Connect with us

ಮೇ 31ರ ವರೆಗೆ ಮತ್ತೆ ಲಾಕ್: ಲಾಕ್ ಡೌನ್ 4.0 ನಲ್ಲಿ ಏನಿರುತ್ತೆ.? ಏನಿರಲ್ಲ.?….

Published

on

ಮೇ 31ರ ವರೆಗೆ ಮತ್ತೆ ಲಾಕ್: ಲಾಕ್ ಡೌನ್ 4.0 ನಲ್ಲಿ ಏನಿರುತ್ತೆ.? ಏನಿರಲ್ಲ.?….

ನವದೆಹಲಿ: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸದ್ಯ ಇರುವ ಲಾಕ್ ​ಡೌನ್​ ಅವಧಿಯನ್ನು ಇನ್ನೂ ಎರಡು ವಾರಗಳ ಕಾಲ ಅಂದರೆ ಮೇ 31ರ ವರೆಗೆ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ನೀಡಿದೆ.

ಉನ್ನತ ವಿಪತ್ತು ನಿರ್ವಹಣಾ ಸಂಸ್ಥೆಯಾಗಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಗೃಹ ಸಚಿವಾಲಯಕ್ಕೆ ನೀಡಿದ ಶಿಫಾರಸುಗಳ ಅನ್ವಯ ಈ ಆದೇಶ ಪ್ರಕಟವಾಗಿದೆ.

ದೇಶದಲ್ಲಿ ಕೊವಿಡ್​-19 ತಡೆಗಟ್ಟಲು ಇನ್ನೂ ಹೆಚ್ಚಿನ ನಿಯಂತ್ರಣಾ ಕ್ರಮಗಳು ಅಗತ್ಯ ಇರುವ ಕಾರಣ ಲಾಕ್ ​ಡೌನ್​ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

ಇದೀಗ ಮೇ 31ರ ವರೆಗೂ ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆಯಾಗಿದ್ದು, ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು,

ರಾಜ್ಯ ಸರ್ಕಾರ, ಕೇಂದ್ರ ಸರ್ಕಾರಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಕೋವಿಡ್- 19 ಸೋಂಕು ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹಂಚಿಕೊಳ್ಳುವ ಸಂಖ್ಯೆಗಳನ್ನು ಗಣನೆಗೆ ತೆಗೆದುಕೊಂಡ ಬಳಿಕ,

ಕೆಂಪು, ಹಸಿರು ಮತ್ತು ಹಳದಿ ವಲಯವನ್ನಾಗಿ ರೂಪಿಸುವ ನಿರ್ಧಾರವನ್ನು ಆಯಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಸರ್ಕಾರಕ್ಕೆ ಬಿಡಲಾಗಿದೆ.

ಲಾಕ್ ​ಡೌನ್​4.0 ರ ಹೊಸ ಮಾರ್ಗ ಸೂಚಿಯಲ್ಲಿ ಏನಿರುತ್ತೆ.?.. ಏನಿರಲ್ಲ.?.. ಇಲ್ಲಿದೆ ಮಾಹಿತಿ….

  • ನಾಲ್ಕನೇ ಹಂತದ ಲಾಕ್​ ಡೌನ್ ನಲ್ಲಿಯೂ ಶಾಲೆ, ಕಾಲೇಜು ಸೇರಿ ಎಲ್ಲ ರೀತಿಯ ಶಿಕ್ಷಣ ಸಂಸ್ಥೆಗಳೂ ಬಂದ್​ ಇರಲಿವೆ. ಆನ್ ​ಲೈನ್ ಕಲಿಕೆ ಮುಂದುವರಿಯಲಿದೆ.
  • ಪ್ರಯಾಣಿಕರಿಗೆ ವಾಯು ಮಾರ್ಗ, ಮೆಟ್ರೋ ಸಂಚಾರ ಇರುವುದಿಲ್ಲ. ವೈದ್ಯಕೀಯ ತುರ್ತು ಸೇರಿ ಮತ್ತಿತರ ಅನಿವಾರ್ಯ ಸಂದರ್ಭಗಳಲ್ಲಿ ಅನುಮತಿ ಪಡೆಯಬೇಕು.
  • ಹೋಟೆಲ್​ ರೆಸ್ಟೋರೆಂಟ್​, ಆತಿಥ್ಯ ಸೇವೆಗಳಿಗೆ ಅವಕಾಶ ಇಲ್ಲ. ಆದರೆ ಯಾವುದಾದರೂ ಹೋಟೆಲ್​, ಲಾಡ್ಜ್ ​ಗಳಲ್ಲಿ ವೈದ್ಯರು, ಪೊಲೀಸ್, ಸರ್ಕಾರಿ ಅಧಿಕಾರಿಗಳು, ಆರೋಗ್ಯ ಕಾರ್ಯಕರ್ತರು ಉಳಿದುಕೊಂಡಿದ್ದರೆ ಅಂತಹ ಹೋಟೆಲ್​ ಗಳಿಗೆ ಮತ್ತು ಕ್ವಾರಂಟೈನ್​ ವ್ಯವಸ್ಥೆ ಕಲ್ಪಿಸಿರುವ ಹೋಟೆಲ್​, ರೆಸ್ಟೋರೆಂಟ್​ಗಳಿಗೆ ವಿನಾಯಿತಿ ನೀಡಲಾಗುವುದು.
  • ಜೊತೆಗೆ ಕೊರೊನಾ ಕರ್ತವ್ಯದಲ್ಲಿರುವ ಆರೋಗ್ಯ ಕಾರ್ಯಕರ್ತರು, ಪೊಲೀಸ್, ಸರ್ಕಾರಿ ಅಧಿಕಾರಿಗಳಿಗಾಗಿ ಬಸ್​ ಡಿಪೋಗಳಲ್ಲಿ, ರೈಲ್ವೆ ಸ್ಟೇಶನ್​ ಗಳಲ್ಲಿ, ಏರ್ ​ಪೋರ್ಟ್​ಗಳಲ್ಲಿ ಕ್ಯಾಂಟೀನ್​ ನಡೆಸುತ್ತಿರುವವರು ಕೆಲಸ ಪ್ರಾರಂಭಿಸಬಹುದು. ಆದರೆ ಇಲ್ಲಿ ಯಾವುದೇ ಸಾರ್ವಜನಿಕರಿಗೆ ಅವಕಾಶ ಇಲ್ಲ. ಹೋಟೆಲ್​, ರೆಸ್ಟೋರೆಂಟ್​ ಗಳು ತಿನಿಸು, ಊಟ ತಯಾರಿಸಿ ಪಾರ್ಸಲ್​, ಹೋಂ ಡೆಲೆವರಿ ನೀಡಬಹುದು.
  • ಎಲ್ಲ ಸಿನಿಮಾ ಮಂದಿರಗಳು, ಶಾಪಿಂಗ್​ ಮಾಲ್​ಗಳು, ಜಿಮ್​, ಸ್ವಿಮ್ಮಿಂಗ್​ ಪೂಲ್​, ಮನರಂಜನಾ ಸ್ಥಳಗಳು, ಬಾರ್, ಅಡಿಟೋರಿಯಂ, ಅಸೆಂಬ್ಲಿ ಹಾಲ್ ​ಗಳನ್ನು ತೆರೆಯುವಂತಿಲ್ಲ. ಕ್ರೀಡಾ ಸಂಕೀರ್ಣಗಳು, ಕ್ರೀಡಾಂಗಣಗಳನ್ನು ತೆರೆಯಲು ಅವಕಾಶ ನೀಡಲಾಗುವುದು. ಆದರೆ ಅಲ್ಲಿ ಪ್ರೇಕ್ಷಕರಿಗೆ ಅವಕಾಶ ಇರುವುದಿಲ್ಲ.
  • ಸಾಮಾಜಿಕ, ರಾಜಕೀಯ, ಕ್ರೀಡಾ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವುದನ್ನು, ಗುಂಪು ಗೂಡುವುದನ್ನು, ದೊಡ್ಡ ಪ್ರಮಾಣದಲ್ಲಿ ಸಭೆ ಸಮಾರಂಭಗಳನ್ನು ನಡೆಸುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.
  • ದೇಶಾದ್ಯಂತ ಯಾವುದೇ ಧಾರ್ಮಿಕ ಕ್ಷೇತ್ರಗಳಿಗೆ, ಪ್ರದೇಶಗಳಿಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ. ಅದರಲ್ಲೂ ಧಾರ್ಮಿಕ ಸಭೆಯನ್ನು ನಡೆಸುವುದಕ್ಕೆ ಕಟ್ಟುನಿಟ್ಟಾಗಿ ನಿರ್ಬಂಧ ವಿಧಿಸಲಾಗಿದೆ.

3 ವರ್ಗಗಳನ್ನಾಗಿ ವಿಂಗಡಿಸಿದ ಕೇಂದ್ರ ಸರ್ಕಾರ:

ಕೇಂದ್ರ ಸರ್ಕಾರವು ಮಾರ್ಗಸೂಚಿಯಲ್ಲಿ ಮೂರು ವಿಧಗಳನ್ನು ವಿಂಗಡಿಸಲಾಗಿದೆ.

ಮೊದಲೇ ವರ್ಗದಲ್ಲಿ 10 ವರ್ಷದೊಳಗಿನ ಮಕ್ಕಳಿದ್ದು, ಎರಡನೇ ವರ್ಗದಲ್ಲಿ 60 ವರ್ಷದ ಮೇಲ್ಪಟ್ಟ ವೃದ್ಧರು ಹಾಗೂ ಮೂರನೇ ವರ್ಗದಲ್ಲಿ ಅನಾರೋಗ್ಯಕ್ಕೆ ತುತ್ತಾದವರನ್ನು ಗುರುತಿಸಲಾಗಿದೆ.

ಈ ಮೂರು ವರ್ಗದ ಜನರು ಮನೆಗಳಿಂದ ಹೊರ ಬರದಂತೆ ಎಚ್ಚರಿಕೆ ನೀಡಲಾಗಿದೆ.

ಯಾವುದಕ್ಕೆ ಅನುಮತಿ:

ಕಂಟೈನ್ ಮೆಂಟ್ ವಲಯ ಹೊರತುಪಡಿಸಿದಂತೆ ಉಳಿದ ಕಡೆಗಳಲ್ಲಿ ಸಾರಿಗೆ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆಟೋ, ಟ್ಯಾಕ್ಸಿಗಳು ಕಾರ್ಯನಿರ್ವಹಿಸಬಹುದಾಗಿದೆ.

ಕ್ರೀಡಾ ಕಾಂಪ್ಲೆಕ್ಸ್ ಗಳು, ಸ್ಟೇಡಿಯಂಗಳನ್ನು ತೆರೆಯಬಹುದು, ಆದರೆ ವೀಕ್ಷಕರಿಗೆ ಪ್ರವೇಶ ನೀಡುವಂತಿಲ್ಲ.

Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ: ಅನ್ಯಕೋಮಿನವರ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತವೇ ಮುಖ್ಯ ಕಾರಣ : ಸುನಿಲ್ ಕುಮಾರ್

Published

on

ಉಡುಪಿ : ರಾಜ್ಯದಲ್ಲಿ ಅನ್ಯಕೋಮಿನವರು ದೊಡ್ಡ ಪ್ರಮಾಣದಲ್ಲಿ ವಿಜ್ರಂಭಿಸಲು ಆರಂಭ ಮಾಡಿದ್ದಾರೆ. ರಾಜ್ಯದಲ್ಲಿ ಒಂದಾದ ನಂತರ ಒಂದು ಘಟನೆಗಳು ನಡೆಯುತ್ತಿದೆ. ಅನ್ಯಕೋಮಿನವರ ಈ ಪ್ರಮಾಣದ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತ ಮತ್ತು ಧೋರಣೆಯೇ ಮುಖ್ಯ ಕಾರಣ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದರು.


ಹುಬ್ಬಳ್ಳಿಯ ನೇಹಾ ಹಿರೇಮಠ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಶನಿವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯನವರು ನೇಹಾ ಕುಟುಂಬಕ್ಕೆ ಸಾಂತ್ವನ ಹೇಳುವ ಬದಲು ವೈಯಕ್ತಿಕ ಘಟನೆ ಎಂದು ಹೇಳುತ್ತಾರೆ.

ಇದನ್ನೂ ಓದಿ : ನೇಹಾ ಹ*ತ್ಯೆ ಪ್ರಕರಣ : ಆಕ್ರೋಶ ಹೊರ ಹಾಕಿದ ಸಿನಿತಾರೆಯರು

ಮುಖ್ಯಮಂತ್ರಿಯಾದವರು ಇಂತಹ ಘಟನೆಯಾದಾಗ ಜಾರಿಕೊಂಡರೆ ರಾಜ್ಯದ ರಕ್ಷಣೆ ಯಾರು ಮಾಡಬೇಕು? ರಾಮೇಶ್ವರಂ ಬಾಂಬ್ ಸ್ಫೋಟ, ಪಾಕ್ ಜಿಂದಾಬಾದ್, ಕೊ*ಲೆ ಸಂದರ್ಭದಲ್ಲಿ ಸಿಎಂ ಮಾತನಾಡುವುದಿಲ್ಲ. ಹಾಡು ಹಗಲೇ ಹ*ತ್ಯೆಯಾದಾಗ ಕಠಿಣ ಧೋರಣೆ ವಹಿಸಬೇಕಿತ್ತು. ಲವ್ ಜಿ*ಹಾದ್, ಮತಾಂ*ಧತೆ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಗರಿಗೆದರಿದೆ. ರಾಜ್ಯದ ರಕ್ಷಣೆ ಕಾಂಗ್ರೆಸ್ ನಿಂದ ಅಸಾಧ್ಯ. ಸಮಾಜ ದೊಡ್ಡ ಪ್ರಮಾಣದಲ್ಲಿ ಜಾಗೃತವಾಗ ಬೇಕಾದ ಅನಿವಾರ್ಯತೆ ಇದೆ ಎಂದರು.

 

Continue Reading

FILM

ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!

Published

on

ಮಲಯಾಳಂನ ಮಂಜುಮ್ಮೆಲ್ ಬಾಯ್ಸ್ ಭಾರೀ ಯಶಸ್ಸನ್ನು ಗಳಿಸಿದ ಚಿತ್ರ. ಚಿತ್ರ ನೋಡಿ ಮತ್ತೆ ಮತ್ತೆ ವೀಕ್ಷಿಸಲು ಥಿಯೇಟರ್ ಗೆ ಜನ ಲಗ್ಗೆ ಇಡುತ್ತಿದ್ದಾರೆ. ಮಲಯಾಳಂ ಸಿನಿ ಪ್ರಿಯರು ಚಿತ್ರ ನೋಡಿ ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ಸಿನಿಮಾ ಬಂದ್ರೂ ಅದು ಓಟಿಟಿಯಲ್ಲಿ ಯಾವಾಗ ಬರುತ್ತೆ ಅಂತ ಕಾಯೋದು ಸಹಜ. ಇದೀಗ ‘ಮಂಜುಮ್ಮೆಲ್ ಬಾಯ್ಸ್’ ಸರದಿ.

ಅತಿ ಹೆಚ್ಚು ಗಳಿಕೆ :


‘ಮಂಜುಮ್ಮೆಲ್ ಬಾಯ್ಸ್’ ಸರಳ ಕಥಾಹಂದರ ಹೊಂದಿದ್ದರೂ ಅದ್ಭುತವಾಗಿ ಕಟ್ಟಿಕೊಡಲಾಗಿದೆ. ಚಿತ್ರವನ್ನು ಚಿದಂಬರಂ ಮನೋಜ್ಞವಾಗಿ ಚಿತ್ರಿಸಿದ್ದಾರೆ. ಫೆಬ್ರವರಿ 22 ರಂದು ಈ ಚಿತ್ರ ತೆರೆಕಂಡಿತ್ತು. ಬಾಕ್ಸ್ ಆಫೀಸ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈಗಾಗಲೇ ಗ್ರಾಸ್ ಕಲೆಕ್ಷನ್ 200 ಕೋಟಿ ರೂಪಾಯಿ ದಾಟಿದೆ. ಮಲಯಾಳಂನಲ್ಲಿ ಅತಿ ಹೆಚ್ಚು ಗಳಿಕೆ ಕಂಡ ಸಿನಿಮಾ ಎಂಬ ಹೆಗ್ಗಳಿಕೆ ಗಳಿಸಿದೆ.


ಶೌಬಿನ್ ಶಾಹಿರ್, ಶ್ರೀನಾಥ್ ಬಾಸಿ, ಬಾಲು ವರ್ಗೀಸ್, ಗಣಪತಿ ಸೇರಿದಂತೆ ಸಾಕಷ್ಟು ಜನ ಕಲಾವಿದರು ಚಿತ್ರದಲ್ಲಿ ಪಾತ್ರವಾಗಿದ್ದಾರೆ. ಅಂದಾಜು 20 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣವಾಗಿದ್ದ ಸ್ಟಾರ್ ನಟರಿಲ್ಲದ ಈ ಸಿನಿಮಾ 200 ಕೋಟಿ ರೂ. ಕಲೆಕ್ಷನ್ ಮಾಡಿರೋದು ಆಶ್ಚರ್ಯ ಹುಟ್ಟು ಹಾಕಿದೆ.

ಓಟಿಟಿಯಲ್ಲಿ ಯಾವಾಗ ?

‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾವನ್ನು ಥಿಯೇಟರ್ ಅಂಗಳದಲ್ಲಿ ನೋಡಿ ಎಂಜಾಯ್ ಮಾಡಿದವರು ಅನೇಕ ಮಂದಿ ಇದ್ದಾರೆ. ಇದೀಗ ಸಿನಿಮಾ ಓಟಿಟಿಯಲ್ಲಿ ಯಾವಾಗ ಅನ್ನೋ ಪ್ರಶ್ನೆ ಹುಟ್ಟಿತ್ತು. ಇದಕ್ಕೆ ಉತ್ತರವೂ ಸಿಕ್ಕಿದೆ.

ಡಿಸ್ನಿ ಪ್ಲಸ್ ಹಾಟ್‌ಸ್ಟರ್‌ನಲ್ಲಿ ಮೇ 3 ರಂದು ಸ್ಟ್ರೀಮಿಂಗ್ ಆಗುವುದು ಬಹುತೇಕ ಖಚಿತವಾಗಿದೆ. ಫೆಬ್ರವರಿ 22 ರಂದು ತೆರೆಗೆ ಬಂದಿದ್ದ ಸಿನಿಮಾ ಈಗಾಗಲೇ 50 ದಿನ ಪೂರೈಸಿದೆ. ಸದ್ಯ ತೆಲುಗು, ತಮಿಳು, ಕನ್ನಡಕ್ಕೂ ಸಿನಿಮಾ ಡಬ್ ಆಗಿದ್ದು, ಏಕಕಾಲಕ್ಕೆ ಓಟಿಟಿಯಲ್ಲಿ ಸ್ಕ್ರೀಮಿಂಗ್ ಆಗಲಿದೆಯಾ ಎಂಬುದು ತಿಳಿದು ಬಂದಿಲ್ಲ.

 

Continue Reading

BELTHANGADY

ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

Published

on

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ 8 ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಏ.19ರಂದು ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿ ವಿದ್ಯಾರ್ಥಿಯಾಗಿದ್ದ ನಂದನ್ (13) ಎಂಬಾತ ಆತ್ಮಹತ್ಯೆಗೆ ಶರಣಾದ ಬಾಲಕ.

Read More..; ನಗರ ಸಭೆ ಉಪಾಧ್ಯಕ್ಷೆ ಮಗ ಸೇರಿ ನಾಲ್ವರ ಹ*ತ್ಯೆ! ಹಂ*ತಕರ ಪತ್ತೆಗೆ ವಿಶೇಷ ತಂಡ ರಚನೆ

ಪಂಜದ ದಿವಂಗತ ರೋಹಿತ್ ಗೌಡ ಎಂಬವರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ಮಾವನ ಮನೆಯಲ್ಲಿದ್ದ. ಅಲ್ಲಿಂದಲೆ ಉಪ್ಪಿನಂಗಡಿಯ ಖಾಸಗಿ ಶಾಲೆಗೆ ಹೋಗುತ್ತಿದ್ದ. ಈತ ಈ ಬಾರಿ ಏಳನೇ ತರಗತಿ ಉತ್ತೀರ್ಣನಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ನೇ ತರಗತಿಗೆ ತೇರ್ಗಡೆ ಹೊಂದಿದ್ದ. ಏ.19ರಂದು ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದ. ಮನೆಯ ಇನ್ವಾರ್ಟರ್ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ಹೇಳಿದ್ದಾರೆ ಎನ್ನಲಾಗಿದೆ. ಇದೇ ನೆಪವನ್ನು ಇಟ್ಟುಕೊಂಡು ಮನನೊಂದ ಬಾಲಕ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಎಲ್ಲಾ ವಿಚಾರವನ್ನು ಮನೆಯವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Continue Reading

LATEST NEWS

Trending