Connect with us

    ದೇಶದಲ್ಲಿ ಕೊರೊನಾ ವೈರಸ್ ಹಬ್ಬುತ್ತಿರುವ ಹಿನ್ನಲೆ: ಕೇಂದ್ರದಿಂದ ಕೊರೊನಾ ತುರ್ತು ಸಹಾಯವಾಣಿ ಬಿಡುಗಡೆ

    Published

    on

    ದೇಶದಲ್ಲಿ ಕೊರೊನಾ ವೈರಸ್ ಹಬ್ಬುತ್ತಿರುವ ಹಿನ್ನಲೆ: ಕೇಂದ್ರದಿಂದ ಕೊರೊನಾ ತುರ್ತು ಸಹಾಯವಾಣಿ ಬಿಡುಗಡೆ

    ಬೆಂಗಳೂರು: ದೇಶದಲ್ಲಿ ಕೊರೊನಾ ವೈರಸ್ ಹಬ್ಬುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಜನರಿಗೆ ತುರ್ತು ನೆರವಾಗಲು  ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಹಾಯವಾಣಿ ಸಂಖ್ಯೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಹಾಕಲಾಗಿರುವ ಪಟ್ಟಿಯ ಪ್ರಕಾರ, ರಾಷ್ಟ್ರ ರಾಜಧಾನಿಯ ಜನರು ಸಹಾಯಕ್ಕಾಗಿ 011-22307145 ಅನ್ನು ಡಯಲ್ ಮಾಡಬಹುದು.ಮತ್ತು ಕರ್ನಾಟಕದ ಜನರು 104 ಸಂಖ್ಯೆಗೆ ಕರೆ ಮಾಡಿ ಅಗತ್ಯ ನೆರವು ಪಡೆಯಬಹುದು ಅಂತ ತಿಳಿಸಿದೆ.

    ಆಯಾ ರಾಜ್ಯಗಳ ಸಹಾಯವಾಣಿ ಇಂತಿದೆ.

    ಆಂಧ್ರಪ್ರದೇಶ- 0866241078
    ಅರುಣಾಚಲ ಪ್ರದೇಶ-9436055743
    ಅಸ್ಸಾಂ-6913347770
    ಛತ್ತಿಸ್ ಘಡ್-07712235091
    ನವದೆಹಲಿ-01122307145
    ಹರ್ಯಾಣ-8558893911
    ಜಮ್ಮು-01912520982
    ಕಾಶ್ಮೀರ-01942440283
    ಕೇರಳ-04712552056
    ಲಡಾಕ್- 01982256462
    ಮಧ್ಯಪ್ರದೇಶ- 0755-2527177
    ಮಹಾರಾಷ್ಟ್ರ- 020-26127394
    ನಾಗಾಲ್ಯಾಂಡ್- 7005539653
    ಒಡಿಶಾ-9439994859
    ರಾಜಸ್ಥಾನ್-01412225624
    ತಮಿಳುನಾಡು-04429510500
    ತ್ರಿಪುರಾ-03812315879
    ಉತ್ತರಪ್ರದೇಶ-18001805145
    ಪಶ್ಚಿಮ ಬಂಗಾಳ-3323412600
    ಅಂಡಮಾನ್ ಮತ್ತು ನಿಕೋಬಾರ್ 03192232102

    ಬಿಹಾರ, ಗೋವಾ, ಗುಜರಾತ್, ಹಿಮಾಚಲಪ್ರದೇಶ, ಜಾರ್ಖಂಡ್ , ಕರ್ನಾಟಕ, ಪಂಜಾಬ್, ಸಿಕ್ಕಿಂ, ತೆಲಂಗಾಣ, ಉತ್ತರಖಾಂಡ್, ದಾದ್ರ ಮತ್ತು ಹವೇಲಿ, ದಿಯು ಮತ್ತು ದಾಮನ್, ಲಕ್ಷದೀಪ, ಪುದುಚೇರಿ ಜನರು 104 ಸಂಖ್ಯೆಗೆ ಕರೆ ಮಾಡಿ ಅಗತ್ಯ ನೆರವು ಪಡೆಯಬಹುದು.
    ಮೇಘಾಲಯ ಮತ್ತುಯ ಮಿಜೋರಾಂ ಜನರು 108 ಮತ್ತು 102 ಸಂಖ್ಯೆ ಗೆ ಕರೆ ಮಾಡಿ ಸಹಾಯ ಪಡೆಯಬಹುದು ಎಂದು ತಿಳಿಸಿದೆ

    Click to comment

    Leave a Reply

    Your email address will not be published. Required fields are marked *

    LATEST NEWS

    ಮೊಸಳೆ ತಲೆ ಬುರುಡೆ ಕಳ್ಳ ಸಾಗಣೆ ಯತ್ನ; ಕೆನಡಾ ಮೂಲದ ವ್ಯಕ್ತಿ ಅರೆಸ್ಟ್

    Published

    on

    ಮಂಗಳೂರು/ನವದೆಹಲಿ : ಮೊಸಳೆಯ ತಲೆಬುರುಡೆ ಕಳ್ಳಸಾಗಣೆಗೆ ಯತ್ನಿಸಿದ ಆರೋಪದಲ್ಲಿ ಕೆನಡಾ ಮೂಲದ ವ್ಯಕ್ತಿಯನ್ನು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

    ಟರ್ಮಿನಲ್ 3ರಲ್ಲಿ ಕೆನಡಾ ಮೂಲದ ವ್ಯಕ್ತಿ ಮಾಂಟ್ರಿಯಲ್‌ಗೆ ವಿಮಾನ ಹತ್ತಲು ಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಮೊಸಳೆಯ ಮರಿಯನ್ನು ಹೋಲುವ ಸುಮಾರು 770 ಗ್ರಾಂ ತೂಕದ ಚೂಪಾದ ಹಲ್ಲುಗಳನ್ನು ಹೊಂದಿರುವ ತಲೆಬುರುಡೆ ಪತ್ತೆಯಾಗಿದೆ.

    ದೆಹಲಿ ಸರ್ಕಾರದ ಅಧೀನದಲ್ಲಿರುವ ಅರಣ್ಯ ಮತ್ತು ವನ್ಯಜೀವಿ ಇಲಾಖೆಯು ನಡೆಸಿದ ಶೋಧ ಕಾರ್ಯದಲ್ಲಿ ಅದು ಮೊಸಳೆ ಮರಿಯ ತಲೆಬುರುಡೆ ಎಂಬುದಾಗಿ ದೃಢಪಟ್ಟಿದೆ. 1972ರ ವನ್ಯ ಜೀವಿ ಕಾಯ್ದೆಯಡಿಯಲ್ಲಿ ಸಂರಕ್ಷಿತ ಜಾತಿಗೆ ಸೇರಿದ ತಲೆಬುರುಡೆ ಇದಾಗಿದೆ. ಹೆಚ್ಚಿನ ವೈಜ್ಞಾನಿಕ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.

     

    Continue Reading

    LATEST NEWS

    ಶರಣಾದ ನಕ್ಸಲರನ್ನು NIA ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ ಪೊಲೀಸರು!

    Published

    on

    ಬೆಂಗಳೂರು: ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಮೋಸ್ಟ್ ವಾಂಟೆಡ್ 6 ಜನ ನಕ್ಸಸಲರು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದರು. ಬಳಿಕ ಅವರನ್ನ ವಶಕ್ಕೆ ಪಡೆದ ಪೊಲೀಸರು ಇಂದು ಅವರನ್ನು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದಾರೆ.

    ಹೌದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಂಕಿರಣದ ಎನ್ಐಐ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಕ್ಸಲರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ. ಇದಕ್ಕೂ ಮೊದಲು 6 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟ್ ಮುಂದೆ ಇದೀಗ ಹಾಜರುಪಡಿಸಿದ್ದಾರೆ.

    Continue Reading

    LATEST NEWS

    ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

    Published

    on

    ಮಂಗಳೂರು/ಬೆಂಗಳೂರು : ಅತ್ಯಾ*ಚಾರ, ಅಶ್ಲೀ*ಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಪ್ರಜ್ವಲ್ ರೇವಣ್ಣಗೆ ಬಿಗ್ ರಿಲೀಫ್ ನೀಡಿದೆ. ಈ ಮೂಲಕ ಹಲವು ತಿಂಗಳುಗಳ ಬಳಿಕ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲಾಯಿತು.

    ಈ ಸಂದರ್ಭ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ, ಜ.16ಕ್ಕೆ ವಿಚಾರಣೆಯನ್ನು ಮುಂದೂಡಿದೆ.

    ಅ*ತ್ಯಾಚಾರ ಆರೋಪ ಹಾಗೂ ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಜನವರಿ 13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿ ಮಾಡುವುದಕ್ಕೆ ನಿಗದಿಯಾಗಿತ್ತು. ಇದನ್ನು ಪ್ರಶ್ನಿಸಿ ಪ್ರಜ್ವಲ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಪ್ರಜ್ವಲ್‌ಗೆ ಸ್ವಲ್ಪ ರಿಲೀಫ್ ಕೊಟ್ಟಿದೆ.

    ಇದನ್ನೂ ಓದಿ : ಫ್ರಿಡ್ಜ್‌ನಲ್ಲಿ ನಿಂಬೆಹಣ್ಣಿನ ತುಂಡನ್ನು ಇಟ್ಟರೆ ಏನಾಗುತ್ತೆ ಗೊತ್ತಾ..?

    2024ರಲ್ಲಿ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದಂತೆ ಅಶ್ಲೀ*ಲ ವೀಡಿಯೋಗಳು ವೈರಲ್ ಆಗಿದ್ದವು. ಇದು ದೇಶವನ್ನೇ ಬೆಚ್ಚಿ ಬೀಳಿಸಿತ್ತು. ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.

     

    Continue Reading

    LATEST NEWS

    Trending