Wednesday, October 5, 2022

ನಿಗಮ ಮಂಡಳಿಗಳ ಅಧ್ಯಕ್ಷರಿಗೆ ಶಾಕ್: ನಾಮನಿರ್ದೇಶನ ರದ್ದು..!

ಬೆಂಗಳೂರು: ಮುಖ್ಯಮಂತ್ರಿಗಳ ಸೂಚನೆಯನ್ವಯ ರಾಜ್ಯಮಟ್ಟದ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷ, ಉಪಾಧ್ಯಕ್ಷರ ನಾಮನಿರ್ದೇಶನವನ್ನು ತಕ್ಷಣದಿಂದ ರದ್ದುಪಡಿಸಲಾಗಿದೆ ಎಂದು ಮುಖ್ಯಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ ಎಂ ಉಮೇಶ್‌ ಶಾಸ್ತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆಯಾ ಇಲಾಖೆಗಳ ವ್ಯಾಪ್ತಿಗೊಳಪಟ್ಟಂತೆ ಸರಕಾರದ ಆದೇಶವನ್ನು ಇಂದೇ ಹೊರಡಿಸುವಂತೆ ಹಾಗೂ ಹೊರಡಿಸಲಾದ ಆದೇಶದ ಪ್ರತಿಯನ್ನು ಖುದ್ದಾಗಿ ಮುಖ್ಯ ಕಾರ್ಯದರ್ಶಿಯವರ ಕಚೇರಿಗೆ ತಲುಪಿಸುವಂತೆಯೂ ನಿರ್ದೇಶಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಗಮ ಮಂಡಳಿಗಳಿಗೆ ಮೇಜರ್ ಸರ್ಜರಿ ಮಾಡಲು ಹೊರಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧ್ಯಕ್ಷ- ಉಪಾಧ್ಯಕ್ಷರುಗಳಿಗೆ ನೀಡಲು ಸೂಚನೆ ನೀಡಿದ್ದಾರೆ.

ಒಟ್ಟು 48 ನಿಗಮ ಮಂಡಳಿ ರದ್ದು ಮಾಡಲು ಸಿಎಂ ಆದೇಶ ಮಾಡಿದ್ದ ಹೊಸ ಪಟ್ಟಿ ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದಾರೆ. ಕರಾವಳಿಯಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್‌, ಮೈಸೂರು ಇಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಅಧ್ಯಕ್ಷ ಸಂತೋಷ್ ರೈ ಬೋಳಿಯಾರು,

ಅಲೆಮಾರಿ ಮತ್ತು ಅರೆಅಲೆಮಾರಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಮಣಿರಾಜ ಶೆಟ್ಟಿ, ಕನ್ನಡ ಪುಸ್ತಕ ಪ್ರಾಧಿಕಾರದ ಡಾ. ಎಂ. ಎನ್ ನಂದೀಶ್ ಹಂಜೆ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಸುನೀಲ್ ಪುರಾಣಿಕ್, ನಟಿ ಶ್ರುತಿ ಹಾಗೂ

ರಾಜ್ಯ ಮಟ್ಟದ ನಿಗಮ, ಮಂಡಳಿ ಪ್ರಾಧಿಕಾರದ ಉಪಾಧ್ಯಕ್ಷರಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಸ್‌.ಎನ್‌ ಈಶ್ವರಪ್ಪ ಸೇರಿದಂತೆ ಹಲವು ಮಂದಿ ಸ್ಥಾನ ಕಳೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...