ಭ್ರಮರಾಂಭಿಕೆಗೂ ತಟ್ಟಿದ ಕೊರೊನಾ ಛಾಯೆ.. ಕಟೀಲಿನಲ್ಲಿ ರಂಗಪೂಜೆ, ಯಕ್ಷಗಾನ ರದ್ದು
Published
5 years agoon
By
Adminಭ್ರಮರಾಂಭಿಕೆಗೂ ತಟ್ಟಿದ ಕೊರೊನಾ ಛಾಯೆ.. ಕಟೀಲಿನಲ್ಲಿ ರಂಗಪೂಜೆ, ಯಕ್ಷಗಾನ ರದ್ದು
ಕಟೀಲು: ಕರಾವಳಿ ದೇವಸ್ಥಾನಗಳಿಗೂ ಕೊರೊನಾ ಬಿಸಿ ತಟ್ಟಿದ್ದು, ದೇವಸ್ಥಾನ, ಚರ್ಚ್, ಮಸೀದಿಗಳ ಸೇವೆಗಳನ್ನು ರದ್ದುಗೊಳಿಸುವಂತೆ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಹಿನ್ನಲೆಯಲ್ಲಿ ಇತಿಹಾಸ ಪ್ರಸಿದ್ದ ಪುಣ್ಯ ಕ್ಷೇತ್ರಗಳಲ್ಲೊಂದಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದಿನಂಪ್ರತಿ ಹಾಗೂ ಸೇವಾರೂಪಗಳಲ್ಲಾಗುವ ಸೇವೆಗಳನ್ನು ರದ್ದುಗೊಳಿಸಲಾಗಿದೆ.
ಪ್ರತೀದಿನ ಕ್ಷೇತ್ರದಲ್ಲಿ ಹರಕೆಯ ರೂಪದಲ್ಲಿ ಒಂಭತ್ತು ರಂಗಪೂಜೆಗಳು ನಡೆಯುತ್ತಿತ್ತು.
ನಿನ್ನೆಯೂ (ಮಾರ್ಚ್ 17) 9 ರಂಗಪೂಜೆ ನಡೆದಿದ್ದು, ಇಂದಿನಿಂದ ಈ ಸೇವೆಯೂ ನಡೆಯೋದಿಲ್ಲ.
ಸುಮಾರು ಒಂದು ವರ್ಷಗಳ ತನಕ ರಂಗಪೂಜೆಯ ಬುಕ್ಕಿಂಗ್ ಆಗಿತ್ತು. ಇದೀಗ ಕೊರೊನಾ ವೈರಸ್ ಹಿನ್ನಲೆ ಸರಕಾರದ ಮುಂದಿನ ಆದೇಶ ಬರುವವರೆಗೂ ಕಾಯಬೇಕಾಗಿದೆ.
ದೇವಳದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸೇವೆ ನಿಂತಿದ್ದು, ಭಕ್ತ ಸಂಕುಲ ತಮ್ಮ ಮನಸ್ಸಿನಲ್ಲಿಯೇ ದೇವರನ್ನು ಪೂಜಿಸುವಂತಾಗಿದೆ.
ಇನ್ನು ಕಟೀಲು ಕ್ಷೇತ್ರದ ಇತಿಹಾಸದಲ್ಲೇ ತುರ್ತು ಪರಿಸ್ಥಿತಿ ಸಂದರ್ಭದಲ್ಲೂ ಅಲುಗಾಡದ ಯಕ್ಷಗಾನ ಸೇವೆ ಈ ಬಾರಿ ಮಾಹಾಮಾರಿ ಭೀತಿಗೆ ರದ್ದಾಗಿದೆ.
ಜಿಲ್ಲಾಡಳಿತದ ಆದೇಶದ ಮೇರೆಗೆ ಯಕ್ಷಗಾನ ಪ್ರದರ್ಶನ ಸ್ಥಗಿತಗೊಂಡಿದೆ.
ಇಂದಿನಿಂದ ಆರು ಮೇಳಗಳ ಯಕ್ಷಗಾನಕ್ಕೆ ತಡೆ ಬಿದ್ದಿದ್ದು, ದೇವಳದ ಮುಂಭಾಗ ಸಂಪ್ರದಾಯದ ಪ್ರಕಾರ ಒಂದು ಗಂಟೆ ಪ್ರರ್ದರ್ಶನ ಮಾಡಲಾಗುತ್ತೆ.
ಸಂಜೆ 7 ಗಂಟೆಯಿಮದ 8 ಗಂಟೆಯವರೆಗೆ ಪ್ರದರ್ಶನ ನಡೆಯಲಿದೆ. ಯಕ್ಷಗಾನ ನಿಲ್ಲಬಾರದೆಂಬ ನಂಬಿಕೆ ಹಿನ್ನಲೆಯಲ್ಲಿ ಒಂದು ಗಂಟೆ ಯಕ್ಷಗಾನ ಪ್ರದರ್ಶನ ನಡೆಸಲಾಗುತ್ತೆ ಅಂತ ಕಟೀಲು ಯಕ್ಷಗಾನ ಮೇಳ ಆಡಳಿತ ಮಂಡಳಿ ತಿಳಿಸಿದೆ.
ಕೊರೋನ ಜಾಗೃತಿ ಬಗ್ಗೆ ದೇವಳದಲ್ಲಿ ಅಲ್ಲಲ್ಲಿ ಅನೇಕ ಬ್ಯಾನರ್ ಗಳನ್ನು ಅಳವಡಿಸಲಾಗಿದ್ದು, ದೇವಳಕ್ಕೆ ಬರುವ ಭಕ್ತರ ಸಂಖ್ಯೆಯಲ್ಲಿ ಕೂಡ ಗಣನೀಯ ಇಳಿಮುಖವಾಗಿದೆ.
ದೇವಳದದಲ್ಲಿ ಅನೇಕ ಸರಳ ವಿವಾಹ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಸರಳ ವಿವಾಹಗಳೂ ರದ್ದಾಗಲಿದೆ.
ಭಕ್ತರಿಲ್ಲದೆ ಜಗನ್ಮಾತೆ ಕ್ಷೇತ್ರ ಬಣಗುಟ್ಟುತ್ತಿದ್ದು, ಕೊರೊನಾ ಎಂಬ ಹೆಮ್ಮಾರಿಯನ್ನು ಆದಿಮಾಯೆ, ಜಗನ್ಮಾತೆ ಕಟೀಲು ದುರ್ಗಾಪರಮೇಶ್ವರಿಯೇ ನಿಗ್ರಹಿಸಬೇಕಾಗಿದೆ.
video
You may like
LATEST NEWS
ಶಬರಿಮಲೆಯಿಂದ ವಾಪಸ್ ಆಗುವಾಗ ಭೀಕರ ಅಪಘಾತ: ಇಬ್ಬರು ಅಯ್ಯಪ್ಪ ಭಕ್ತರು ಸಾವು!
Published
10 minutes agoon
10/01/2025By
NEWS DESK2ಚಾಮರಾಜನಗರ: ಶಬರಿಮಲೆಗೆ ತೆರಳಿ ವಾಪಸ್ ಆಗುತ್ತಿದ್ದ ವೇಳೆ, ಭೀಕರವಾದಂತಹ ಅಪಘಾತ ಸಂಭವಿಸಿದ್ದು, ಈ ಒಂದು ಅಪಘಾತದಲ್ಲಿ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮೂಲದ ಇಬ್ಬರು ಅಯ್ಯಪ್ಪ ಭಕ್ತರು ಸಾವನ್ನಪ್ಪಿದ್ದು, ಉಳಿದ ಮೂವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಕೊಯಮತ್ತೂರಿನಲ್ಲಿ ನಡೆದಿದೆ.
ಶಬರಿ ಮಲೆಯಿಂದ ಕೊಳ್ಳೇಗಾಲಕ್ಕೆ ವಾಪಸ್ ಬರುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ.ಅಯ್ಯಪ್ಪ ಭಕ್ತರಾದ ನಾಗಣ್ಣ (66) ವೆಂಕಟದ್ರಿ (70) ಸಾವನ್ನಪ್ಪಿದ್ದರೆ, ಘಟನೆಯಲ್ಲಿ ಮಹೇಶ್ ಕುಮಾರ್, ಸ್ವಾಮಿ ಹಾಗೂ ದೊರೆಸ್ವಾಮಿಗೆ ಗಂಭೀರವಾದ ಗಾಯಗಳಾಗಿದ್ದು ಕೊಯಮತ್ತೂರು ಆಸ್ಪತ್ರೆಯಲ್ಲಿ ಮೂವರಿಗೂ ಚಿಕಿತ್ಸೆ ಮುಂದುವರೆದಿದೆ.
DAKSHINA KANNADA
ಕರಾವಳಿ : ಏರುಪೇರಾಗುತ್ತಿರುವ ಹವಮಾನ ; ಹೆಚ್ಚುತ್ತಿರುವ ಕಾಯಿಲೆ
Published
11 minutes agoon
10/01/2025ಕರಾವಳಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನದಲ್ಲಿ ಏರುಪೇರಾಗುತ್ತಿದೆ. ಮುಂಜಾನೆ ಚಳಿ, ಮಧ್ಯಾಹ್ನ ಬಿಸಿಲು ಕಾಣಿಸಿ ಕೊಂಡು ವೈರಲ್ ಕಾಯಿಲೆಗಳಿಗೆ ವೇದಿಕೆಯಾಗುತ್ತಿದೆ. ಡಿಸೆಂಬರ್, ಜನವರಿಯಲ್ಲಿ ಚಳಿಗಾಲ ಸಾಮಾನ್ಯವಾಗಿ ಆರಂಭವಾಗುತ್ತದೆ. ಆದರೆ ಈ ಬಾರಿ ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ಚಳಿ ತುಸು ಹೆಚ್ಚು ಕಾಣಿಸಿಕೊಳ್ಳುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆರೋಗ್ಯ ಇಲಾಖೆ ಕೂಡ ಆರೋಗ್ಯದ ಕುರಿತು ಹೆಚ್ಚಿನ ಕಾಳಜಿ ವಹಿಸಿಕೊಳ್ಳಿ ಎಂದು ಮಾಹಿತಿ, ಜಾಗೃತಿ ನೀಡುತ್ತಿದ್ದರೂ, ಪದೇ ಪದೆ ಚಳಿಯಿಂದಾಗಿ ಶೀತ, ಜ್ವರ, ಕೆಮ್ಮು, ಅಸ್ತಮಾದಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ವೈದ್ಯರ ಬಳಿಗೆ ಹೋಗಿ ಔಷಧ ಪಡೆದುಕೊಳ್ಳುವವರ ಸಂಖ್ಯೆಯೂ ಹೆಚ್ಚಳಗೊಂಡಿದೆ.
ಪರೀಕ್ಷೆ ಜತೆಗೆ ಕಾಯಿಲೆಗಳ ಚಿಂತೆ :
ಜನವರಿ ತಿಂಗಳಲ್ಲಿ ಬಹಳಷ್ಟು ಶಾಲಾ-ಕಾಲೇಜುಗಳಲ್ಲಿ ಪರೀಕ್ಷಾ ಸಮಯ ಆದರೆ ಅನಾರೋಗ್ಯದಿಂದ ಬಳಲುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆಯಿಂದ ತಪ್ಪಿಸಿಕೊಳ್ಳಬಾರದು ಎನ್ನುವ ಉದ್ದೇಶದಿಂದ ಶಾಲೆಗೆ ಹಾಜರಾಗುತ್ತಿದ್ದಾರೆ. ಮಕ್ಕಳಿಂದ ಮಕ್ಕಳಿಗೆ ಜ್ವರ ಹರಡುವ ಪ್ರಮೇಯ ಹೆಚ್ಚಾಗಿರುವುದರಿಂದ ಮಕ್ಕಳ ಆರೋಗ್ಯದ ಕುರಿತು ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಶಿಕ್ಷಣ ಇಲಾಖೆಗೆ ಸೂಚನೆ ರವಾನಿಸುವ ಕೆಲಸ ಮಾಡಿದೆ.
ಕರಾವಳಿಯಲ್ಲಿ ಚಳಿ ಇಳಿಕೆ ಸಾಧ್ಯತೆ :
ಉತ್ತರ ಭಾರತದಿಂದ ಬೀಸುತ್ತಿರುವ ಗಾಳಿ ಕಡಿಮೆಯಾಗಿ ಬಂಗಾಳಕೊಲ್ಲಿ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಮಾಣ ಜಾಸ್ತಿಯಾಗುವ ಕಾರಣ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಉಂಟಾಗಲಿದೆ. ಇದರಿಂದ ಚಳಿ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದೆ. ಜ.13ರಂದು ಕರಾವಳಿ, ಮಲೆನಾಡು ಭಾಗದಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಬಳಿಕ ಚಳಿಯ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದ್ದು, ವಾತಾವರಣ ದಲ್ಲಿ ತೇವಾಂಶ ಇದ್ದರೆ ಚಳಿ ಕಡಿಮೆಯಾಗಬಹುದು. ಆದರೆ ಒಣಹವೆ ಇದ್ದರೆ ಮಾತ್ರ ಚಳಿ ಏರಿಕೆಯಾಗಲಿದೆ. ಕೆಲವು ದಿನಗಳಿಂದ ಮಂಗಳೂರು ನಗರ ವ್ಯಾಪ್ತಿಯಲ್ಲಿ ಮುಂಜಾನೆ ಕನಿಷ್ಠ ತಾಪಮಾನ ಇಳಿಕೆಯಾಗಿ 20-21 ಡಿ.ಸೆ. ಆಸುಪಾಸಿನಲ್ಲಿದೆ. ಗ್ರಾಮಾಂತರ ಪ್ರದೇಶದಲ್ಲಿ ಇನ್ನೂ 1-2 ಡಿ.ಸೆ.ನಷ್ಟು ಇಳಿಕೆಯಾಗುತ್ತಿದೆ. ಗ್ರಾಮಾಂತರ ಭಾಗದಲ್ಲಿ ಮುಂಜಾನೆ 8-9 ಗಂಟೆಯವರೆಗೂ ಚಳಿ ಅನುಭವವಾಗುತ್ತಿದೆ. ಹವಾಮಾನ ಇಲಾಖೆಯು ಉತ್ತರ ಕನ್ನಡ ಜಿಲ್ಲೆ ಸಹಿತ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಶೀತ ಗಾಳಿ ಬೀಸುವ ಎಚ್ಚರಿಕೆ ನೀಡಿದ್ದು, ಕನಿಷ್ಢ ತಾಪಮಾನ ವಾಡಿಕೆಗಿಂತ ಇನ್ನೂ 2-4 ಡಿ.ಸೆ. ವರೆಗೆ ಕಡಿಮೆಯಾಗುವ ಸಾಧ್ಯತೆಯಿದೆ.
ಮಂಗಳೂರು/ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲಾ ಆರೋಪಿಗಳು ಇಂದು(ಜ.10) ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್ಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಆರೋಪಿಗಳು ಕೋರ್ಟ್ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಹಾಗಾಗಿ ಇಂದು ರೇಣುಕಾ ಸ್ವಾಮಿ ಕೊ*ಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಜಾಮೀನು ಸಿಕ್ಕ ಬಳಿಕ ಇದೇ ಮೊದಲ ಬಾರಿಗೆ ರೇಣುಕಾ ಸ್ವಾಮಿ ಕೊ*ಲೆ ಆರೋಪಿಗಳೆಲ್ಲ ಒಟ್ಟಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಪವಿತ್ರಾ ಗೌಡ, ಇತರೆ ಆರೋಪಿಗಳು ತಮ್ಮ ತಮ್ಮ ವಕೀಲರೊಡನೆ ಕೋರ್ಟ್ಗೆ ಹಾಜರಾಗಿದ್ದರು. ದರ್ಶನ್, ನಟ ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಬಂದಿದ್ದು, ಅವರೊಂದಿಗೆ ವಕೀಲರು ಸಹ ಆಗಮಿಸಿದ್ದರು.
ಇದನ್ನೂ ಓದಿ : ದಂಪತಿ ಹಾಗೂ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರ ಶ*ವ ಪತ್ತೆ!
ನ್ಯಾಯಾಲಯಕ್ಕೆ ಹಾಜರಾದ ಎಲ್ಲಾ ಆರೋಪಿಗಳ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದರು.