Monday, January 24, 2022

ಜಿಲ್ಲೆಯಲ್ಲಿ ಕೊರೊನಾ ಉಲ್ಬಣ – ನಾಳೆಯಿಂದ ಜೂನ್ 21 ರ ವರೆಗೆ ದ.ಕ ಜಿಲ್ಲೆಯ 17 ಗ್ರಾಂ ಪಂ. ಸೀಲ್ ಡೌನ್ ಗೆ ಜಿಲ್ಲಾಧಿಕಾರಿ ಆದೇಶ..!

ಮಂಗಳೂರು : ಕೊರೊನಾ ಉಲ್ಭಣಗೊಂಡ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ 17 ಗ್ರಾಪಂಗಳನ್ನು ನಾಳೆ ( ಜೂ.14) ಮುಂಜಾನೆಯಿಂದ ಜೂನ್ 21ರ ವರೆಗೆ ಸಂಪೂರ್ಣ ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಜಿಪಂ ಸಿಇಒ ಅವರ ವರದಿ ಆಧರಿಸಿ 50ಕ್ಕಿಂತ ಅಧಿಕ ಕೋವಿಡ್ ಸಕ್ರಿಯ ಪ್ರಕರಣಗಳು ಇರುವ ಗ್ರಾಪಂಗಳನ್ನು ಸೀಲ್ಡೌನ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. 

ಅದರಂತೆ ಮಂಗಳೂರು ತಾಲೂಕಿನ ಕೊಣಾಜೆ ಮತ್ತು ನೀರುಮಾರ್ಗ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯಿಲ, ಉಜಿರೆ ಮತ್ತು ಚಾರ್ಮಾಡಿ ಮುಂದಿನ ಒಂದು ವಾರಗಳ ಕಾಲ ಸಂಪೂರ್ಣ ಸೀಲ್ ಡೌನ್ ಆಗಲಿವೆ.

ಈ 17 ಗ್ರಾಪಂಗಳಿಗೆ ಹೊರಗಿನಿಂದ ಬರುವವರು ಮತ್ತು ಅಲ್ಲಿಂದ ಹೊರಗೆ ಹೋಗುವವರಿಗೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ.

ದ್ಯಕೀಯ ಮತ್ತು ಇತರ ತುರ್ತು ಅಗತ್ಯ ಸೇವೆಗೆ ವಾಹನ ಓಡಾಟಕ್ಕೆ ಅನುಮತಿ ನೀಡಲಾಗುತ್ತದೆ

ಅಲ್ಲದೆ ನರ್ಸಿಂಗ್ ಹೋಂ, ಕ್ಲಿನಿಕ್, ಲ್ಯಾಬ್, ಟಲಿಮೆಡಿಸಿನ್, ರಕ್ತ ಸಂಗ್ರಹ ಕೇಂದ್ರ ಇತ್ಯಾದಿ ತೆರೆಯಲು ಅವಕಾಶ ಕಲ್ಪಿಸಲಾಗಿದೆ.

ಕೆಎಂಎಫ್ ಹಾಲಿನ ಬೂತ್ ಮತ್ತು ರಾಜ್ಯ, ರಾಷ್ಟ್ರ ಹೆದ್ದಾರಿ ಪಕ್ಕದ ಪೆಟ್ರೋಲ್ ಬಂಕ್‌ಗಳನ್ನು ತೆರೆಯಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.  ಗ್ರಾಮಸ್ಥರಿಗೆ ಅಗತ್ಯ ವಸ್ತುಗಳ ಪೂರೈಕೆಗೆ ಗ್ರಾಮಪಡೆಗಳು ಕ್ರಮ ವಹಿಸಲಿದ್ದಾರೆ.

ಕೊರೋನ ಸೋಂಕು ತಗ್ಗಿಸಲು ಕೆಲವು ಕಠಿಣ ನಿರ್ಧಾರ ಕೈಗೊಳ್ಳುವುದು ಅಗತ್ಯವಾಗಿದ್ದು, ನಾಗರಿಕರು ಸಹಕರಿಸಬೇಕು ಎಂದು ಜಿಪಂ ಸಿಇಒ ಡಾ.ಕುಮಾರ್ ಮನವಿ ಮಾಡಿದ್ದಾರೆ.

Hot Topics

ಕೋಟ ಲಾಠಿ ಚಾರ್ಜ್ ಪ್ರಕರಣ: ಹುಸಿಯಾದ ಗೃಹಸಚಿವರ ಭರವಸೆ- ಮತ್ತೆ ಪ್ರತಿಭಟನೆಗೆ ನಿರ್ಧಾರ

ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್‌ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ...

ಮೂಡುಬಿದಿರೆ: ಕಾರು ಢಿಕ್ಕಿ- ಪಾದಾಚಾರಿ ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಾಚಾರಿಯೋರ್ವರು ಹೋಗುತ್ತಿದ್ದಾಗ ರಿಡ್ಸ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.ಸಂಪಿಗೆಯ ಇಡ್ಡಬೆಟ್ಟು ನಿವಾಸಿ 53 ವರ್ಷದ ಹರೀಶ್...

“ಪೂಜಾರಿಯವರನ್ನು ನಡು ನೀರಲ್ಲಿ ಕೈ ಬಿಟ್ಟು ಓಡಿಹೋದ ಮಹಾನುಭಾವ”

ಮಂಗಳೂರು: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ನಡು ನೀರಲ್ಲಿ ಕೈ ಬಿಟ್ಟು ಓಡಿಹೋದ ಮಹಾನುಭಾವ. ಈ ಸಮಾಜದ ಯುವಕರನ್ನು ಪೂಜಾರಿಯವರಿಂದ ದೂರ ಮಾಡಿದ ಶ್ರೇಯಸ್ಸು ಯಾರಿಗಿದೆ ಎಂದರೆ ಅದೇ ಮಹಾನುಭಾವನಿಗೆ ಎಂದು...