Home ದೇಶ-ವಿದೇಶ ಕೇರಳದಲ್ಲಿ ಒಂದೇ ಕುಟುಂಬದ ಐವರಿಗೆ ಕೊರೋನಾ ಸೋಂಕು..! ಎಲ್ಲೆಡೆ ಕಟ್ಟೆಚ್ಚರ

ಕೇರಳದಲ್ಲಿ ಒಂದೇ ಕುಟುಂಬದ ಐವರಿಗೆ ಕೊರೋನಾ ಸೋಂಕು..! ಎಲ್ಲೆಡೆ ಕಟ್ಟೆಚ್ಚರ

ಕೇರಳದಲ್ಲಿ ಒಂದೇ ಕುಟುಂಬದ ಐವರಿಗೆ ಕೊರೋನಾ ಸೋಂಕು..! ಎಲ್ಲೆಡೆ ಕಟ್ಟೆಚ್ಚರ

ತಿರುವನಂತಪುರ : ಕೇರಳದ ಒಂದೇ ಕುಟುಂಬದ ಐವರಿಗೆ ಕೊರೋನ ವೈರಸ್ ಸೋಂಕು ಪತ್ತೆಯಾಗಿದ್ದು, ದೇಶದಲ್ಲಿ ವೈರಸ್ ಪೀಡಿತರ ಸಂಖ್ಯೆ 39ಕ್ಕೇರಿಕೆಯಾಗಿದೆ.

ಕೇರಳದಲ್ಲಿ ಸೋಂಕು ಅಂಟಿದ ಐವರು ಒಂದೇ ಕುಟುಂಬದವರಾಗಿದ್ದು, ಇವರಲ್ಲಿ ಮೂವರು ಇತ್ತೀಚೆಗಷ್ಟೇ ಇಟಲಿಗೆ ಭೇಟಿ ನೀಡಿದ್ದರು. ಕೊರೋನ ವೈರಸ್ ಪೀಡಿತವಾಗಿರುವ ದೇಶಗಳಲ್ಲಿ ಇಟಲಿ ಕೂಡ ಒಂದಾಗಿದೆ. ‘ಕುಟುಂಬವು ಏರ್‌ಪೋರ್ಟ್‌ನಲ್ಲಿ ತಮ್ಮ ಪ್ರಯಾಣದ ಇತಿಹಾಸವನ್ನು ಹಂಚಿಕೊಂಡಿರಲಿಲ್ಲ.

ಹೀಗಾಗಿ ಅವರನ್ನು ತಪಾಸಣೆ ನಡೆಸಿರಲಿಲ್ಲ. ಇಟಲಿಯಿಂದ ಬಂದಿರುವ ಕುಟುಂಬ ಸದಸ್ಯರು ಆರಂಭದಲ್ಲಿ ಹಾಸ್ಪಿಟಲ್‌ಗೆ ದಾಖಲಾಗಲು ನಿರಾಕರಿಸಿದ್ದಾರೆ. ನಾವು ಅವರ ಮನವೊಲಿಸಿದ್ದೇವೆ’’ವೈರಸ್ ಪತ್ತೆ ಪರೀಕ್ಷೆಯಲ್ಲಿ ಪಾಸಿಟಿವ್ ಆಗಿರುವ ಐವರ ಪೈಕಿ ಮಗೂ ಕೂಡ ಸೇರಿದೆ.

‘‘ಮಗು ಹಾಗೂ ಹೆತ್ತವರು ಇತ್ತೀಚೆಗೆ ಇಟಲಿಗೆ ತೆರಳಿದ್ದರು. ಅವರು ಇಟಲಿಯಿಂದ ವಾಪಸಾದ ಬಳಿಕ ತಮ್ಮ ಸಂಬಂಧಿಕರನ್ನು ಭೇಟಿಯಾಗಿದ್ದಾರೆ. ಅವರ ಸಂಬಂಧಿಕರು ವೈರಸ್ ಲಕ್ಷಣ ಕಾಣಿಸಿಕೊಂಡ ಬಳಿಕ ಆಸ್ಪತ್ರೆಗೆ ತೆರಳಿದ್ದರು.

ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಇಡಲಾಗಿದೆ. ಇಟಲಿಗೆ ಪ್ರಯಾಣಿಸಿದ್ದ ಕುಟುಂಬವನ್ನು ಪ್ರತ್ಯೇಕವಾಗಿಟ್ಟು ನಿಗಾವಹಿಸಲಾಗಿದೆ’’ ಎಂದು ರಾಜ್ಯ ಆರೋಗ್ಯ ಸಚಿವೆ ಕೆಕೆ ಶೈಲಜಾ ಹೇಳಿದ್ದಾರೆ. ಎಂದು ಶೈಲಜಾ ತಿಳಿಸಿದ್ದಾರೆ.

ಜ್ವರದಿಂದ ಬಳಲುತ್ತಿರುವವರು ಸೋಮವಾರ ರಾಜ್ಯದ ರಾಜಧಾನಿ ತಿರುವನಂತಪುರಂನಲ್ಲಿ ನಡೆಯುತ್ತಿರುವ ಮಹಿಳಾ ಹಬ್ಬವಾದ ಅತ್ತುಕಲ್ ಪೊಂಗಲ್‌ನಲ್ಲಿ ಭಾಗವಹಿಸದಂತೆ ಸರ್ಕಾರ ಮನವಿ ಮಾಡಿದೆ.

ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಪಥನಾಮ್‌ತಿಟ್ಟುವಿನ ಜಿಲ್ಲಾಧಿಕಾರಿ ಸಂಜೆ ತುರ್ತು ಸಭೆಯನ್ನು ಕರೆದಿದ್ದಾರೆ.

- Advertisment -

RECENT NEWS

ಮಂಗಳೂರು ಧರ್ಮಪ್ರಾಂತ್ಯದ ಚರ್ಚ್ ಗಳಲ್ಲಿ ಜೂ 13 ರಿಂದ ಪ್ರಾರ್ಥನೆಗೆ ಅವಕಾಶ

ಚರ್ಚ್ ಗಳಲ್ಲಿ ನಡೆಯುತ್ತಿದೆ ಭರದ ಸಿದ್ದತೆ ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ 13ರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚ್ ಗಳಲ್ಲಿ ಪ್ರಾರ್ಥನೆಗಳನ್ನು ಆರಂಭಿಸಲಾಗುವುದು ಎಂದು ಧರ್ಮಾಧ್ಯಕ್ಷರಾದ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ತಿಳಿಸಿದ್ದಾರೆ. ಈ ಕುರಿತು...

ಜೂನ್ 8 ರಿಂದ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶ….!!

 ಶೀತ, ಕೆಮ್ಮು ಇದ್ದವರಿಗೆ ನಮಾಝ್ ಗೆ ಪ್ರವೇಶ ನಿರಾಕರಣೆ ಮಂಗಳೂರು : ರಾಜ್ಯ ಸರಕಾರ ಜೂನ್‌ 8 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿರುವ ಹಿನ್ನಲೆ ಜೂನ್ 8 ರಿಂದ ಮಸೀದಿಗಳಲ್ಲಿ...

ಜುಲೈವರೆಗೆ ಉಡುಪಿ ಕೃಷ್ಣನ ದರ್ಶನ ಭಾಗ್ಯ ಇಲ್ಲ

20 ರಿಂದ 30 ದಿನಗಳ ನಂತರ ಪರಿಸ್ಥಿತಿ ನೋಡಿ ಅವಕಾಶ ಉಡುಪಿ: ರಾಜ್ಯ ಸರಕಾರ ಈಗಾಗಲೇ ಜೂನ್ 8ರ ನಂತರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿದೆ. ಅದರಂತೆ ಈಗಾಗಲೇ ರಾಜ್ಯದ ಮುಜರಾಯಿ ಇಲಾಖೆ...

ಕೃಷ್ಣನಗರಿಯಲ್ಲಿ ನಿಲ್ಲದ ಕೊರೊನಾ ಪ್ರವಾಹ: ಇಂದು ಮತ್ತೆ 121 ಮಂದಿಗೆ ಪಾಸಿಟಿವ್..!

ಉಡುಪಿಗೆ ಕಂಟಕವಾದ ಮಹಾರಾಷ್ಟ್ರ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 889ಕ್ಕೆ ಏರಿಕೆ..! ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಹೆಮ್ಮಾರಿ ಕೊರೊನಾ ಪ್ರವಾಹ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ದಿನೇ ದಿನೇ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಂದು ಮತ್ತೆ 121...