ಕೊರೊನಾ ವೈರಸ್ ದಾಳಿಯಿಂದ ದೇಶದಲ್ಲಿ ಮೃತಪಟ್ಟವರ ಸಂಖ್ಯೆ 206ಕ್ಕೆ ಏರಿಕೆ
ಕೊರೊನಾ ವೈರಸ್ ದಾಳಿಯಿಂದ ದೇಶದಲ್ಲಿ ಮೃತಪಟ್ಟವರ ಸಂಖ್ಯೆ 206ಕ್ಕೆ ಏರಿಕೆ
ನವದೆಹಲಿ: ದೇಶದಲ್ಲೂ ಕೊರೊನಾ ಸೋಂಕಿನಿಂದ ಸಾಯುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲಿದೆ. ಕಳೆದ 24 ಗಂಟೆಗಳಲ್ಲಿ 37 ಸಾವುಗಳು ದೇಶಾದ್ಯಂತ ವರದಿಯಾಗಿವೆ.
ಮಹಾರಾಷ್ಟ್ರ 25, ದೆಹಲಿಯಲ್ಲಿ 4, ಪಂಜಾಬ್ ನಲ್ಲಿ 3, ಆಂಧ್ರಪ್ರದೇಶ, ಗುಜರಾತ್, ಕರ್ನಾಟಕ ಮತ್ತು ಜಾರ್ಖಂಡ್ ರಾಜ್ಯಗಳಲ್ಲಿ ತಲಾ 1 ಸಾವು ಸಂಭವಿಸಿದೆ.
ಇದುವರೆಗೆ ಕೊರೊನಾ ವೈರಸ್ ದಾಳಿಯಿಂದ ದೇಶದಲ್ಲಿ ಮೃತಪಟ್ಟವರ ಸಂಖ್ಯೆ 206 ಕ್ಕೆ ಏರಿಕೆಯಾಗಿದೆ. ಇದೇ ಸಂದರ್ಭ ಸೋಂಕಿತರ ಸಂಖ್ಯೆ 6,761 ಕ್ಕೆ ಏರಿದೆ.
24 ಗಂಟೆಗಳಲ್ಲಿ ಸುಮಾರು 896 ಹೊಸ ಪ್ರಕರಣಗಳು ಕಂಡು ಬಂದಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಒಟ್ಟು 206 ಸಾವುಗಳಲ್ಲಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಸಾವು ಸಂಭವಿಸಿದೆ. ಮಹಾರಾಷ್ಟ್ರದಲ್ಲಿ 97 ಜನ ಮೃತಪಟ್ಟಿದ್ದು ದೇಶದಲ್ಲಿ ಮೊದಲ ಸ್ಥಾನದಲ್ಲಿದೆ.
ಎರಡನೇ ಸ್ಥಾನದಲ್ಲಿರುವ ಗುಜರಾತ್ ನಲ್ಲಿ 17, ಮಧ್ಯಪ್ರದೇಶದಲ್ಲಿ 16, ದೆಹಲಿ 13 ಮತ್ತು ಪಂಜಾಬ್ ನಲ್ಲಿ 11 ಜನ ಮೃತಪಟ್ಟಿದ್ದು ಈ ಎಲ್ಲಾ ರಾಜ್ಯಗಳು ಕ್ರಮವಾಗಿ ನಂತರದ ಸ್ಥಾನ ಪಡೆದಿವೆ.
ಇದಲ್ಲದೆ, ದಕ್ಷಿಣ ರಾಜ್ಯಗಳಾದ ತಮಿಳುನಾಡಿನಲ್ಲಿ 8 ಮತ್ತು ತೆಲಂಗಾಣದಲ್ಲಿ 7 ಸಾವುಗಳು ದಾಖಲಾಗಿವೆ. ಅಲ್ಲದೆ ನೆರೆಯ ಆಂಧ್ರಪ್ರದೇಶ ಮತ್ತು ನಮ್ಮ ಕರ್ನಾಟಕದಲ್ಲಿ ತಲಾ 6 ಜನ ಕೊರೋನಾದಿಂದ ಸಾವನ್ನಪ್ಪಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ 5, ಜಮ್ಮು- ಕಾಶ್ಮೀರ, ಉತ್ತರ ಪ್ರದೇಶಗಳಲ್ಲಿ ತಲಾ 4, ಹರಿಯಾಣ ಮತ್ತು ರಾಜಸ್ಥಾನದಲ್ಲಿ ತಲಾ 3 ಸಾವುಗಳು ದಾಖಲಾಗಿವೆ.
ಇದಲ್ಲದೆ, ಕೇರಳ ರಾಜ್ಯದಲ್ಲೂ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ಸಮಗ್ರ ಮಾಹಿತಿ ನೀಡಿದೆ. ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಕೊರೋನಾ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.
ಈ ಒಂದೇ ರಾಜ್ಯದಲ್ಲಿ ಸುಮಾರು 1,364 ಜನರಿಗೆ ಕೊರೊನಾ ಸೋಂಕು ಹರಡಿದೆ. 898 ಸೋಂಕಿತರನ್ನು ಹೊಂದಿರುವ ದೆಹಲಿ ಮತ್ತು 834 ಸೋಂಕಿತರನ್ನು ಹೊಂದಿರುವ ತಮಿಳುನಾಡು ಕ್ರಮವಾಗಿ ನಂತರದ ಸ್ಥಾನದಲ್ಲಿವೆ.
ಹೀಗಾಗಿ ಮುಂದಿನ ದಿನಗಳಲ್ಲಿ ದೇಶದಲ್ಲಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಲಿದೆ ಎಂದು ವೈದ್ಯಕೀಯ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.
DAKSHINA KANNADA
‘ನಾಟು ನಾಟು’ ರೀತಿಯ ಸಾಂಗ್..! ಕುತೂಹಲ ಮೂಡಿಸಿದ ‘ವಾರ್ 2’
2019 ರಲ್ಲಿ ಸೂಪರ್ ಹಿಟ್ ಆಗಿದ್ದ ‘ವಾರ್’ ಸಿನೆಮಾದ ಸೆಕಂಡ್ ವರ್ಷನ್ ‘ವಾರ್ 2’ ತೆರೆ ಮೇಲೆ ಬರಲು ಭರದ ಸಿದ್ಧತೆ ನಡೆಸಿದೆ. ‘ವಾರ್’ ಸಿನೆಮಾದಲ್ಲಿ ‘ ಜೈ ಜೈ ಶಿವಶಂಕರ್’ ಹಾಡು ಸುಪರ್ ಹಿಟ್ ಆಗಿದ್ದು ಫ್ಯಾನ್ಸ್ಗಳು ಹಾಡಿಗೆ ಫಿದಾ ಆಗಿದ್ರು. ಟೈಗರ್ ಶ್ರಾಫ್ ಹಾಗೂ ಹೃತಿಕ್ ರೋಷನ್ ನಟನೆಯ ‘ವಾರ್’ ಸಿನೆಮಾ ಬಳಿಕ ಈಗ ‘ವಾರ್ 2’ ರೆಡಿ ಆಗ್ತಾ ಇದೆ. ಇದರಲ್ಲಿ ಹೃತಿಕ್ ರೋಷನ್ ಹಾಗೂ ಜ್ಯೂನಿಯರ್ ಎನ್ಟಿಆರ್ ಜೊತೆಯಾಗಿದ್ದಾರೆ.
ಅದ್ಧೂರಿಯಾಗಿ ನಿರ್ಮಾಣ ಆಗ್ತಾ ಇರೋ ‘ವಾರ್ 2’ ಸಿನೆಮಾಗೆ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲಾಗ್ತಾ ಇದೆ. ಯಶ್ ರಾಜ್ ಫಿಲಂಸ್ ಸಂಸ್ಥೆ ಈ ‘ವಾರ್ 2’ ಸಿನೆಮಾಗೆ ಬಂಡವಾಳ ಹಾಕುತ್ತಿದೆ. ‘ವಾರ್’ ಸಿನೆಮಾದಂತೆ ಈ ಸಿನೆಮಾದಲ್ಲೂ ವಿಶೇಷ ಹಾಡನ್ನ ಸಿನೆಮಾ ತಂಡ ಪ್ಲ್ಯಾನ್ ಮಾಡಿದೆ. ಜೂನಿಯರ್ ಎನ್ಟಿಆರ್ ಅವರ ಆಸ್ಕರ್ ಅವಾರ್ಡ್ ವಿನ್ ಆಗಿದ್ದ ‘ನಾಟು ನಾಟು” ಹಾಡಿನಂತೆ ಇರೋ ಹಾಡಿಗೆ ಹೃತಿಕ್ ಹಾಗೂ ಜ್ಯೂನಿಯರ್ ಎನ್ಟಿಆರ್ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗಿದೆ. ‘ನಾಟು ನಾಟು’ ರೀತಿಯ ಹಾಡು ಹಾಗೂ ಡ್ಯಾನ್ಸ್ ‘ವಾರ್ 2’ ಸಿಎನಮಾದ ಹೈಲೈಟ್ ಆಗಲಿದೆ ಎಂದು ಬಾಲಿವುಡ್ ಹಂಗಾಮ ವರದಿ ಮಾಡಿದೆ.
ಈಗಾಗಲೇ ‘ವಾರ್ 2’ ಚಿತ್ರದ ಶೂಟಿಂಗ್ ಆರಂಭವಾಗಿದೆ. ಚಿತ್ರದ ಸೆಟ್ ಫೋಟೋಗಳು ಕೂಡಾ ಲೀಕ್ ಆಗಿವೆ. ಅಯಾನ್ ಮುಖರ್ಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆದಿತ್ಯ ಚೋಪ್ರಾ ಅವರು ದೊಡ್ಡ ಬಜೆಟ್ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ವಾರ್ 2’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಈ ಸಿನಿಮಾ 2025ರಲ್ಲಿ ಆಗಸ್ಟ್ 14ರಂದು ರಿಲೀಸ್ ಆಗಲಿದೆ.
LATEST NEWS
ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ. ಕರಾವಳಿ ಜನರ ರಕ್ತದಲ್ಲಿ ಹಿಂದುತ್ವ ಇದೆ. ಮೋದಿಯ 10 ವರ್ಷದ ಆಡಳಿತವನ್ನು ಜಗತ್ತು ಕೊಂಡಾಡಿದೆ. ಎಲ್ಲಾ ಅಸಾಧ್ಯಗಳನ್ನು ಪ್ರಧಾನಿ ಮೋದಿ ಸಾಧ್ಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಡೀ ದೇಶದ ಜನರಲ್ಲಿ ವಿಶ್ವಾಸ -ಭರವಸೆ ಮೂಡಿಸಿದ್ದು ಮೋದಿ. ರಾಮಮಂದಿರ, ಆರ್ಟಿಕಲ್ 370 ರದ್ದು, ಅಭಿವೃದ್ಧಿ ಎಲ್ಲವೂ ಮೋದಿ ಕಾಲದಲ್ಲಿ ಆಗಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ. ನಾವು ರಕ್ಷಣೆ ಮಾಡ್ತೇವೆ ಎಂದು ಖರ್ಗೆ ಹೇಳ್ತಾರೆ. ಮೋದಿ ಮತ್ತೆ ಪ್ರಧಾನಿ ಆಗಬಾರದು ಅಂತ ಖರ್ಗೆ ಕರೆ ಕೊಡ್ತಾರೆ. ಕಾಂಗ್ರೆಸ್ಸಿಗರು ಅಂಬೇಡ್ಕರ್ ಅವರನ್ನು ಬದುಕಿದ್ದಾಗಲೇ ಕಗ್ಗೊ*ಲೆ ಮಾಡಿದ್ದಾರೆ. ಅಂಬೇಡ್ಕರ್ ರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಬಾಬಾ ಸಾಹೇಬರ ಅಂತ್ಯ ಸಂಸ್ಕಾರಕ್ಕೂ ಅವಕಾಶ ಕೊಟ್ಟಿಲ್ಲ. ಅಂಬೇಡ್ಕರ್ ರ ಪಂಚ ತೀರ್ಥಕ್ಷೇತ್ರ ಅಭಿವೃದ್ಧಿ ಮಾಡಿದ್ದು ಮೋದಿ – ಬಿಜೆಪಿ ಸರಕಾರ ಎಂದರು.
ಇದನ್ನೂ ಓದಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್
DAKSHINA KANNADA
ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!
ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.
ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.
Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.