LATEST NEWS
ಎಕ್ಸ್‌ಪರ್ಟ್ ಕಾಲೇಜಿನಲ್ಲಿ ಕೋವಿಡ್ ಲಸಿಕಾ ಶಿಬಿರ
ಮಂಗಳೂರು: ನಗರ ಹೊರವಲಯದ ವಳಚ್ಚಿಲ್‌ನ ಎಕ್ಸ್‌ಪರ್ಟ್ ಸಂಸ್ಥೆಯ ಸಿಬ್ಬಂದಿ ಹಾಗೂ 18 ವರ್ಷದ ಮೇಲ್ಪಟ್ಟ ಸ್ಥಳೀಯರಿಗೆ ಕೋವಿಡ್ ಲಸಿಕಾ ಶಿಬಿರವನ್ನು ನಿನ್ನೆ ಮಂಗಳೂರಿನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ನಡೆದ ಲಸಿಕೆ ಶಿಬಿರಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಎಕ್ಸ್‌ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್. ನಾಯಕ್, ‘ಸಣ್ಣ ಮಕ್ಕಳಿಗೆ ನಾವು ನಾನಾ ಲಸಿಕೆಗಳನ್ನು ಕೊಡಲು ಹಿಂಜರಿಯುವುದಿಲ್ಲ. ಆದರೆ ಜನಸಾಮಾನ್ಯರು ಇಂದು ಕೋವಿಡ್ ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವುದು ಸರಿಯಲ್ಲ. ಈ ಹಿನ್ನೆಲೆಯಲ್ಲಿ ಲಸಿಕೆ ಹಾಕಿಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಂಸ್ಥೆಯು ಲಸಿಕಾ ಶಿಬಿರವನ್ನು ಆಯೋಜಿಸಲಾಯಿತು ಎಂದು ಹೇಳಿದರು.
ಕೊರೋನಾಕ್ಕೆ ಲಸಿಕೆ ಒಂದೇ ಪರಿಹಾರವಾಗಿದೆ. ಎಲ್ಲರೂ ಶೀಘ್ರದಲ್ಲಿ ಲಸಿಕೆ ಪಡೆದುಕೊಂಡು ಸಮಾಜವನ್ನು ಆರೋಗ್ಯಯುತ ಸಮಾಜವಾಗಿ ಪರಿವರ್ತಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ಪಡೆದುಕೊಳ್ಳಲು ಜನ ಮುಂದೆ ಬರಬೇಕು ಎಂಬ ದೃಷ್ಟಿಯಿಂದ ಸಂಸ್ಥೆಯು ಲಸಿಕೆ ಅಭಿಯಾನ ಆಯೋಜಿಸಲಾಗಿದೆ. ಲಸಿಕೆ ಅಭಿಯಾನ ಯಶಸ್ವಿಯಾಗಲು ಜಿಲ್ಲಾಡಳಿತದೊಂದಿಗೆ ಸ್ಥಳೀಯರು ಕೈ ಜೋಡಿಸಬೇಕು ಎಂದು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಹೇಳಿದರು.
ಶೀಘ್ರದಲ್ಲೇ ಶಿಕ್ಷಣ ಸಂಸ್ಥೆ ತೆರೆಯುವ ಪ್ರಸ್ತಾಪವು ಸರಕಾರದ ಮುಂದೆ ಇರುವುದರಿಂದ ಶಿಕ್ಷಣ ಕ್ಷೇತ್ರದಲ್ಲಿ ದುಡಿಯುವ ಎಲ್ಲರೂ ಶೀಘ್ರದಲ್ಲೇ ಲಸಿಕೆ ಪಡೆದುಕೊಳ್ಳಬೇಕು ಎಂದು ಹೇಳಿದರು.
ಸಂಸ್ಥೆಯ ತಾಂತ್ರಿಕ ವಿಭಾಗದ ನಿರ್ದೇಶಕ ಅಂಕುಶ್ ಎನ್.ನಾಯಕ್, ಉಪಪ್ರಾಂಶುಪಾಲ ಎಸ್. ರಾಘವೇಂದ್ರ ಶೆಣೈ, ವೈದ್ಯಾಧಿಕಾರಿ ಡಾ. ಮರಿಯನ್ ರಶೀದಾ, ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
bengaluru
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ
ಬೆಂಗಳೂರು: ಸೈಬರ್ ಖದೀಮರ ಉಪಟಳ ಎಲ್ಲಿಯವರೆಗೆ ತಲುಪಿದೆ ಎಂದರೆ ಅದು ಇದೀಗ ಕರ್ನಾಟಕ ಹೈಕೋರ್ಟ್ ಕಲಾಪಕ್ಕೂ ತಟ್ಟಿದೆ.
ಮಂಗಳವಾರ ಸಂಜೆ ಹೈಕೋರ್ಟಿನ ಹಾಲ್ ನಂಬರ್ 6, 12, 18, 23, 24, 26 ಮತ್ತು ಇತರ ಹಾಲ್ ಗಳಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿದ್ದಾಗಲೇ ಲಿಂಕ್ ಮೂಲಕ ಭಾಗವಹಿಸಿದ್ದ ಅಪರಿಚಿತ ಆರೋಪಿಗಳು ಅಶ್ಲೀಲ ಚಿತ್ರಗಳನ್ನು ಪ್ರದರ್ಶಿಸಿ ಕಲಾಪಕ್ಕೆ ಅಡ್ಡಿ ಪಡಿಸಿದ್ದಾರೆ. ಈ ಬಗ್ಗೆ ಹೈಕೋರ್ಟಿನ ಕಂಪ್ಯೂಟರ್ ವಿಭಾಗದ ರಿಜಿಸ್ಟ್ರಾರ್ ಅವರು ಸೆಂಟ್ರಲ್ ಸೆನ್ ಕ್ರೈಂ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಹೈಕೋರ್ಟ್ ಪೀಠಗಳಲ್ಲಿ ಲೈವ್ ಸ್ಟ್ರೀಮಿಂಗ್ ಮತ್ತು ವೀಡಿಯೋ ಕಾನ್ಫರೆನ್ಸ್ ಸೌಲಭ್ಯವನ್ನು ಕೆಲವು ದಿನಗಳ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ. ಬುಧವಾರ ಸಂಜೆ ಹೈಕೋರ್ಟ್ ಕಲಾಪದ ವೇಳೆ ವೀಡಿಯೋ ಕಾನ್ಫರೆನ್ಸ್ ಆ್ಯಪ್ ಅನ್ನು ಹ್ಯಾಕ್ ಮಾಡಿ ಆಶ್ಲೀಲ ದೃಶ್ಯಾವಳಿಯನ್ನು ಅಪ್ ಲೋಡ್ ಮಾಡಲಾಗಿತ್ತು. ಅಶ್ಲೀಲ ವೀಡಿಯೋ ಪ್ರಸಾರವಾಗುತ್ತಿದ್ದಂತೆ ಅದನ್ನು ನಿರ್ವಹಣೆ ಮಾಡುತ್ತಿದ್ದ ಸಿಬಂದಿಯನ್ನು ಕರೆದು ವಿಚಾರಿಸಿದಾಗ ಸೈಬರ್ ಹ್ಯಾಕ್ ಆಗಿರುವ ವಿಷಯ ಗೊತ್ತಾಗಿದೆ. ಕೂಡಲೇ ವೀಡಿಯೋ ಕಾನ್ಫರೆನ್ಸ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ.
LATEST NEWS
‘ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ’, ‘ಮುಸ್ಲಿಮರನ್ನು ರಕ್ಷಿಸುತ್ತೇನೆ’ ಎಂದ ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಮುಸ್ಲಿಂ ಧರ್ಮ ಗುರುಗಳ ಸಮಾವೇಶಕ್ಕೆ ಬಂದಿದ್ದ ಸಿಎಂ ಸಿದ್ದರಾಮಯ್ಯ ಅವರು, “ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ, ನಿಮ್ಮನ್ನು ನಾನು ರಕ್ಷಣೆ ಮಾಡುತ್ತೇನೆ” ಎಂದು ಹೇಳಿದ ಮಾತಿಗೆ ಪ್ರತಿಪಕ್ಷ ನಾಯಕರು ಭಾರಿ ಆಕ್ರೋಶ ವ್ಯಕ್ತಪಡಿಸಿದ್ದು, ಇದು ವಿವಾದಕ್ಕೆ ಕಾರಣಾಗಿದೆ.
ದೊಡ್ಡ ಕೋಮುವಾದಿಗಳು ಎಂದರೆ ಅದು ಕಾಂಗ್ರೆಸ್ನವರು. ಸುಖದಲ್ಲಿ ತೇಲುತ್ತಿರುವ ವ್ಯಕ್ತಿ ಅಂದರೆ ಅದು ಸಿದ್ದರಾಮಯ್ಯ. ಮುಖ್ಯಮಂತ್ರಿಗಳು ಅಲ್ಪಸಂಖ್ಯಾತರು, ಬಹುಸಂಖ್ಯಾತರು ಅಂತ ಪ್ರತ್ಯೇಕಿಸೋದನ್ನು ಬಿಡಬೇಕು. ರಾಜಕೀಯ ಸಲುವಾಗಿ ಬರೀ ಮತಕ್ಕಾಗಿ ತುಷ್ಟೀಕರಣ ಮಾಡುತ್ತಿದ್ದಾರೆ. ನಮ್ಮ ಸಮಾಜದಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದರೆ ಅದು ಕಾಂಗ್ರೆಸ್ ಎಂದು ಈ ಹೇಳಿಕೆ ವಿರುದ್ಧ ಬಿಜೆಪಿ ಶಾಸಕ ಡಾ.ಅಶ್ವತ್ಥ್ ನಾರಾಯಣ ಎಂದು ಕಿಡಿಕಾರಿದ್ದಾರೆ.
ಟಿಪ್ಪು ಅಂದ್ರೆ ಸಿದ್ದರಾಮಯ್ಯಗೆ ಬಹಳ ಪ್ರೀತಿ. ಮುಖ್ಯಮಂತ್ರಿಗಳು ಆಡಿದ ಮಾತು ದೇಶ ಮತ್ತು ರಾಜ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಹಿಂದೆ ಟಿಪ್ಪು ಮೇಲೆ ಅತಿಯಾದ ಪ್ರೀತಿ ತೋರಿಸಿ ಏನಾಯಿತು? ಇವರು ಮತ್ತೆ ಹಿಂದುಗಳನ್ನು ಎರಡನೇ ದರ್ಜೆ ಪ್ರಜೆಗಳ ರೀತಿ ನೋಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಸುವರ್ಣ ಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಸಮಾನತೆ ಇರಬೇಕು. ಟಿಪ್ಪು ಜಯಂತಿ, ಶಾದಿ ಭಾಗ್ಯ, ಮುಸ್ಲಿಂ ವಿವಾಹಕ್ಕೆ ಧನ ಸಹಾಯ ಈ ರೀತಿಯ ಕಾರ್ಯಕ್ರಮಗಳನ್ನ ತಂದು ಒಂದು ವರ್ಗವನ್ನು ಓಲೈಸುತ್ತಿದ್ದಾರೆ. ಮುಸ್ಲಿಮರನ್ನು ವೋಟ್ ಬ್ಯಾಂಕ್ ದಾಳವಾಗಿ ಕಾಂಗ್ರೆಸ್ ಬಳಕೆ ಮಾಡಿಕೊಳ್ಳುತ್ತಿದೆ ಎಂದರು.
ಸಿಎಂ ಸಿದ್ದರಾಮಯ್ಯ ಅನ್ಕೊಂಡಿದ್ದಾರೆ ಮುಸ್ಲಿಮರು ಈಗ ಹುಟ್ಟಿದ್ದಾರೆ ಎಂದು, ಆದರೆ ಅವರಿಗೆ ದೇಶ ಯಾವ ಅನ್ಯಾ ಮಾಡಿದೆ..? ಬಿಜೆಪಿ ಸರ್ಕಾರ ಇದ್ದಗಲೂ ಮುಸ್ಲಿಮರಿಗೆ ಸಹಾಯ ಮಾಡಿದೆ. ಆದರೆ ಇದೀಗ ಸಿದ್ದರಾಮಯ್ಯ ಹೇಳುತ್ತಿರುವುದು ಸರಿಯಾ..? ಇದೀಗ ಅವರು ಧರ್ಮದ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಮುಸಲ್ಮಾನರು ನಮ್ಮ ಪಕ್ಷದಲ್ಲೂ ಇದ್ದಾರೆ. ಆದರೆ ಕಾಂಗ್ರೆಸ್ನವರು ಓಲೈಸಲು ಇಂಥ ಹೇಳಿಕೆ ನೀಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದರು. ಮುಸ್ಲಿಮರ ಬಗ್ಗೆ ಹೇಳುವ ಇವರು, ಅವರನ್ನು ಸಿಎಂ ಮಾಡಿದ್ದಾರೆಯೇ, ಅಧ್ಯಕ್ಷರನ್ನಾಗಿ ಮಾಡಿದ್ದಾರಾ? ನ್ಯಾಯ ಕೊಡಿಡುತ್ತೇನೆ ಅಂದರೇ, ಏನು ಅನ್ಯಾಯ ಆಗಿದೆ ? ಸರ್ವರಿಗೂ ಸಮಪಾಲು, ಸಮಬಾಳು ಅಂತ ನಮ್ಮ ಅಂಬೇಡ್ಕರ್ ಹೇಳಿದ್ದಾರೆ. ಓಲೈಕೆ ಮಾಡುವ ಕೆಲಸ ಆಗಬಾರದು. ಮುಖ್ಯಮಂತ್ರಿಗಳು ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎಂದು ಸಲಹೆ ನೀಡಿದರು.
bengaluru
ಅನಿಮಲ್ ಸಿನಿಮಾ ನೋಡಿದ್ರಾ..? ನಟಿಯರ ಹಾಟ್ ಸೀನ್ ವೈರಲ್..!
Film: ಬಾಲಿವುಡ್ ನ ಅನಿಮಲ್ ಸಿನಿಮಾ ಈಗಾಗಲೆ ಬಿಡುಗಡೆಗೊಂಡು ಒಂದೇ ದಿನಕ್ಕೆ ನೂರು ಕೋಟಿ ಕ್ಲಬ್ ಸೇರಿದ ಬೆನ್ನಲೆ ಆ ಚಿತ್ರದಲ್ಲಿ ಕಾಣಿಸಿಕೊಂಡ ಹಸಿಬಿಸಿ ಸೀನ್ ಗಳು ವೈರಲ್ ಆಗ್ತಾ ಇದೆ.
ಆ ಸಿನಿಮಾದಲ್ಲಿ ನಟನಾಗಿ ರಣಬೀರ್ ಜೊತೆ ನಟಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಕೆಲವೊಂದು ದೃಶ್ಯಗಲ್ಲಿ ರಣಬೀರ್ ಜೊತೆ ನಟಿ ತೃಪ್ತಿ ದಿಮ್ರಿಗೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
ಇವರಿಬ್ಬರ ವಿಡಿಯೋಗಳು ವಿಡಿಯೋ ಸಾಮಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲೇ ತೃಪ್ತಿ ದಿಮ್ರಿಯ ನಟಿಯ ಫಾಲೋವರ್ಸ್ ಸಂಖ್ಯೆಯು 1.5 ಮಿಲಿಯನ್ ಗೆ ತಲುಪಿದೆ.
ಅನಿಮಲ್ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ನಟಿಸಿದ ನಟಿಯ ಪಾತ್ರದಿಂದ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗ್ತ ಇದೆ ರಣಬೀರ್ ಜೊತೆ ನಟಿ ತೃಪ್ತಿ ದಿಮ್ರಿಯು ಹಾಟ್ ಸೀನ್ ಗಳು ಸಾಮಜಿಕ ಜಾಲತಾಣದಲ್ಲಿ ವೈರಲ್ ಆಗ್ತಾ ಇದೆ.
ಡಿ. 1ರಂದು ತೆರೆಗೆ ಬಂದ ಬೆನ್ನಲೆ ಸಿನಿಮಾದ ಅಬ್ಬರ ಮೇಲಕ್ಕೇರಿದೆ. ಈ ಸಿನಿಮಾ ರಿಲೀಸ್ ಆದ ಬೆನ್ನಲೆ ದಿನಕ್ಕೆ 100 ಕೋಟಿ ಕಲೆಕ್ಷನ್ ಪಡೆದಿದ್ದು, ಮೂರು ದಿನದ ಒಟ್ಟು ಕಲೆಕ್ಷನ್ 300ಕೋಟಿಯಾಗಿದೆ.
- Ancient Mangaluru6 days ago
ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ
- DAKSHINA KANNADA6 days ago
ಉಡುಪಿ : ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ
- bangalore5 days ago
ಇವ್ರು ಯಾರಂತ ಗೊತ್ತಾಯ್ತ ಫ್ರೆಂಡ್ಸ್? ನ್ಯೂ ಕಪಲ್ಸ್ ಫಾರಿನ್ ಟ್ರಿಪ್ ಅಂತೆ..!
- bangalore4 days ago
ದೈವಕೋಲ ವೀಕ್ಷಣೆಗೆ ಟೂರ್ ಪ್ಯಾಕೇಜ್ – ತುಳುವರ ಧಾರ್ಮಿಕ ಭಾವನೆಗೆ ಪೆಟ್ಟು..!