Saturday, November 27, 2021

ದ.ಕ.ಜಿಲ್ಲೆಯಲ್ಲಿ ಕೊರೊನಾ ಸೃಷ್ಟಿಸಿದೆ ಸಾವಿನ ಸುನಾಮಿ : ಇಂದು ಮತ್ತೆ 15 ಮಂದಿ ಬಲಿ..!

ಮಂಗಳೂರು : ಕರಾವಳಿಯ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸಂಪೂರ್ಣ ಹತೋಟಿಯಲ್ಲಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸುನಾಮಿಯನ್ನೇ ಸೃಷ್ಟಿಸಿದೆ.

ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಪ್ರತಿ ದಿನವೂ 10 ಕ್ಕಿಂತ ಹೆಚ್ಚು ಜನ ಕೊರೊನಾಕ್ಕೆ ಬಲಿಯಾಗುತ್ತಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಮತ್ತು ಸಾವಿನ ಸಂಖ್ಯೆಗಳು ದಿನಾವೂ ಓಡುತ್ತಲಿವೆ. ಇಂದು‌ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆಗಳು ಸಾವಿರದ ಗಡಿ‌ ದಾಟಿವೆ.

ಜೊತೆಗೆ ಕೊರೋನಾ ಮಹಾಮಾರಿ 15 ಮಂದಿಯನ್ನು ಬಲಿ ತಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಕೊರೋನಾಗೆ ಬಲಿಯಾದವರ ಸಂಖ್ಯೆ 1,024 ಕ್ಕೆ ಏರಿಕೆಯಾಗಿದ್ದು, ಇಂದು 1,006 ಕೊರೋನಾ ಪಾಸಿಟಿವ್ ಪ್ರಕರಣಗಳು ಜಿಲ್ಲೆಯಲ್ಲಿ ಧೃಡಪಟ್ಟಿವೆ.

ಇಂದಿನ‌ ಪಾಸಿಟಿವಿಟಿ ರೇಟ್ 10.07% ಎಂದು ಜಿಲ್ಲಾಡಳಿತ ಹೇಳಿದೆ. ಅದೇ ರೀತಿ ಇಂದು 665 ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 6,931 ಆಕ್ವೀವ್ ಪ್ರಕರಣಗಳಿದ್ದು ಈ ವರೆಗೆ ದ.ಕ.ಜಿಲ್ಲೆಯಲ್ಲಿ ಒಟ್ಟು 87,350 ಪಾಸಿಟಿವ್ ಕೇಸ್ ಗಳು ದಾಖಲಾಗಿವೆ

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...