Home ಉಡುಪಿ ಉಡುಪಿಯಲ್ಲಿ ಕೊರೋನ ವೈರಸ್‌ ಪತ್ತೆ: ಸುಳ್ಳು ಸುದ್ದಿ ಎಂದ ಜಿಲ್ಲಾಡಳಿತ

ಉಡುಪಿಯಲ್ಲಿ ಕೊರೋನ ವೈರಸ್‌ ಪತ್ತೆ: ಸುಳ್ಳು ಸುದ್ದಿ ಎಂದ ಜಿಲ್ಲಾಡಳಿತ

ಉಡುಪಿಯಲ್ಲಿ ಕೊರೋನ ವೈರಸ್‌ ಪತ್ತೆ: ಸುಳ್ಳು ಸುದ್ದಿ ಎಂದ ಜಿಲ್ಲಾಡಳಿತ

 ಉಡುಪಿ : ವಿಶ್ವದಾದ್ಯಂತ ಅಲ್ಲೋಕಕಲ್ಲೋಲ ಎಬ್ಬಿಸಿರುವ ಕೊರೊನಾ ವೈರಸ್ ಇದೀಗ ಉಡುಪಿಯಲ್ಲಿ ಸದ್ದು ಮಾಡತೊಡಗಿದೆ ಎಂಬ ಸುದ್ದಿ ವಾಟ್ಸಾಪ್  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯಾ ಇಲಾಖೆ ಸ್ಪಷ್ಟನೆ ನೀಡಿದ್ದು ಇಂತಹ ಯಾವುದೇ ಪ್ರಕರಣ ಉಡುಪಿಯಲ್ಲಿ ವರದಿಯಾಗಿಲ್ಲ.

ಇದು ಸತ್ಯಕ್ಕೆ ದೂರವಾದ ವಿಚಾರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮಣಿಪಾಲದ ಕಸ್ತೂರ್‌ಬಾ ಆಸ್ಪತ್ರೆಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳು ಎಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಸ್ಪಷ್ಟ ಪಡಿಸಿದ್ದಾರೆ. ಮಣಿಪಾಲದ ಕಸ್ತೂರ್‌ ಬಾ ಆಸ್ಪತ್ರೆಯಲ್ಲಿ ಇದುವರೆಗೆ ಯಾವುದೇ ರೋಗಿಯಲ್ಲಿ ಕೊರೊನಾ ವೈರಸ್ ಇರುವುದು ದೃಢಪಟ್ಟಿಲ್ಲ ಎಂದು ಹೇಳಿದ್ದಾರೆ.

ಗಾಳಿ ಸುದ್ದಿ :  ಇಂದು ಇತ್ತೀಚೆಗೆ ಚೀನಕ್ಕೆ ತೆರಳಿ 15 ದಿನಗಳ ಹಿಂದೆ ಸ್ವದೇಶಕ್ಕೆ ಮರಳಿದ ಜಿಲ್ಲೆಯ ಒಟ್ಟು ನಾಲ್ಕು ಮಂದಿಯನ್ನು ಸಂಶಯಾಸ್ಪದ ಕೊರೊನಾ ವೈರಸ್‌ಗೆ ಪರೀಕ್ಷೆಗೊಳಪಡಿಸಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡಿನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲಿ ಒಬ್ಬರು ಕಾಪು ತಾಲೂಕಿನವರಾಗಿದ್ದು 15 ದಿನಗಳ ಹಿಂದೆ ಚೀನಾದಿಂದ ಮರಳಿ ಬಂದಿದ್ದರು. ಅವರು ಶೀತ ಹಾಗೂ ಗಂಟಲು ಸೋಂಕಿ ಗಾಗಿ ಚಿಕಿತ್ಸೆಗೆ ಬಂದಿದ್ದರೆ, ಮತ್ತೆ ಮೂವರು -ಗಂಡ, ಹೆಂಡತಿ, ಮಗು- ಬ್ರಹ್ಮಾವರ ತಾಲೂಕಿನವರಾಗಿದ್ದು ಇವರು ಸಹ ಎರಡು ವಾರಗಳ ಹಿಂದೆ ಚೀನದಿಂದ ಮರಳಿದ್ದರು. ಇವರಲ್ಲಿ ಗಂಡನಲ್ಲಿ ಶೀತ-ಕೆಮ್ಮು ಇದ್ದರೆ, ಮಗುವಿನಲ್ಲಿ ಸಹ ಲಘು ಶೀತವಿದೆ. ಆದರೆ ಹೆಂಡತಿ ಆರೋಗ್ಯವಂತರಾಗಿದ್ದಾರೆ. ಇದೀಗ ಈ ನಾಲ್ವರನ್ನು ಪ್ರತ್ಯೇಕ ವಾರ್ಡಿನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರ ರಕ್ತ ಹಾಗೂ ಗಂಟಲಿನ ದ್ರವವನ್ನು ಕೊರೊನಾ ವೈರಸ್ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಇದು ಸಾಮಾನ್ಯ ಶೀತ ಕೆಮ್ಮು ಆಗಿದ್ದು, ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ತೀವ್ರ ನಿಗಾದಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು  ಸಾಮಾಜಿಕ ಜಾಲಾ ತಾಣಗಳಲ್ಲಿ ಸದ್ಯ ಹರಿದಾಡುತ್ತಿದೆ.

- Advertisment -

RECENT NEWS

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ  ಚೀನಾ: ಚೀನಾದ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು...

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ.ಚೆನ್ನಿಗಪ್ಪ ಇನ್ನಿಲ್ಲ

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ. ಚೆನ್ನಿಗಪ್ಪ ಇನ್ನಿಲ್ಲ ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ. ಚೆನ್ನಿಗಪ್ಪ ಇಂದು ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರಿಗೆ...

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ಹೊಂದುವಂತೆ ಮಹಾನಗರ ಪಾಲಿಕೆ ಆಯುಕ್ತರು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಹತ್ತು ಅಪಾರ್ಟ್ ಮೆಂಟ್ ಗಳಿಗೆ ದಂಡ ವಿಧಿಸಲಾಗಿದೆ. ಕಳೆದ ಸೆಪ್ಟಂಬರ್...

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಸಮಾವೇಶದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾಳನ್ನು ಬಂಧಿಸಿದ ಪೋಲಿಸರು...