ಕೊರೊನಾ ಸೊಂಕಿತೆ ಎಂದು ಅಪಪ್ರಚಾರ ಜಿಲ್ಲಾಧಿಕಾರಿಗೆ ದೂರು ನೀಡಿದ ನರ್ಸ್
Published
4 years agoon
By
Adminಮಂಗಳೂರು ಜುಲೈ23: ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ನರ್ಸ್ ಹಾಗೂ ಅವರ ಮಗುವಿಗೆ ಕೊರೊನಾ ಸೊಂಕು ಬಂದಿದ್ದು, ಮಹಿಳೆಯ ಕುಟುಂಬದ ಬಗ್ಗೆ ಕಿಡಿಗೇಡಿಗಳು ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗೆ ದೂರು ನೀಡಲಾಗಿದೆ.
ಮೂಡಬಿದ್ರೆ ನಿವಾಸಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆ ಮತ್ತು ಅವರ ಏಳು ವರ್ಷದ ಮಗನಿಗೆ ಕೊರೊನಾ ಪಾಸಿಟಿವ್ ಆಗಿದ್ದು ಅವರ ಕುಟುಂಬದ ಬಗ್ಗೆ ಸ್ಥಳೀಯ ಕಿಡಿಗೇಡಿಗಳು ವ್ಯಾಪಕವಾಗಿ ಅಪಪ್ರಚಾರ ಮಾಡುತ್ತಿದ್ದು ಮಾನಸಿಕ ಹಿಂಸೆ ನೀಡುತ್ತಿರುವ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಲಾಗಿದೆ. ಕೊರೊನಾ ವಾರಿಯರ್ ಆಗಿ ಸೋಂಕಿತರ ಸೇವೆಯಲ್ಲಿ ತೊಡಗಿದ್ದ ಮಹಿಳೆ ಮತ್ತು ಮಗನಿಗೆ ಸೋಂಕು ದೃಢಪಟ್ಟಿದ್ದು ಮನೆಯನ್ನು ಸೀಲ್ಡೌನ್ ಮಾಡಲಾಗಿದೆ.
ಜನರು ಮಾನಸಿಕವಾಗಿ ಹಿಂಸಿಸುತ್ತಿರುವ ಕಾರಣ ಬೇಸರಗೊಂಡಿದ್ದು ಕೆಲಸಕ್ಕೆ ರಾಜೀನಾಮೆ ನೀಡಲು ಬಯಸಿದ್ದೇನೆ ಎಂದು ಅವರು ಬರೆದ ದೂರಿನಲ್ಲಿ ತಿಳಿಸಿದ್ದಾರೆ. ಕೊರೊನಾ ಪಾಸಿಟಿವ್ ಆಗಿದ್ದು ಪಾಲಿಸಬವೇಕಾದ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇನೆ. ಆದರೆ ಸಮಾಜ ವಿರೋಧಿ ಮನಸ್ಸುಗಳು ನನ್ನನ್ನು ಹಿಂಸಿಸುತ್ತಿವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆಯ ಪತಿ ಮತ್ತು ನಾಲ್ಕು ವರ್ಷದ ಮಗುವಿಗೆ ಕೊರೊನಾ ನೆಗೆಟಿವ್ ಆಗಿದೆ. ಹೀಗಿದ್ದರೂ ಅಪಪ್ರಚಾರ ಮಾಡುತ್ತಿರುವ ದುಷ್ಕರ್ಮಿಳನ್ನು ತಕ್ಷಣವೇ ಬಂಧಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ
You may like
DAKSHINA KANNADA
ತಡೆಬೇಲಿಗೆ ಡಿಕ್ಕಿ ಹೊಡೆದು ಅಂಡರ್ಪಾಸ್ ಗೆ ಉರುಳಿದ ವಾಹನ; ಹಲವರಿಗೆ ಗಾಯ
Published
1 hour agoon
17/01/2025By
NEWS DESK3ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ ಐ ಟಿ ಕೆ ಅಂಡರ್ ಪಾಸ್ ಬಳಿ ಬೈಕ್ ಗೆ ಬೋಲೇರೋ ಪಿಕಪ್ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಗೆ ಸುರತ್ಕಲ್ ಎನ್ಐಟಿಕೆ ಅಂಡರ್ ಪಾಸ್ ಬಳಿ ಬೊಲೆರೋ ಪಿಕಪ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ಹಾಗೂ ಪಿಕಪ್ ಹೆದ್ದಾರಿ ಬದಿಯ ಅಪಘಾತ ತಡೆಗೆ ಹಾಕಿದ್ದ ತಡೆ ಬೇಲಿಗೆ ಡಿಕ್ಕಿ ಹೊಡೆದು ಸುಮಾರು 12 ಅಡಿ ಆಳದ ಅಂಡರ್ ಪಾಸ್ ಕೆಳಗಡೆ ಬಿದ್ದಿದೆ.
ಇದನ್ನೂ ಓದಿ: ಕೊಣಾಜೆ : ಸ್ಕೂಟರ್ – ಟೆಂಪೋ ನಡುವೆ ಅಪ*ಘಾತ; ಸವಾರ ಸಾವು
ಅಪಘಾತದಿಂದ ಬೈಕ್ ಸವಾರ ಸಹಿತ ಬೊಲೆರೋ ಪಿಕಪ್ ನಲ್ಲಿದ್ದ ವಾಹನದ ಚಾಲಕ ಹಾಗೂ ಪ್ರಯಾಣಿಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಕ್ರೇನ್ ಮೂಲಕ ಎರಡು ವಾಹನಗಳನ್ನು ತೆರವುಗೊಳಿಸಲಾಯಿತು. ಅಪಘಾತದ ಗಾಯಾಳುಗಳ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ.
DAKSHINA KANNADA
ಮಂಗಳೂರು : ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಶಿಲಾನ್ಯಾಸ
Published
2 hours agoon
17/01/2025By
NEWS DESK4ಮಂಗಳೂರು : ಸುಮಾರು 50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅತ್ಯಾಧುನಿಕ ಸೌಲಭ್ಯ ಹೊಂದಿರುವ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಶಿಲಾನ್ಯಾಸ ನೆರವೇರಿಸಿದ್ದಾರೆ. ಮೇರಿ ಹಿಲ್ನಲ್ಲಿ ನಿರ್ಮಾಣವಾಗಲಿರುವ ಈ ಪ್ರಾದೇಶಿಕ ಕೇಂದ್ರ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರಗಳಿಗೆ ಪೂರಕವಾಗಲಿರುವ ವ್ಯವಸ್ಥೆಗಳು ಈ ಕೇಂದ್ರದಲ್ಲಿ ಇರಲಿದೆ. ಇದು ವಿದ್ಯಾರ್ಥಿಗಳಿಂದ ಹಿಡಿದು ಸಂಶೋಧನೆ ನಡೆಸುವ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ.
ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಏಷ್ಯಾದಲ್ಲೇ ಅತೀ ದೊಡ್ಡ ಸಂಸ್ಥೆಯಾಗಿದ್ದು, ಮಂಗಳೂರಿನಲ್ಲಿ ನಿರ್ಮಾಣವಾಗುವ ಪ್ರಾದೇಶಿಕ ಕೇಂದ್ರ ದೇಶದಲ್ಲೇ ದೊಡ್ಡ ಕೇಂದ್ರವಾಗಲಿದೆ. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಈ ಕೇಂದ್ರ ಸ್ಥಾಪನೆಗೆ 2024-25ರ ಬಜೆಟ್ನಲ್ಲಿ ಅನುದಾನ ನೀಡಲಾಗಿದ್ದು, ಈಗ ಚಾಲನೆ ನೀಡಲಾಗುತ್ತಿದೆ. ಈ ಕೇಂದ್ರ ಸ್ಥಾಪನೆ ಬಳಿಕ ಕರಾವಳಿ ಭಾಗದ ಜನರಿಗೆ ವೈದ್ಯಕೀಯ ಶಿಕ್ಷಣ ಸಂಬಂಧಿತ ವಿಚಾರವಾಗಿ ಬೆಂಗಳೂರಿಗೆ ಹೋಗುವುದು ತಪ್ಪಲಿದೆ ಎಂದು ಹೇಳಿದ್ದಾರೆ.
ಬಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ನೀಡಬೇಕು ಎಂಬ ಚಿಂತನೆ ಸರ್ಕಾರಕ್ಕೆ ಇದೆ. ಇದಕ್ಕೆ ಬೇಕಾದ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಇದನ್ನೂ ಓದಿ : ಆ ನಟ ಕಿಸ್ ಮಾಡಿದಕ್ಕೆ ವಾಂತಿ ಮಾಡಿಕೊಂಡಿದ್ದರಂತೆ ಸ್ಟಾರ್ ನಟಿ
ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಸಚಿವ ದಿನೇಶ್ ಗುಂಡೂರಾವ್, ಸಂಸದ ಬ್ರಿಜೇಶ್ ಚೌಟ ಸೇರಿದಂತೆ ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗಿಯಾಗಿದ್ದರು.
FILM
ಆ ನಟ ಕಿಸ್ ಮಾಡಿದಕ್ಕೆ ವಾಂತಿ ಮಾಡಿಕೊಂಡಿದ್ದರಂತೆ ಸ್ಟಾರ್ ನಟಿ
Published
2 hours agoon
17/01/2025By
NEWS DESK3ಮಂಗಳೂರು/ಮುಂಬೈ : ಕೆಲವು ನಟಿಯರು ನೋ ಕಿಸ್ಸಿಂಗ್ ನೀತಿಯನ್ನು ಅನುಸರಿಸುತ್ತಾರೆ. ಈ ಬಗ್ಗೆ ಸಿನಿಮಾ ಒಪ್ಪಿಕೊಳ್ಳುವ ಮೊದಲೇ ಮಾತುಕತೆ ನಡೆಸಿರುತ್ತಾರೆ. ಇದನ್ನು ಬಾಲಿವುಡ್ನ ಈ ಸ್ಟಾರ್ ನಟಿ ಕೂಡ ಅನುಸರಿಸುತ್ತಿದ್ದರು.
ಆದರೆ ಆ ಒಬ್ಬ ನಟ ಬಲವಂತವಾಗಿ ಕಿಸ್ ಮಾಡಿದಕ್ಕೆ ವಾಂತಿ ಮಾಡಿ 100 ಸಲ ಮುಖ ತೊಳೆದಿದ್ದೆ ಎಂದು ಸ್ಟಾರ್ ನಟಿ ಹೇಳಿದ್ದಾರೆ.
ಬಾಲಿವುಡ್ ನಟಿ ರವೀನಾ ಟಂಡನ್ ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ರವಿನಾ ಟಂಡನ್ ನೋ ಕಿಸ್ಸಿಂಗ್ ನೀತಿಯನ್ನು ಅನುಸರಿಸಿದ ನಟಿಯರಲ್ಲಿ ರವೀನಾ ಟಂಡನ್ ಕೂಡ ಒಬ್ಬರು.
ಆದರೆ ಸಿನಿಮಾವೊಂದರ ಶೂಟಿಂಗ್ ವೇಳೆ ಸಹ ನಟರೊಬ್ಬರು ಆಕಸ್ಮಿಕವಾಗಿ ರವೀನಾ ಟಂಡನ್ ತುಟಿಗಳಿಗೆ ಮುತ್ತಿಟ್ಟ ಘಟನೆ ನಡೆದಿತ್ತು. ಆ ನಂತರ ಏನಾಯಿತು ಎಂಬುದನ್ನು ಸ್ವತಃ ರವೀನಾ ಅವರೇ ಹೇಳಿದ್ದಾರೆ.
ಇದನ್ನೂ ಓದಿ: ಎಲಿಮಿನೇಟ್ ಆದ ಸ್ಪರ್ಧಿಗಳ ರೀ ಎಂಟ್ರಿ; ಕುತೂಹಲ ಕೆರಳಿಸಿದ ಎಲಿಮಿನೇಷನ್
ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಈ ಬಗ್ಗೆ ರವೀನಾ ಮಾತನಾಡಿದ್ದಾರೆ. ರವೀನಾ ಟಂಡನ್ ಅವರೊಂದಿಗೆ ಒಂದು ಘಟನೆ ನಡೆದಿತ್ತಂತೆ. ಅವರ ಸಹ ನಟರೊಬ್ಬರು ತಪ್ಪಾಗಿ ಅವರನ್ನು ಚುಂಬಿಸಿದ್ದರಂತೆ. ಈ ದೃಶ್ಯವು ಸ್ಕ್ರಿಪ್ಟ್ ನ ಭಾಗವೂ ಆಗಿರಲಿಲ್ಲ. ಇದಾದ ನಂತರ ರವೀನಾ ಟಂಡನ್ ತುಂಬಾ ಅನ್ಕಂಫರ್ಟ್ ಫೀಲ್ ಮಾಡಿಕೊಂಡರಂತೆ.
ಆ ಬಳಿಕ ವಾಂತಿ ಕೂಡ ಮಾಡಿದರಂತೆ. 100 ಸಲ ತಮ್ಮ ಬಾಯಿ ತೊಳೆದುಕೊಂಡಿದ್ದಾರಂತೆ. ನಂತರ ಆ ನಟ ರವೀನಾ ಟಂಡನ್ ಅವರ ಬಳಿಕ ಕ್ಷಮೆಯಾಚಿಸಿದರಂತೆ. ಸಂದರ್ಶನ ಸಮಯದಲ್ಲಿ ರವೀನಾ ಟಂಡನ್ ಈ ವಿಚಾರ ಹೇಳಿದ್ದಾರೆ. ಸಿನಿಮಾಗಳಲ್ಲಿ ಕಿಸ್ ಮಾಡದಿರುವುದು ನನ್ನ ಆಯ್ಕೆ ಎಂದು ರವೀನಾ ಟಂಡನ್ ಹೇಳಿದ್ದಾರೆ.
LATEST NEWS
ಮೂರನೇ ದಾಖಲೆ ಬರೆದ ಉಡುಪಿಯ ಕಲಾವಿದ; ವರ್ಲ್ಡ್ ರೆಕಾರ್ಡ್ ಸೇರಿದ ಅಪೂರ್ವ ಕಲಾಕೃತಿ
ಎಲಿಮಿನೇಟ್ ಆದ ಸ್ಪರ್ಧಿಗಳ ರೀ ಎಂಟ್ರಿ; ಕುತೂಹಲ ಕೆರಳಿಸಿದ ಎಲಿಮಿನೇಷನ್
ತಾವೇ ಮಾರಾಟ ಮಾಡಿದ್ದ ಬಸ್ಸನ್ನು ಕದ್ದು ತಂದು ಸಿಕ್ಕಿ ಬಿದ್ದ ಅಪ್ಪ -ಮಗ!
ಉಳ್ಳಾಲ : ಬಂದೂಕು ತೋರಿಸಿ ಬ್ಯಾಂಕ್ ದರೋಡೆ; ನಗ, ನಗದು ದೋಚಿ ಪರಾರಿಯಾದ ಖದೀಮರು
ಈ ವಾರಾಂತ್ಯಕ್ಕೆ ಬಿಗ್ ಬಾಸ್ ಮನೆಯಲ್ಲಿ ಡಬಲ್ ಧಮಾಕ
ದ.ಕ : ಪ್ರತ್ಯೇಕ ಅಪ*ಘಾತ ಪ್ರಕರಣ; ಇಬ್ಬರು ಬೈಕ್ ಸವಾರರು ಸಾ*ವು
Trending
- BIG BOSS6 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- BIG BOSS4 days ago
ಕಣ್ಣೀರು ಒರೆಸಿದ ಸುದೀಪ್.. ಕಿಚ್ಚನ ಈ ದೊಡ್ಡ ಗುಣಕ್ಕೆ ಸೆಲ್ಯೂಟ್ ಹೊಡೆದ ಫ್ಯಾನ್ಸ್..!
- BIG BOSS3 days ago
ಮಿಡ್ ವೀಕ್ ಎಲಿಮಿನೇಷನ್ ನಿಂದ ಬಚಾವ್ ಆಗುವವರು ಯಾರು ?
- BIG BOSS3 days ago
ಚೈತ್ರಾ ಕುಂದಾಪುರ ಪ್ರಕಾರ ಈ ಸಲ ಬಿಗ್ ಬಾಸ್ ವಿನ್ನರ್ ಇವರೇ ?