Wednesday, June 16, 2021

ಕೊರೊನಾ ಮಧ್ಯೆಯೂ ರಾಜಧಾನಿ ಬೆಂಗಳೂರಿನ  ಸರ್ಕಾರಿ ಕಛೇರಿಯ ಶೌಚಾಲಯದಲ್ಲಿ ಪತ್ತೆಯಾಯಿತು ದಂಪತಿ ಶವ..!

ಬೆಂಗಳೂರು:  ಕಚೇರಿಯೊಂದರಲ್ಲಿ ಕೆಲಸ‌ ಮಾಡುತ್ತಿದ್ದ ದಂಪತಿ ವಾಷ್​ ರೂಂನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ, ರಾಜಧಾನಿ ಬೆಂಗಳೂರಿನ  ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

(42) ಹನುಮಂತರಾಯ ಮತ್ತು 34 ವರ್ಷದ ಹೊನ್ನಮ್ಮ ಮೃತ ದಂಪತಿ.‌ ಮೂಲತಃ ಯಾದಗಿರಿ ಜಿಲ್ಲೆಯ ಸುರಪುರದವರಾದ ಇವರು ಹಲವು ವರ್ಷಗಳಿಂದ ನಗರದಲ್ಲಿ ವಾಸವಾಗಿದ್ದಾರೆ.

ಬೃಂದಾವನ ನಗರದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಹನುಮಂತರಾಯ ಸೆಕ್ಯೂರಿಟಿ ಗಾರ್ಡ್ ಆಗಿ, ಪತ್ನಿ ಹೊನ್ನಮ್ಮ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು.

ದಂಪತಿ ಕಚೇರಿಯಲ್ಲೇ ವಾಸ್ತವ್ಯ ಹೂಡಿದ್ದರು. ಎಂದಿನಂತೆ ಕಚೇರಿಗೆ ಬಂದ ಸಿಬ್ಬಂದಿ ಬಾಗಿಲು ತೆಗೆಯದೆ ಇದ್ದಾಗ ಅನುಮಾನಗೊಂಡು ಆತಂಕದಿಂದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.‌

ಮಾಹಿತಿ‌ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ಮುರಿದು ಒಳಪ್ರವೇಶಿದಾಗ ದಂಪತಿ‌ ಅನುಮಾನಾಸ್ಪದವಾಗಿ ಮೃತಪಟ್ಟಿರುವುದು ಗೊತ್ತಾಗಿದೆ‌.

ಇಬ್ಬರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರನ್ನು ಕಚೇರಿಯ ಹಾಲ್​ನಲ್ಲಿ ಕೊಲೆಗೈದು, ಕೆಎಎಸ್ ಅಧಿಕಾರಿ ಚೇಂಬರ್​ನ ವಾಷ್ ರೂಂನಲ್ಲಿ ಮೃತದೇಹಗಳನ್ನು ಬಿಸಾಡಿದ್ದಾರೆ.

ಮೃತರ ತಲೆಗಳಿಗೆ ಬಲವಾದ ಗಾಯಗಳಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...