Sunday, May 16, 2021

ಕೊರೊನಾ ರೌದ್ರಾವತಾರ ಹಿನ್ನೆಲೆ: ಇಂದು ರಾತ್ರಿಯಿಂದ ಲಾಕ್ ಡೌನ್ :ರಾಜ್ಯ ಸರ್ಕಾರದ ಆದೇಶ..!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಾಹಾಮಾರಿಯ ಎರಡನೇ ಅಲೆಯು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ ಎರಡು ವಾರಗಳ ಕಾಲ ಕೊರೋನಾ ಕರ್ಫ್ಯೂ ಜಾರಿಗೊಳಿಸಿ ತೀರ್ಮಾನ ಕೈಗೊಂಡಿದೆ.ರಾಜ್ಯ ಸರ್ಕಾರದ ನಿರ್ಧಾರ ಹಿನ್ನಲೆಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿಯ ಬಿಡುಗಡೆ ಮಾಡಿದ್ದಾರೆ.ವಿಪತ್ತು ನಿರ್ವಹಣಾ ಕಾಯ್ದೆಯಡಿ ಹೊರಡಿಸಿರುವ ಈ ಮಾರ್ಗಸೂಚಿಯು ಇಂದು  ರಾತ್ರಿ 9 ಗಂಟೆಯಿಂದ ಮೇ 12ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿದೆ.

ಇದರನ್ವಯ ಬೆಳಗ್ಗೆ 6ರಿಂದ 10 ಗಂಟೆವರೆಗೆ ಅಗತ್ಯಸೇವೆಯ ಅಂಗಡಿಗಳು ತೆರೆಯಬಹುದು ದಿನಸಿ, ಹಣ್ಣು ತರಕಾರಿ, ಮೀನು ಮಾಂಸ ಅಂಗಡಿ ತೆರೆಯಲು ಅವಕಾಶವಿದೆ.

ಮದ್ಯಂದಗಡಿ, ಹೋಟೆಲ್ ಗಳಲ್ಲಿ ಪಾರ್ಸೆಲ್‍ಗೆ ಅವಕಾಶವಿದ್ದು ಕೃಷಿಗೆ ಸಂಬಂಧಿಸಿದ ಚಟುವಟಿಕೆಗೆ ಯಾವುದೇ ನಿರ್ಬಂಧವಿಲ್ಲ ಬ್ಯಾಂಕ್, ಇ-ಕಾಮರ್ಸ್ ಸೇವೆಗಳಿಗೆ ನಿರ್ಬಂಧ ಇರುವುದಿಲ್ಲ, ಏರ್ಪೋರ್ಟ್‌, ಬಸ್, ಟ್ಯಾಕ್ಸಿಗಳಿಗೆ ಷರತ್ತುಬದ್ಧ ಅವಕಾಶವಿದ್ದು, ಪ್ರಯಾಣಿಸುವವರು ಟ್ರಾವೆಲ್ ದಾಖಲಾತಿ, ಟಿಕೆಟ್ ತೋರಿಸುವುದು ಕಡ್ಡಾಯವಾಗಿದೆ.

ತುರ್ತು ಸೇವೆಗೆ ಮಾತ್ರ ಆಟೋ, ಟ್ಯಾಕ್ಸಿಗೆ ಅವಕಾಶವಿದೆ.  ಮೇ 12ರವರೆಗೆ ಮೆಟ್ರೋ ಸಂಚಾರ ಸಂಪೂರ್ಣ ಬಂದ್ ಆಗಿದೆ. ಅಂತಾರಾಜ್ಯವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.

ಅಂತರ್ ಜಿಲ್ಲಾ ಅಂತರ್ ರಾಜ್ಯ ತುರ್ತು ಸೇವೆಗೆ ಮಾತ್ರ ಅವಕಾಶ. ವೈದ್ಯಕೀಯ ಶಿಕ್ಷಣ, ಕಂದಾಯ, ಗೃಹ ಇಲಾಖೆ, ಅಗ್ನಿಶಾಮಕ ದಳ, ಕಾರಾಗೃಹ, ವಿಪತ್ತು ನಿರ್ವಹಣಾ ಸಿಬ್ಬಂದಿ, ಎಲ್ಲಾ ಡಿಸಿಗಳ ಕಚೇರಿ, ಬಿಬಿಎಂಪಿ ಸಿಬ್ಬಂದಿ, ಇತರೆ ಇಲಾಖೆಗಳ ಕೋವಿಡ್ ಸೇವಾ ಸಿಬ್ಬಂದಿಗೆ ಕೆಲಸಕ್ಕೆ ಹಾಜರಾಗಲು ಅವಕಾಶ ನೀಡಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...