ಕೊರೋನಾ : ಬೇಕಾಬಿಟ್ಟಿ ಬೀದಿ ಸುತ್ತುವವರಿಗೆ ಬಸ್ಕಿ ಶಿಕ್ಷೆ..!!
Published
5 years agoon
By
Adminಕೊರೋನಾ : ಬೇಕಾಬಿಟ್ಟಿ ಬೀದಿ ಸುತ್ತುವವರಿಗೆ ಬಸ್ಕಿ ಶಿಕ್ಷೆ..!!
ಉಡುಪಿ : ಕರಾವಳಿ ನಗರಿ ಉಡುಪಿಯಲ್ಲಿ ಕೊರೋನಾ ಸೋಂಕಿನ ಮೊದಲ ಪ್ರಕರಣ ಧೃಡವಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಗರಿಷ್ಟ ಮುನ್ನೆಚ್ಚರಿಕೆ ವಹಿಸುತ್ತಿದ್ದು ಜಿಲ್ಲೆಯನ್ನು ಸಂಪೂರ್ಣ ಲಾಕ್ ಔಟ್ ಮಾಡಿದೆ.
ಈ ಹಿನ್ನೆಲೆಯಲ್ಲಿ ಜನ ಮನೆಯಿಂದ ಹೊರಗೆ ಬಾರದಂತೆ ತೀವ್ರ ಕಟ್ಟೆಚ್ಚರ ವಹಿಸುತ್ತಿದ್ದಾರೆ,
ಮನೆಯಿಂ ಹೊರ ಬಂದವರಿಗೆ ಹಗಲಿಡೀ ಲಾಠಿ ರುಚಿ ತೋರಿಸಿದ್ದ ಕುಂದಾಪುರ ಪೊಲೀಸರು ಸಂಜೆಯಾಗುತ್ತಿದ್ದಂತೆ ಸಂಜೆಯಾಗ್ತಿದ್ದಂತೆ ಕಾರ್ಯಶೈಲಿನೇ ಚೇಂಜ್ ಮಾಡಿದ್ದಾರೆ.
ಮನೆಯಿಂದ ಹೊರಗೆ ಬಂದು ಅನಗತ್ಯ ತಿರುಗಾಡುವವರಿಗೆ- ಬೀದಿ ಸುತ್ತುವವರಿಗೆ ಬಸ್ಕಿ ಶಿಕ್ಷೆ ವಿಧಿಸುತ್ತಿದ್ದಾರೆ.
ಕುಂದಾಪುರ ಪೊಲೀಸರ ಈ ವಿಶಿಷ್ಟ ಕಾರ್ಯಾಚರಣೆ ವರ್ಕ್ ಔಟ್ ಆಗ್ತಿದೆ.
ವಿಡಿಯೋಗಾಗಿ..
You may like
ಮಂಗಳೂರು/ವಿಜಯಪುರ : ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಕದಂಕಕ್ಕೆ ಉರುಳಿದ ಪರಿಣಾಮ ಮೂವರು ಸಾ*ವನ್ನಪ್ಪಿರುವ ಘಟನೆ ವಿಜಾಪುರ-ಸೋಲಾಪುರ ರಾಷ್ಟ್ರೀಯ ಹೆದ್ದಾರಿ 50ರ ಕನ್ನಾಳ ಕ್ರಾಸ್ ಬಳಿ ನಡೆದಿದೆ.
ವಿಜಯಪುರ ನಗರದ ಅಭಿಷೇಕ ಸಾವಂತ್(23), ವಿಜಯಕುಮಾರ್ ಔರಂಗಾಬಾದ್(24), ರಾಜು ಬಿರಾದಾರ(23) ಮೃ*ತಪಟ್ಟವರು.
ಇದನ್ನೂ ಓದಿ : ಟೀ ಮಾರುವವನ ಯಡವಟ್ಟಿಗೆ 13 ಮಂದಿ ಬಲಿ
ಕಾರಿನಲ್ಲಿ ಐವರು ಸೋಲಾಪುರದಿಂದ ವಿಜಯಪುರಕ್ಕೆ ವಾಪಾಸ್ಸಾಗುತ್ತಿದ್ದಾಗ ಅಪಘಾ*ತ ಸಂಭವಿಸಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮುಂಬೈ: ಮಹಾರಾಷ್ಟ್ರದಲ್ಲಿ ರೈಲು ದುರಂತ ಸಂಭವಿಸಿ 13 ಮಂದಿ ಮೃತಪಟ್ಟು 15 ಮಂದಿ ಗಾಯಗೊಂಡಿದ್ದಾರೆ. ಈ ರೈಲು ದುರಂತಕ್ಕೆ ಟೀ ಮಾರುವವನ ಯಡವಟ್ಟೇ ಕಾರಣ ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಜಲಗಾಂವ್ ರೈಲು ಅಪಘಾತಕ್ಕೆ ಟೀ ಮಾರುವವನೇ ಕಾರಣ, ಆತನಿಂದಲೇ 13 ಮಂದಿ ಬಲಿಯಾಗಿದ್ದಾರೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.
ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೀ ಮಾರುವವನಿಂದಲೇ ಜಲಗಾಂವ್ ರೈಲು ದುರಂತ ಸಂಭವಿಸಿದೆ. ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ಯಾಂಟ್ರಿಯಿಂದ ಬಂದ ಟೀ ಮಾರುವವನೊಬ್ಬ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡಿರುವುದಾಗಿ ಕೂಗಿದ್ದಾನೆ. ಇದನ್ನು ಕೇಳಿಸಿಕೊಂಡ ಉತ್ತರ ಪ್ರದೇಶದ ಶ್ರಾವಸ್ತಿಯ ಮೂಲದ ಇಬ್ಬರು ಅಲ್ಲಿದ್ದ ಇತರರಿಗೂ ತಿಳಿಸಿದ್ದಾರೆ. ಇದರಿಂದ ಗಾಬರಿಗೊಂಡ ಪ್ರಯಾಣಿಕರು ತಮ್ಮ ರಕ್ಷಣೆಗಾಗಿ ರೈಲಿನ ಅಲಾರಾಂ ಚೈನ್‌ನ್ನು ಎಳೆದು ರೈಲನ್ನು ನಿಲ್ಲಿಸಿದ್ದಾರೆ.
ರೈಲಿನಿಂದ ಇಳಿದ ಪ್ರಯಾಣಿಕರು ಪಕ್ಕದ ರೈಲು ಹಳಿಯ ಮೇಲೆ ನಿಂತಿದ್ದಾರೆ. ಇದೇ ವೇಳೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಪ್ರಯಾಣಿಕರು ನಿಂತಿದ್ದ ಹಳಿಯ ಮೇಲೆ ಬಂದಿದೆ. ಪರಿಣಾಮ ಹಳಿಯ ಮೇಲಿಂದ ಇಳಿಯದೇ ಅಲ್ಲೇ ನಿಂತಿದ್ದವರ ಪೈಕಿ 13 ಮಂದಿ ಸಾವನ್ನಪ್ಪಿದ್ದು, 15 ಜನರು ಗಾಯಗೊಂಡಿದ್ದಾರೆ. ಬೆಂಕಿಯಿಂದಾಗಿ ಅಪಘಾತ ಸಂಭವಿಸಿದೆ ಎನ್ನುವುದು ಸುಳ್ಳು, ಸದ್ಯ ಮೃತರ ಪೈಕಿ 10 ಜನರನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.
ರೈಲ್ವೆ ಇಲಾಖೆ ಮೃತರ ಕುಟಂಬಸ್ಥರಿಗೆ 1.5 ಲಕ್ಷ ರೂ. ಪರಿಹಾರ ಘೋಷಿಸಿದೆ. ಸಂಭವಿಸಿದ ಅಪಘಾತದಲ್ಲಿ ರೈಲ್ವೆಯಿಂದ ಯಾವುದೇ ಸಮಸ್ಯೆಯಾಗಿರಲಿಲ್ಲ. 4.45ಕ್ಕೆ ಪುಷ್ಪಕ್ ಎಕ್ಸ್ಪ್ರೆಸ್ ನಿಂತ 20 ನಿಮಿಷಗಳ ಬಳಿಕ 5.05ಕ್ಕೆ ಕರ್ನಾಟಕ ಎಕ್ಸ್‌ಪ್ರೆಸ್ ಬಂದಿದೆ. ಆದರೆ ಜನರು ಹಳಿ ಬಿಟ್ಟು ಕದಡದ ಕಾರಣ ದುರಂತ ಆಗಿದೆ ಎಂದು ರೈಲ್ವೆ ಇಲಾಖೆ ಸ್ಪಷ್ಟನೆ ನೀಡಿದೆ.
DAKSHINA KANNADA
ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ
Published
16 minutes agoon
24/01/2025By
NEWS DESK4ಮಂಗಳೂರು : ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಇಂದು(ಜ.24) ಬಾಳೆಪುಣಿಯ ಸ್ವಗೃಹದಲ್ಲಿ ನಿ*ಧನರಾಗಿದ್ದಾರೆ. ಅವರು ಪತ್ನಿ ಹಾಗೂ ಪುತ್ರನನ್ನು ಅ*ಗಲಿದ್ದಾರೆ.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ 26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಮಂಗಳೂರು ಮಿತ್ರ , ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಸರಳ, ಸಜ್ಜನಿಕೆಯ ಬಾಳೆಪುಣಿ ಅವರು ಜನಾನುರಾಗಿಯಾಗಿದ್ದರು.
ಇದನ್ನೂ ಓದಿ: ಮಾಜಿ ಕ್ರಿಕೆಟಿಗ ಸೆಹ್ವಾಗ್-ಆರತಿ ದಾಂಪತ್ಯದಲ್ಲಿ ಬಿರುಕು ?
ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ನಾಡಿಗೆ ಪರಿಚಯಿಸಿದ ಕೀರ್ತಿ ಗುರುವಪ್ಪ ಬಾಳೆಪುಣಿ ಅವರದು. ಪತ್ರಿಕೋದ್ಯಮದ ಅವರ ಮೇರು ಸಾಧನೆಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ರಾಜ್ಯ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ, ರಾಷ್ಟ್ರೀಯ ಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಅವರ ಮುಡಿಗೇರಿದೆ.
LATEST NEWS
ಮಾಜಿ ಕ್ರಿಕೆಟಿಗ ಸೆಹ್ವಾಗ್-ಆರತಿ ದಾಂಪತ್ಯದಲ್ಲಿ ಬಿರುಕು ?
ಬಂಟ್ವಾಳ : 108 ಆಂಬ್ಯುಲೆನ್ಸ್ ವಾಹನಕ್ಕೆ ಇನ್ನೋವಾ ಕಾರ್ ಡಿಕ್ಕಿ – ವಾಹನಗಳು ಜಖಂ
ಸಚಿವ ಉತ್ತಮ್ ಕುಮಾರ್ ರೆಡ್ಡಿ ಬೆಂಗಾವಲು ಪಡೆಯ 8 ಕಾರುಗಳ ಸರಣಿ ಅಪಘಾತ
ಟಾಕ್ಸಿಕ್, ಕಾಂತಾರ ಎಫೆಕ್ಟ್; ಅರಣ್ಯದಲ್ಲಿ ಚಿತ್ರೀಕರಣಕ್ಕೆ ಹೊಸ ರೂಲ್ಸ್
ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ..? ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ
ನಿಶ್ಚಿತಾರ್ಥಗೊಂಡ ಯುವತಿಯ ಆ ಒಂದು ಪ್ರಶ್ನೆಗೆ ಆತ್ಮಹ*ತ್ಯೆ ಮಾಡಿಕೊಂಡ ಯುವಕ ?
Trending
- BIG BOSS2 days ago
ಗೌತಮಿ-ಧನರಾಜ್ ಬೆನ್ನಲ್ಲೇ ಈ ವಾರ ಫಸ್ಟ್ ಎಲಿಮಿನೇಟ್ ಆಗೋದ್ಯಾರು ?
- BIG BOSS4 days ago
ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಘೋಷಣೆ ಮಾಡಿದ ಕಿಚ್ಚ
- BIG BOSS1 day ago
ಭಾವನೆಗಳ ಮಹಾಪೂರ ನೀನು, ಕನಸುಗಳ ಶಿಖರ ನೀನು: ಭವ್ಯಾಗೆ ತ್ರಿವಿಕ್ರಮ್ ಪ್ರಪೋಸ್
- BIG BOSS4 days ago
ಬಿಗ್ ಬಾಸ್ ಸೀಸನ್ 11ರ ವಿನ್ನರ್ ಒಬ್ಬರಲ್ಲ ಇಬ್ಬರು… ಅಷ್ಟಕ್ಕೂ ಟ್ರೋಫಿ ನೀಡಿದ ಸುಳಿವೇನು ?