Connect with us

ಪುಣ್ಯ ಕ್ಷೇತ್ರಗಳಿಗೂ ತಟ್ಟಿದ ಕೊರೋನಾ ಭೀತಿ..! ಕರಾವಳಿಯ ದೇಗುಲಗಳಲ್ಲಿ ಕಡಿಮೆಯಾದ ಭಕ್ತರ ಜಂಗುಳಿ

Published

on

ಪುಣ್ಯ ಕ್ಷೇತ್ರಗಳಿಗೂ ತಟ್ಟಿದ ಕೊರೋನಾ ಭೀತಿ..! ಕರಾವಳಿಯ ದೇಗುಲಗಳಲ್ಲಿ ಕಡಿಮೆಯಾದ ಭಕ್ತರ ಜಂಗುಳಿ

ಪುತ್ತೂರು: ಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಕರಾವಳಿಯ ಪ್ರಸಿದ್ಧ ಧರ್ಮಸ್ಥಳ ಶ್ರೀ ಮಂಜುನಾಥ ಕ್ಷೇತ್ರಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತೀ ಹೆಚ್ಚು ಭಕ್ತರು ಭೇಟಿ ನೀಡಲ್ಪಡುವ ಮುಖ್ಯ ಧಾರ್ಮಿಕ ಕೇಂದ್ರಗಳಾಗಿವೆ.

ಆದರೆ ಇದೀಗ ಕೊರೊನಾ ಭೀತಿ ಹಿನ್ನಲೆಯಲ್ಲಿ ಈ ಎರಡು ಕ್ಷೇತ್ರಗಳಿಗೆ ದೇವರ ದರ್ಶನಕ್ಕೆ ಆಗಮಿಸುವ ಭಕ್ತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಬರುತ್ತಿದ್ದ ಹೊರ ರಾಜ್ಯಗಳ, ಜಿಲ್ಲೆಗಳ ಪ್ರವಾಸಿಗರ ಸಂಖ್ಯೆ ಭಾರೀ ಕಡಿಮೆಯಾಗಿದ್ದು, ಸ್ಥಳೀಯ ವ್ಯಾಪಾರಸ್ಥರು, ಸರಿಯಾದ ವ್ಯಾಪಾರ ಇಲ್ಲದೇ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಕೊರೊನಾ ವೈರಸ್ ಭೀತಿ ಶುರುವಾಗುವ ಮುಂಚೆ ಈ ಎರಡೂ ಕ್ಷೇತ್ರಗಳಿಗೆ ಸ್ಥಳೀಯ ಮತ್ತು ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದರು.

ಕೊರೊನಾ ಎಫೆಕ್ಟ್ ನಂತರ ಸ್ಥಳೀಯ ಪ್ರವಾಸಿಗರ ಭೇಟಿ ಸ್ವಲ್ಪ ಮಟ್ಟಿಗೆ ಕಡಿಮೆಯಾದರೆ, ವಿದೇಶಿ, ಹೊರ ರಾಜ್ಯ ಮತ್ತು ಜಿಲ್ಲೆಗಳ ಪ್ರವಾಸಿಗರ ಆಗಮನದಲ್ಲಿ ಗಣನೀಯ ಇಳಿಕೆಯಾಗಿದೆ.

ಇದರಿಂದಾಗಿ ಪ್ರವಾಸಿಗರನ್ನೇ ನಂಬಿಕೊಂಡು ವ್ಯಾಪಾರ ಮಾಡುತ್ತಿದ್ದವರ ಆದಾಯದಲ್ಲಿ ಅರ್ಧಕ್ಕರ್ಧ ಕುಸಿತ ಕಂಡಿದೆ.

ಹೀಗಾಗಿ ಕ್ಷೇತ್ರಗಳ ಸುತ್ತಮುತ್ತಲಿನ ವ್ಯಾಪಾರಸ್ಥರು ಬೇಸರಕ್ಕೆ ಒಳಗಾಗಿದ್ದು, ಆದಷ್ಟು ಬೇಗ ವೈದ್ಯರು ಕೊರೊನಾ ಸಮಸ್ಯೆಗೆ ಪರಿಹಾರ ನೀಡಲಿ ಎಂದು ದೇವರ ಮೊರೆ ಹೋಗಿದ್ದಾರೆ.

ವಿಡಿಯೋಗಾಗಿ

Click to comment

Leave a Reply

Your email address will not be published. Required fields are marked *

LATEST NEWS

ಇವಿಎಂನಲ್ಲಿ ಪ್ರಧಾನಿ ಮೋದಿ ಚಿತ್ರ ಕಾಣದೆ ಕಂಗಾಲಾದ ಮಹಿಳೆ; ಅಧಿಕಾರಿಗಳೊಂದಿಗೆ ಜಗಳ!

Published

on

ಮಂಗಳೂರು/ನವದೆಹಲಿ : ದೇಶದಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ಶುಕ್ರವಾರ ಬಿರುಸಾಗಿ ನಡೆಯುತ್ತಿದೆ. ಈ ನಡುವೆ ಮೊದಲ ಹಂತದ ಚುನಾವಣೆ ಸಂದರ್ಭ ನಡೆದಿದ್ದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಡೆದಿರುವುದು ರಾಜಸ್ಥಾನದಲ್ಲಿ. ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ರಾಜಸ್ಥಾನದಲ್ಲಿ ನಡೆದಿತ್ತು.

ಈ ವೇಳೆ ಮತದಾರರೊಬ್ಬರು ಅಧಿಕಾರಿಗಳೊಂದಿಗೆ ಜಗಳವಾಡಿರುವ ವಿಚಾರ ಬೆಳಕಿಗೆ ಬಂದಿದೆ. ಇವಿಎಂನಲ್ಲಿ ಪ್ರಧಾನಿ ಮೋದಿ ಚಿತ್ರ ಪ್ರದರ್ಶಿಸಿಲ್ಲ ಏಕೆ ಎಂದು ಮಹಿಳೆ ಮತಗಟ್ಟೆ ಅಧಿಕಾರಿಗಳೊಂದಿಗೆ ಜಗಳ ಮಾಡಿಕೊಂಡಿದ್ದಾರೆ. ಈ ಸುದ್ದಿ ಸದ್ಯ ವೈರಲ್ ಆಗುತ್ತಿದೆ. ಪ್ರಧಾನಿ ಮೋದಿ ಅವರೂ ಪ್ರತಿಕ್ರಿಯೆ ನೀಡಿದ್ದಾರೆ.

ಏನಿದು ಘಟನೆ?

ಏಪ್ರಿಲ್‌ 19 ರಂದು ರಾಜಸ್ಥಾನದಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆದಿದೆ. ಪಿಪ್ರಾಲಿಯ ಬೂತ್‌ಗೆ ಮಹಿಳೆಯರ ಗುಂಪೊಂದು ಮತ ಚಲಾಯಿಸಲು ಬಂದಿದೆ. ಎಲ್ಲರೂ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದರು. ಅಷ್ಟರಲ್ಲಿ ಒಬ್ಬ ಮಹಿಳೆ ಮತ ಚಲಾಯಿಸುವಾಗ, ಇವಿಎಂ ಮಶೀನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಕಾಣಿಸಿಲ್ಲ ಎಂದು ಆಕೆ ಕಂಗಾಲಾಗಿದ್ದಾಳೆ.

ಮಹಿಳೆ ಪೋಲಿಂಗ್ ಅಧಿಕಾರಿಗಳನ್ನು ಕರೆದು ನನ್ನ ಪ್ರೀತಿಯ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಎಲ್ಲಿದೆ ಎಂದು ಕಿಡಿಕಾರಿದ್ದಾರೆ ಎಂದು ತಿಳಿದು ಬಂದಿದೆ. ಆಗ ಅಲ್ಲಿದ್ದ ಅಧಿಕಾರಿಗಳು ವಸ್ತು ಸ್ಥಿತಿಯನ್ನು ವಿವರಿಸಿದರು.

ಫೋಟೋ ಹಾಗೂ ಚುನಾವಣೆ ಚಿಹ್ನೆ ಪ್ರಧಾನಿ ಮೋದಿ ಅವರದ್ದಲ್ಲ. ಅವರ ಪಕ್ಷವನ್ನು ಪ್ರತಿನಿಧಿಸುವ ಅಭ್ಯರ್ಥಿಯದ್ದಾಗಿದೆ ಎಂದು ತಿಳಿಸಿದರು. ಅಲ್ಲದೆ, ಇದು ಮೋದಿ ಅವರ ಚುನಾವಣೆಯಲ್ಲ. ಅವರ ಪಕ್ಷದ ಚುನಾವಣೆ. ಅವರ ಪಕ್ಷದ ಪರವಾಗಿ ಈ ಕ್ಷೇತ್ರದಲ್ಲೂ ಒಬ್ಬ ಅಭ್ಯರ್ಥಿಗೆ ಟಿಕೆಟ್‌ ನೀಡಲಾಗುತ್ತದೆ ಎಂದು ತಿಳಿಸಿದರು. ಇದಾದ ಬಳಿಕ ಅವರು ಮತ ಚಲಾಯಿಸಿದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

ಭಾವುಕರಾದ ಪ್ರಧಾನಿ ಮೋದಿ :

ಈ ಸುದ್ದಿ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ತಲುಪಿದೆ.  ಈ ಬಗ್ಗೆ ಪ್ರಧಾನಿ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ತಾಯಂದಿರು ಮತ್ತು ಸಹೋದರಿಯರ ಈ ವಾತ್ಸಲ್ಯವನ್ನು ನೋಡಿದ ನಂತರ ನನ್ನ ಕಣ್ಣಲ್ಲಿ ನೀರು ಬಂದಿದೆ. ಈ ಋಣವನ್ನು ತೀರಿಸುವ ಸಂಕಲ್ಪ ನನಗೂ ಇದೆ ಎಂದು ಬರೆದುಕೊಂಡಿದ್ದಾರೆ.

ಇನ್ನು ಲಕ್ಷ್ಮಿಕಾಂತ್‌ ಅವರೇ, ಇದು ನಮ್ಮ ಕಾರ್ಯಕರ್ತರ ಜವಾಬ್ದಾರಿಯಾಗಿದೆ. ನಾವೆಲ್ಲಾ ಈ ಸಣ್ಣ ಸಣ್ಣ ಕೆಲಸಗಳತ್ತವೂ ಗಮನ ಹರಿಸಬೇಕಿದೆ. ಮನೆ ಮನೆಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದ್ದಾರೆ.

ಈ ಘಟನೆಯ ಪತ್ರಿಕೆಯ ಕಟಿಂಗ್ ಅನ್ನು ಪ್ರಧಾನಿ ಮೋದಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಪಕ್ಷದ ಕಾರ್ಯಕರ್ತ ಲಕ್ಷ್ಮೀಕಾಂತ್ ಭಾರದ್ವಾಜ್ ಅವರು ಫೋಟೋದೊಂದಿಗೆ ಈ ವಿಚಾರ ಹಂಚಿಕೊಂಡಿದ್ದರು. ಅದನ್ನು ರಿಟ್ವೀಟ್ ಮಾಡಿದ್ದಾರೆ ಪ್ರಧಾನಿ ಮೋದಿ.

ಭಾರತದಲ್ಲಿ ಒಟ್ಟು ಏಳು ಹಂತಗಳಲ್ಲಿ ಚುನಾವಣೆಗಳು ನಡೆಯುತ್ತಿವೆ. ಶುಕ್ರವಾರ (ಏ.26)ರಂದು ಎರಡನೇ ಹಂತದ ಮತದಾನ ನಡೆಯುತ್ತಿದೆ. ಫಲಿತಾಂಶಗಳು ಜೂನ್ 4 ರಂದು ಹೋರ ಬೀಳಲಿದೆ.

Continue Reading

FILM

ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

Published

on

ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು,  ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.

ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending