Thursday, December 2, 2021

ಜನವರಿ 8ರಂದು ಉಡುಪಿಯ ಏಳು ತಾಲೂಕಿನಲ್ಲಿ ಕೊರೊನಾ ಲಸಿಕೆ ಡ್ರೈರನ್ ..!

ಜನವರಿ 8ರಂದು ಉಡುಪಿಯ ಏಳು ತಾಲೂಕಿನಲ್ಲಿ ಕೊರೊನಾ ಲಸಿಕೆ ಡ್ರೈರನ್ ..!

ಉಡುಪಿ: ಜಿಲ್ಲೆಯಲ್ಲಿ ಏಳು ತಾಲೂಕಿನಲ್ಲಿ ಕೊರೋನಾ ಲಸಿಕೆ ನೀಡುವ ಡ್ರೈ ರನ್ ನಡೆಯಲಿದೆ. ಉಡುಪಿ ನಗರದ ಕೂಸಮ್ಮ ಶಂಭು ಶೆಟ್ಟಿ ಹಾಜಿ ಅಬ್ದುಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಕೇಂದ್ರದ ಡ್ರೈ ರನ್ ಇರಲಿದೆ. ಜಿಲ್ಲಾಧಿಕಾರಿ ಜಿ ಜಗದೀಶ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.  ಕುಂದಾಪುರ, ಕಾರ್ಕಳ, ಬೈಂದೂರು, ಕಾಪು, ಹೆಬ್ರಿ, ಬ್ರಹ್ಮಾವರದ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಡ್ರೈ ರನ್ ಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಡಿ ಎಚ್ ಒ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಯ ಕಾರ್ಯ ಚಟುವಟಿಕೆ ಎಂದಿನಂತೆ ನಡೆಯಲಿದ್ದು, ಡ್ರೈರನ್ ನಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದ್ದಾರೆ. ಕೇಂದ್ರ ಆರೋಗ್ಯ ಇಲಾಖೆ ಸೂಚನೆಯಂತೆ ಮೂರು ಹಂತದಲ್ಲಿ ಈ ಡ್ರೈವ್ ನಡೆಸಲಿರುವುದಾಗಿ ಅವರು ಹೇಳಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...