೋಜನೆ ವಿರುದ್ದ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗ ಇಂದು...

3ನೇ ಸೌತ್ ಇಂಡಿಯಾ ಪ್ರಾಜೆಕ್ಟ್ ಎಕ್ಸಿಬಿಷನ್‌ನಲ್ಲಿ ಉಜಿರೆ SDM ಇಂಜಿನಿಯರಿಂಗ್ ವಿಭಾಗಕ್ಕೆ ಪ್ರಶಸ್ತಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ, ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ತಿಪಟೂರು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ದಕ್ಷಿಣ ಭಾರತದ ಸುಮಾರು ಹದಿಮೂರು ಎಂಜಿನಿಯರಿಂಗ್ ವಿಭಾಗಗಳಲ್ಲಿ 3ನೇ ಸೌತ್...

ಗೋಹತ್ಯೆ ಕಾನೂನನ್ನು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು: ವಿಹೆಚ್‌ಪಿ ಆಗ್ರಹ

ಮಂಗಳೂರು: ರಾಜ್ಯದಲ್ಲಿ ಗೋಹತ್ಯೆ ಕಾನೂನು ಜಾರಿಗೆ ಬಂದಿದೆ. ಆ ಕಾನೂನು ಪ್ರಬಲವಾಗಿದೆ. ಇದನ್ನು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ವಿಹೆಚ್‌ಪಿಯ ಪ್ರಾಂತ ಗೋರಕ್ಷಾ ಪ್ರಮುಖ್‌ ಕಟೀಲು ದಿನೇಶ್‌ ಪೈ ಹೇಳಿದ್ದಾರೆ.ನಗರದ ಕದ್ರಿಯ...