Monday, May 17, 2021

ಕೊರೊನಾ ಮಹಾಮಾರಿ ಹೆಚ್ಚಳ: ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಾಗುವುದು: ಸಚಿವ ಡಾ।ಸುಧಾಕರ್

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಏರುಗತಿಯಲ್ಲಿ ಹೆಚ್ಚುತ್ತಿದ್ದು ತುರ್ತು ಪರಿಸ್ಥಿತಿ ಇದೆ ಈ ವೇಳೆ ಹಾಸಿಗೆಗಳ ಸಾಮರ್ಥ್ಯ ಹೆಚ್ಚಿಸುವ ಅಗತ್ಯತೆಯಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.ಎನ್ ಡಿಎಂಎ ಆಕ್ಟ್ ನಂತೆ ಎಲ್ಲಾ ವೈದ್ಯಕೀಯ ಕಾಲೇಜು ಖಾಸಗಿ ಹಾಗೂ ಸರ್ಕಾರಿ ನಾನ್ ಕೋವಿಡ್ ಡಯಾಲಿಸಿಸ್ ಅಂದ್ರೆ ತಾಯಿ-ಮಗುವಿನ ಹಾಸಿಗೆ ಹೊರತು ಪಡಿಸಿ, ಉಳಿದೆಲ್ಲಾ ಹಾಸಿಗೆಗಳನ್ನು ಸಂಪೂರ್ಣ ಕೋವಿಡ್ ಸೋಂಕಿತರಿಗೆ ಮೀಸಲಿಡಲಾಗಿದೆ. ಎಂದು ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನ ವೈದ್ಯಕೀಯ ಕಾಲೇಜಿನಲ್ಲಿ ಮಾತ್ರ ಏಳುವರೆ ಸಾವಿರ ಹಾಸಿಗೆಗಳು ಸಿಗುತ್ತದೆ. ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ 30 ಹಾಸಿಗೆಗಿಂತ ಹೆಚ್ಚಿನ ಹಾಸಿಗೆ ಇರುವ ಆಸ್ಪತ್ರೆಗಳು ಕಡ್ಡಾಯವಾಗಿ ನಾನ್ ಕೋವಿಡ್ ಗೆ ಸೀಮಿತವಾಗಿರಲಿದೆ.

ಶೇಕಡಾ 80ರಷ್ಟು ಕೋವಿಡ್ ಸೋಂಕಿತರಿಗೆ ಮೀಸಲಿಡಲಾಗುವುದು. ಜನರಲ್ ಬೆಡ್ ಮಾತ್ರವಲ್ಲದೆ ಐಸಿಯು ವೆಂಟಿಲೇಟರ್ ಹೆಚ್ ಡಿ ಯು ಹೆಚ್ ಎಫ್ ಎಲ್ ಗೆ ಮೀಸಲಿಡಲಾಗಿದೆ.

ಎಲ್ಲಾ 8ಝೋನ್ ಗಳಲ್ಲಿ ಐಸಿಯುನ ತಾತ್ಕಾಲಿಕ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಹಾಗೇ ಆಕ್ಸಿಜನ್ ಕಾನ್ಸಂಟ್ರೇಟರ್ ಅಂದ್ರೆ ಗಾಳಿಯನ್ನು ಶುದ್ಧ ಮಾಡಿ ಆಕ್ಸಿಜನ್ ತಯಾರಿಸುವ ಯಂತ್ರವನ್ನು ತರಿಸಲಾಗುವುದು ಎಂದರು.

ಅಧಿಕಾರಿಗಳು 24*7 ಕಾರ್ಯ ನಿರ್ವಹಿಸಬೇಕು ಈ ಕುರಿತು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎಂದರು. 40,500 ಜಂಬೋ ಆಕ್ಸಿಜನ್ ಸಿಲಿಂಡರ್ ಬಂದಿರುವುದಾಗಿ ಆರೋಗ್ಯ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ.

ಜನರು ಆತ್ಮವಿಶ್ವಾಸದಿಂದಿರುವಂತೆ ಸಲಹೆ ನೀಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...