ಕರಾವಳಿಯಲ್ಲಿ ಕಡಿಮೆಯಾಗುತ್ತಿದೆ ಕೊರೊನಾ ಸೋಂಕು: ಫಲ ನೀಡುತ್ತಿದೆ ಜಿಲ್ಲಾಡಳಿತದ ಕ್ರಮಗಳು..
ಕರಾವಳಿಯಲ್ಲಿ ಕಡಿಮೆಯಾಗುತ್ತಿದೆ ಕೊರೊನಾ ಸೋಂಕು: ಫಲ ನೀಡುತ್ತಿದೆ ಜಿಲ್ಲಾಡಳಿತದ ಕ್ರಮಗಳು..
ಮಂಗಳೂರು : ಕೊರೋನ ವೈರಸ್ ತಡೆಯುವ ನಿಟ್ಟಿನಲ್ಲಿ ಕರಾವಳಿಯ ಜಿಲ್ಲೆಗಳಾದ ದ.ಕ. ಮತ್ತು ಉಡುಪಿ ಜಿಲ್ಲಾಡಳಿತ ಕೈಗೊಂಡ ಕೆಲ ನಿರ್ಣಾಯಕ ಕ್ರಮಗಳು ಫಲ ನೀಡಿವೆ.
ಕೊರೊನಾ ಸೋಂಕನ್ನು ನಿಗ್ರಹಿಸುವಲ್ಲಿ ಯಶಸ್ಸು ಕಂಡಿವೆ. ನಿನ್ನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವೀಕರಿಸಿದ 8 ಮಂದಿಯ ವರದಿಯೂ ನೆಗೆಟಿವ್ ಆಗಿದೆ. 92 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದೆ.
ಇದರೊಂದಿಗೆ ಈವರೆಗೆ 38,813 ಮಂದಿಯ ಸ್ಕ್ರೀನಿಂಗ್ ಮಾಡಿದಂತಾಗಿದೆ. ಈ ಮಧ್ಯೆ ಗುರುವಾರ 24 ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ವೆನ್ಲಾಕ್ ಆಸ್ಪತ್ರೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
3,625 ಮಂದಿ ಹೋಂ ಕ್ವಾರಂಟೈನ್ನಲ್ಲಿದ್ದರೆ, ನಿನ್ನೆ ಇವರ ಸಂಖ್ಯೆ 3,352ಕ್ಕೆ ಇಳಿದಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಇದೀಗ ಯಾರೂ ಕ್ವಾರಂಟೈನ್ನಲ್ಲಿಲ್ಲ.
ಇಎಸ್ಐ ಆಸ್ಪತ್ರೆಯಲ್ಲಿ 12 ಮಂದಿ ಕ್ವಾರಂಟೈನ್ನಲ್ಲಿದ್ದಾರೆ. 2,594 ಮಂದಿ 28 ದಿನದ ಕ್ವಾರಂಟೈನ್ ಅವಧಿಯನ್ನು ಪೂರೈಸಿದ್ದಾರೆ.
ಇನ್ನು.ಜಿಲ್ಲೆಯ 13 ಕಡೆ ಆರಂಭಿಸಲಾದ ಜ್ವರದ ಪ್ರಯೋಗಾಲಯದಲ್ಲಿ ನಿನ್ನೆ 36 ಮಂದಿಯ ತಪಾಸಣೆ ಮಾಡಲಾಗಿದ್ದು ಶಂಕಿತ ಕೊರೋನ ಸೋಂಕು ಪತ್ತೆಯಾಗಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ.
ಇನ್ನು ನೆರೆಯ ಉಡುಪಿ ಜಿಲ್ಲೆಯಲ್ಲಿ ಕೊರೋನಾ ಸಂಪೂರ್ಣ ಹತೋಟಿಯಲ್ಲಿದ್ದು ಯಾವುದೇ ಹೊಸ ಪ್ರಕರಣಗಳು ದಾಖಲಾಗಿಲ್ಲ. ಕರ್ನಾಟಕದಲ್ಲಿ 197 ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗಿದ್ದರೆ 6 ಮಂದಿ ಸಾವನ್ನಪಿದ್ದಾರೆ.
ಇನ್ನು ಮಹಾರಾಷ್ಟ್ರದಲ್ಲಿ 1347 ಪ್ರಕರಣ ದಾಖಲಾಗಿದ್ದರೆ 198 ಜನ ಬಲಿಯಾಗಿದ್ದಾರೆ.ನೆರೆಯ ಕೇರಳದಲ್ಲಿ 356 ಪ್ರಕರಣಗಳು ದಾಖಲಾಗಿದ್ದಾರೆ. ಇಬ್ಬರು ಸಾವನ್ನಪಿದ್ದಾರೆ.
ಒಟ್ಟಾರೆಯಾಗಿ ದೇಶದಲ್ಲಿ 6,725 ಕೊರೊನಾ ಸೋಂಕು ಧೃಡಪಟ್ಟಿದ್ದರೆ ಒಟ್ಟು 227 ಮಂದಿ ಸಾವನ್ನಪ್ಪಿದ್ದಾರೆ.
ಇನ್ನು ವಿಶ್ವವನ್ನು ಗಮನಿಸಿದರೆ 15 ಲಕ್ಷದ 88 ಸಾವಿರ ಜನರು ಸೊಂಕಿಗೆ ತುತ್ತಾದರೆ. 94,745 ಜನ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಇದೇ ಸಂದರ್ಭದಲ್ಲಿ 3 ಲಕ್ಷ 58 ಸಾವಿರ ಜನ ಗುಣಮುಖರಾಗಿದ್ದಾರೆ. ಇದು ಆಶಾದಾಯಕ ಬೆಳವಣಿಗೆಯಾಗಿದೆ.
DAKSHINA KANNADA
ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ ಸರಕಾರ
ಬೆಂಗಳೂರು/ಮಂಗಳೂರು: ಇನ್ನೇನು ನಾಡಹಬ್ಬ ದಸರಾ ಸಮೀಪಿಸುತ್ತಿದೆ. ಈ ಬಾರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ಸರಕಾರ ಸಿದ್ಧತೆ ನಡೆಸುತ್ತಿದೆ. ಖ್ಯಾತ ಸಾಹಿತಿ ಹಂಪ ನಾಗರಾಜಯ್ಯನವರು ಈ ಬಾರಿಯ ದಸರಾವನ್ನು ಉದ್ಘಾಟಿಸಿಲಿದ್ದಾರೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈಗಾಗಲೇ ಘೋಷಣೆ ಮಾಡಿದ್ದಾರೆ.
ಶಾಲಾ ಮಕ್ಕಳಿಗೆ ರಜೆ ಘೋಷಣೆ:
ದಸರಾ ಹಬ್ಬಕ್ಕೆ ಶಾಲಾ ಮಕ್ಕಳಿಗೆ ಸರಕಾರ ರಜೆ ಘೋಷಣೆ ಮಾಡಿದೆ. ಅ.3ರಿಂದ ಅ.20ರವರೆಗೆ ದಸರಾ ರಜೆ ಘೋಷಣೆ ಮಾಡಿದ್ದು, ಸರಕಾರಿ ಶಾಲೆಗಳು, ಅನುದಾನಿತ ಶಾಲೆಗಳು ಮತ್ತು ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ. ಹೊರತಾಗಿ ಸಿಬಿಎಸ್ಸಿ ಹಾಗೂ ಐಎಸ್ಸಿಎಸ್ ಶಾಲೆಗಳಿಗೆ ದಸರಾ ರಜೆ ಅನ್ವಯವಾಗುವುದಿಲ್ಲ. ಯಾಕಂದ್ರೆ ಇವೆರಡು ಕೇಂದ್ರ ಪಠ್ಯಕ್ರಮದಡಿ ಕಾರ್ಯನಿರ್ವಹಿಸುತ್ತಿರುವುದರಿಂದ ಶಾಲಾ ರಜೆ ದಿನಾಂಕ ಹಾಗೂ ರಜಾ ಅವಧಿ ಬೇರೆಯಾಗಿರುತ್ತದೆ.
LATEST NEWS
ಶಿರೂರು ಗುಡ್ಡ ಕುಸಿತ; ಕೊನೆಗೂ ನಾಪತ್ತೆಯಾಗಿದ್ದ ಟ್ರಕ್ ಪತ್ತೆ
ಕಾರವಾರ: ಶಿರೂರು ಭೂ ಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್ ಕೊನೆಗೂ ಪತ್ತೆಯಾಗಿದೆ.
ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಗಂಗಾವಳಿ ನದಿಗೆ ಬಿದ್ದಿತ್ತು. ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು.
ಈಗ ಟ್ರಕ್ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ಸಿಕ್ಕಿ ಬಿದ್ದಿದೆ. ಟ್ರಕ್ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣುಗಳಿವೆ. ಹೀಗಾಗಿ ಮಣ್ಣು ಮತ್ತು ಕಲ್ಲುಗಳನ್ನು ತೆಗೆದು ಟ್ರಕ್ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.
ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಅರ್ಜುನ್ ಮರ ತುಂಬಿಸಿಕೊಂಡು ಟ್ರಕ್ನಲ್ಲಿ ಕೋಝಿಕ್ಕೋಡ್ ಕಡೆಗೆ ಹೋಗುತ್ತಿದ್ದರು.
FILM
ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!
ಹೈದರಾಬಾದ್/ಮಂಗಳೂರು: ಜಾನಿ ಮಾಸ್ಟರ್ ಮೇಲಿರುವ ನೃತ್ಯ ನಿರ್ದೇಶಕಿಯ ಅತ್ಯಾಚಾರ ಆರೋಪಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಜಾನಿ ಮಾಸ್ಟರ್ ಪತ್ನಿ ಆಯಿಷಾ ಮೇಲೂ ಕ್ರಮಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.
ಈಗಾಗಲೇ ಜಾನಿ ಮಾಸ್ಟರ್ ನನ್ನು ಡ್ಯಾನ್ಸ್ ನಿರ್ದೇಶಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದಡಿಯಲ್ಲಿ ಗೋವಾ ಪೊಲೀಸರು ಬಂಧಿಸಿ ಹೈದರಾಬಾದ್ನ ಚಂಚಲ್ ಗುಡಾ ಜೈಲಿಗೆ ಕಳುಹಿಸಿದ್ದಾರೆ. ನೃತ್ಯ ಸಂಯೋಜಕಿಯೊಬ್ಬಳು ನನ್ನ ಮೇಲೆ ಜಾನಿ ಮಾಸ್ಟರ್ ಅತ್ಯಾಚಾರವೆಸಗಿದ್ದಾರೆ ಹಾಗೂ ಅವರ ಪತ್ನಿ ಆಯಿಷಾ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನರಸಿಂಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅರೆಸ್ಟ್..!
ಪ್ರಕರಣದಲ್ಲಿ ಆಯೇಷಾರನ್ನು ಆರೋಪಿಯನ್ನಾಗಿಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಮತ್ತೊಂದೆಡೆ ಶನಿವಾರ(ಸೆ.21) ನರಸಿಂಗಿ ಪೊಲೀಸರು, ಜಾನಿ ಮಾಸ್ಟರ್ ನನ್ನು ಕಸ್ಟಡಿಗೆ ನೀಡುವಂತೆ ಉಪ್ಪಾರಪಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ. ಹತ್ತು ದಿನಗಳ ಕಾಲ ಕಸ್ಟಡಿಗೆ ಕೋರುವ ಸಾಧ್ಯತೆ ಇದೆ. ಫೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದರಿಂದ ಆತನನ್ನು ಸಂಪೂರ್ಣವಾಗಿ ಪ್ರಶ್ನಿಸಲು ಪೊಲೀಸರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಅಲ್ಲದೆ, ಆತನ ಪತ್ನಿ ವಿರುದ್ಧವೂ ಆರೋಪ ಕೇಳಿ ಬಂದಿರುವುದರಿಂದ ಬಂಧನವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.