ಕಲಬುರ್ಗಿ: ಕಲಬುರಗಿಯಲ್ಲಿ ನಿನ್ನೆ ಮೃತಪಟ್ಟಿದ್ದ ವ್ಯಕ್ತಿಗೆ ಕೊರೋನ ವೈರಸ್ ದೃಢಪಟ್ಟಿದ್ದು, ಈ ಮೂಲಕ ಕೊರೋನ ವೈರಸ್ ನಿಂದ ದೇಶದಲ್ಲಿ ಮೊದಲ ಸಾವು ಉಂಟಾಗಿದೆ.
ಮೃತ ವ್ಯಕ್ತಿ ಫೆ.29ರಂದು ಸೌದಿಯಿಂದ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಮಾ.5ರಂದು ಅವರ ಪರೀಕ್ಷೆ ನಡೆಸಿ, ಮಾ.6ರಂದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಾ.9ರಂದು ಅವರು ಸ್ವ ಇಚ್ಛೆಯಿಂದ ಹೈದರಾಬಾದ್ಗೆ ಹೋಗಿದ್ದರು. ಬಳಿಕ ಅಲ್ಲಿಂದ ಹಿಂದಿರುಗಿದ ಅವರು ನಿನ್ನೆ ಕಲಬುರಗಿಯಲ್ಲಿ ಮೃತಪಟ್ಟಿದ್ದರು.
ಮೊದಲು ಮೃತ ವ್ಯಕ್ತಿಯಲ್ಲಿ ಯಾವುದೇ ಕೊರೋನ ಸೋಂಕು ದೃಢಪಟ್ಟಿಲ್ಲ ಎಂದು ಹೇಳಲಾಗಿತ್ತು. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು, ಕಲಬುರಗಿಯ ವೃದ್ಧ ಕೊರೋನ ವೈರಸ್ನಿಂದ ಮೃತಪಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಆದರೆ ಇಂದು ಮೃತ ವ್ಯಕ್ತಿ ಕೊರೋನದಿಂದಲೇ ಮೃತಪಟ್ಟಿದ್ದಾರೆ ಎಂದು ದೃಢಪಟ್ಟಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇದನ್ನು ಸ್ಪಷ್ಟಪಡಿಸಿದೆ.
‘ಮೃತ ವ್ಯಕ್ತಿಯ ಮನೆಯವರಿಗೂ ಈಗಾಗಲೇ ಕೊರೋನ ತಪಾಸಣೆ ನಡೆಸಲಾಗಿದ್ದು, ಯಾರೊಬ್ಬರಿಗೂ ವೈರಸ್ ತಗುಲಿರುವುದಾಗಲಿ ಅಥವಾ ಆ ಲಕ್ಷಣಗಳು ಕಂಡು ಬಂದಿರುವುದಾಗಲಿ ಇಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಅವರ ಅಂತ್ಯಕ್ರಿಯೆ ಸಂಪೂರ್ಣ ಉಸ್ತುವಾರಿಯನ್ನು ತಾಲೂಕು ಆರೋಗ್ಯಾಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ ಮತ್ತು ತಂಡ ವಹಿಸಿಕೊಂಡು ಎಲ್ಲಾ ರೀತಿಯ ಮುಂಜಾಗ್ರತೆ ಮತ್ತು ನಿಯಂತ್ರಣ ಕೈಗೊಂಡು ವರದಿ ನೀಡಲು ಜಿಲ್ಲಾ ಆರೋಗ್ಯ ಇಲಾಖೆ ಆದೇಶ ನೀಡಿದೆ.
ವೃದ್ಧ ಕೊರೋನದಿಂದ ಮೃತಪಟ್ಟಿದ್ದಾರೆ. ಈ ಬಗ್ಗೆ ವೈದ್ಯಕೀಯ ವರದಿ ಬಂದ ಬಳಿಕ ಮಾಹಿತಿ ನೀಡಿದ್ದೇವೆ. ಕೊರೋನ ಹರಡದಂತೆ ಮುಂಜಾಗೃತಾ ಕ್ರಮ ವಹಿಸಲಾಗಿದೆ ಎಂದು ಬಿ.ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ರಾಜ್ಯದಲ್ಲಿ ಕೊರೋನ ವೈರಸ್ ಸೋಂಕಿತರ ಸಂಖ್ಯೆ ಐದಕ್ಕೆ ಏರಿದ್ದು, ಸೋಂಕು ಪೀಡಿತ ವ್ಯಕ್ತಿಯನ್ನು ಪ್ರತ್ಯೇಕವಾಗಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಮಂಗಳೂರು/ನವದೆಹಲಿ : ಮೊಸಳೆಯ ತಲೆಬುರುಡೆ ಕಳ್ಳಸಾಗಣೆಗೆ ಯತ್ನಿಸಿದ ಆರೋಪದಲ್ಲಿ ಕೆನಡಾ ಮೂಲದ ವ್ಯಕ್ತಿಯನ್ನು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಟರ್ಮಿನಲ್ 3ರಲ್ಲಿ ಕೆನಡಾ ಮೂಲದ ವ್ಯಕ್ತಿ ಮಾಂಟ್ರಿಯಲ್ಗೆ ವಿಮಾನ ಹತ್ತಲು ಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಮೊಸಳೆಯ ಮರಿಯನ್ನು ಹೋಲುವ ಸುಮಾರು 770 ಗ್ರಾಂ ತೂಕದ ಚೂಪಾದ ಹಲ್ಲುಗಳನ್ನು ಹೊಂದಿರುವ ತಲೆಬುರುಡೆ ಪತ್ತೆಯಾಗಿದೆ.
ದೆಹಲಿ ಸರ್ಕಾರದ ಅಧೀನದಲ್ಲಿರುವ ಅರಣ್ಯ ಮತ್ತು ವನ್ಯಜೀವಿ ಇಲಾಖೆಯು ನಡೆಸಿದ ಶೋಧ ಕಾರ್ಯದಲ್ಲಿ ಅದು ಮೊಸಳೆ ಮರಿಯ ತಲೆಬುರುಡೆ ಎಂಬುದಾಗಿ ದೃಢಪಟ್ಟಿದೆ. 1972ರ ವನ್ಯ ಜೀವಿ ಕಾಯ್ದೆಯಡಿಯಲ್ಲಿ ಸಂರಕ್ಷಿತ ಜಾತಿಗೆ ಸೇರಿದ ತಲೆಬುರುಡೆ ಇದಾಗಿದೆ. ಹೆಚ್ಚಿನ ವೈಜ್ಞಾನಿಕ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ಬೆಂಗಳೂರು: ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಮೋಸ್ಟ್ ವಾಂಟೆಡ್ 6 ಜನ ನಕ್ಸಸಲರು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದರು. ಬಳಿಕ ಅವರನ್ನ ವಶಕ್ಕೆ ಪಡೆದ ಪೊಲೀಸರು ಇಂದು ಅವರನ್ನು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದಾರೆ.
ಹೌದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಂಕಿರಣದ ಎನ್ಐಐ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಕ್ಸಲರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ. ಇದಕ್ಕೂ ಮೊದಲು 6 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟ್ ಮುಂದೆ ಇದೀಗ ಹಾಜರುಪಡಿಸಿದ್ದಾರೆ.
ಮಂಗಳೂರು/ಬೆಂಗಳೂರು : ಅತ್ಯಾ*ಚಾರ, ಅಶ್ಲೀ*ಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದೆ. ಈ ಮೂಲಕ ಹಲವು ತಿಂಗಳುಗಳ ಬಳಿಕ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಯಿತು.
ಈ ಸಂದರ್ಭ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ, ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಅ*ತ್ಯಾಚಾರ ಆರೋಪ ಹಾಗೂ ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಜನವರಿ 13ಕ್ಕೆ ವಿಚಾರಣಾಧೀನ ಕೋರ್ಟ್ನಲ್ಲಿ ಆರೋಪ ನಿಗದಿ ಮಾಡುವುದಕ್ಕೆ ನಿಗದಿಯಾಗಿತ್ತು. ಇದನ್ನು ಪ್ರಶ್ನಿಸಿ ಪ್ರಜ್ವಲ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಪ್ರಜ್ವಲ್ಗೆ ಸ್ವಲ್ಪ ರಿಲೀಫ್ ಕೊಟ್ಟಿದೆ.
2024ರಲ್ಲಿ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದಂತೆ ಅಶ್ಲೀ*ಲ ವೀಡಿಯೋಗಳು ವೈರಲ್ ಆಗಿದ್ದವು. ಇದು ದೇಶವನ್ನೇ ಬೆಚ್ಚಿ ಬೀಳಿಸಿತ್ತು. ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.