ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ ಕಂಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಕೂಡ ಜಿಲ್ಲೆಯಲ್ಲಿ ಮಾತ್ರ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ.
ಸದ್ಯದ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ಅತೀ ಹೆಚ್ಚು ಕೊರೊನಾ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿವೆ. ನಿನ್ನೆ ಒಂದೇ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 320 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ 3173 ಕೊರೊನಾ ಆಕ್ಟಿವ್ ಪ್ರಕರಣಗಳು ಇವೆ.
ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಕೊರೊನಾ ಸೋಂಕು ಹರಡುತ್ತಿದ್ದು, ಜಿಲ್ಲೆಯ ಬೆಳ್ತಂಗಡಿ ಹಾಗೂ ಸುಳ್ಯ ಭಾಗದಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬಂದಿವೆ.
ಬೆಳ್ತಂಗಡಿ ತಾಲೂಕಿನಲ್ಲಿ 6 ದಿನಗಳ ಅವಧಿಯಲ್ಲಿ ಬರೋಬ್ಬರಿ 400 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ.
ಸುಳ್ಯದಲ್ಲೂ 6 ದಿನಗಳ ಅಂತರದಲ್ಲಿ 202 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಖಾತ್ರಿಯಾಗಿದೆ.
ಇನ್ನು ಗ್ರಾಮೀಣ ಭಾಗದಲ್ಲಿ ಕೊರೊನಾ ಮಾರ್ಗಸೂಚಿಯನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಬಿಂದಾಸ್ ಆಗಿ ಹೊರಗೆ ತಿರುಗುತ್ತಿರುವ, ಹೋಂ ಕ್ವಾರಂಟೈನ್ ನಲ್ಲಿರುವ ಸೋಂಕಿತರು ಭೀತಿ ಉಂಟು ಮಾಡಿದೆ.
ಕೊರೊನಾ ಮಾರ್ಗಸೂಚಿ ಉಲ್ಲಂಘಿಸುವ ಸೋಂಕಿತರ ವಿರುದ್ಧ FIR ದಾಖಲಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ.
ಜೊತೆಗೆ ಗ್ರಾಮೀಣ ಭಾಗದಲ್ಲಿ ಹೋಂ ಕ್ವಾರಂಟ್ವೇನ್ ನಲ್ಲಿರುವವರನ್ನು ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಗಳಿಗೆ ದಾಖಲಿಸುವಂತೆ ಜಿಲ್ಲಾಡಾಳಿತ ಸೂಚನೆ ನೀಡಿದೆ.