Monday, May 17, 2021

ದೇಶದಾದ್ಯಂತ 18ರಿಂದ 44ವರ್ಷ ವಯಸ್ಸಿನವರಿಗೆ ಕೊರೊನಾ ಲಸಿಕೆ ಆರಂಭ..!

ನವದೆಹಲಿ : ದೇಶದಾದ್ಯಂತ ಇಂದಿನಿಂದ 18ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಲಭ್ಯವಿದೆ ಲಸಿಕೆ ನೀಡಿಕೆಗೆ ಬೇಕಾಗಿರುವಷ್ಟು ಲಸಿಕೆ ಇಲ್ಲದಿರುವ ಹಿನ್ನೆಲೆಯಲ್ಲಿ ದೇಶದ 6 ರಾಜ್ಯಗಳಲ್ಲಿ ಮಾತ್ರವೇ 18ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ.

ಕೊರೋನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿರುವ  ಹಿನ್ನೆಲೆಯಲ್ಲಿ ಲಸಿಕೆ ಹಾಕುವ ಕೆಲಸ ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್ ಗೆ ಲಸಿಕೆ ನೀಡಲಾಗಿತ್ತು.

18 ವರ್ಷ ಮೇಲ್ಪಟ್ಟವರೆಲ್ಲರು ಹೆಸರು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ಹೆಸರು ನೊಂದಾಯಿಸಿಕೊಳ್ಳುವ ಮೂಲಕ ಲಸಿಕೆ ಪಡೆಯುವ ದಿನಾಂಕ ಮತ್ತು ಸ್ಥಳ ನಿಗಧಿ ಮಾಡಿಕೊಳ್ಳಬಹುದು.

ಕೋವಿನ್‌ ವೆಬ್‌ಸೈಟ್ ಮತ್ತು ಆರೋಗ್ಯ ಸೇತು ಆ್ಯಪ್ ಮೂಲಕ ಇಂದು ಸಂಜೆ ನಾಲ್ಕು ಗಂಟೆಯಿಂದ ಹೆಸರು ನೊಂದಣಿ ಮಾಡಿಕೊಳ್ಳಬೇಕಾಗಿದೆ‌.

ಮೂರನೇ ಹಂತದಲ್ಲಿ ಖಾಸಗಿ ವ್ಯಾಕ್ಸಿನೇಷನ್ ಕೇಂದ್ರದಲ್ಲೂ ಲಸಿಕೆ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆದರೆ ಖಾಸಗಿ ಕೇಂದ್ರದಲ್ಲಿ ಲಸಿಕೆ ಪಡೆಯುವುದಕ್ಕೂ ಹೆಸರು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

ಕರ್ನಾಟಕದಲ್ಲಿ  3 ಲಕ್ಷ ಕೊರೋನಾ ಲಸಿಕೆ ಇರೋದ್ರಿಂದ.. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಾಂಕೇತಿಕವಾಗಿ ಕೋವ್ಯಾಕ್ಸಿನ್ ಲಸಿಕೆಗೆ ಇಂದಿನಿಂದ ಚಾಲನೆ ನೀಡಿದ್ದಾರೆ.

ಇನ್ನೆರಡು ದಿನಗಳಲ್ಲಿ ಲಸಿಕೆ ಬರಲಿದೆ. ಯಾವುದೇ ಸಮಸ್ಯೆ ಆಗದಂತೆ ಲಸಿಕೆ ಅಭಿಯಾನ ಮುಂದುವರೆಯಲಿದೆ. ಈಗ ಇರುವ ಲಸಿಕೆ ಮುಗಿಯೋವರೆಗೆ ಲಸಿಕೆ ನೀಡಲಿದ್ದೇವೆ ಎಂಬುದಾಗಿ ತಿಳಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...