MANGALORE
‘ಕೋಸ್ಟಲ್ ವುಡ್’ನಲ್ಲಿ ತೆರೆಗೆ ಬರಲಿದೆ ವಿಭಿನ್ನ ಕಥಾ ಹಂದರದ ಚಿತ್ರ
ಮಂಗಳೂರು: ಕೊರೋನಾ ನಂತರ ಎಲ್ಲಾ ಚಿತ್ರರಂಗವು ಗರಿಗೆದರಿದ ನಂತರವೂ ಕೋಸ್ಟಲ್ ವುಡ್ ಮಾತ್ರ ಯಾಕೋ ಸ್ವಲ್ಪ ಮಂಕಾಗಿತ್ತು. ಇದೀಗ ಹೊಸಬರ ತಂಡವೊಂದು ತೆರೆಗೆ ಬರಲು ಸಿದ್ದತೆ ನಡೆಸಿದೆ.
ಇಂದು ಕಟಪಾಡಿ ಮಟ್ಟು ಬಳಿಯ ಮಹಾಕಾಳಿ ಕ್ಷೇತ್ರದಲ್ಲಿ ನೂತನ ಚಿತ್ರದ ಮೊದಲ ಹಂತವಾಗಿ ಸ್ಕ್ರಿಪ್ಟ್ ಪೂಜೆ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ತುಳು ಚಿತ್ರರಂಗದ ನವರಸ ರಾಜ ಭೋಜರಾಜ್ ವಾಮಂಜೂರ್ ಸಾಥ್ ನೀಡಿದ್ದಾರೆ.
ಏಳೆಂಟು ವರ್ಷಗಳಿಂದ ಕನ್ನಡ ಹಾಗೂ ತುಳು ಚಿತ್ರರಂಗದಲ್ಲಿ ಹೆಸರು ಮಾಡಿದ ಪವನ್ ಕುಮಾರ್ ಕರಂಬಳ್ಳಿ ನೇತೃತ್ವ ವಹಿಸಿಕೊಂಡಿದ್ದಾರೆ. ನಿರ್ಮಾಣ ಜವಾಬ್ದಾರಿಯನ್ನು ಯುವ ಉದ್ಯಮಿ ಕಿಶೋರ್ ಕುಮಾರ್ ಕಾವೂರು ಹೊತ್ತುಕೊಂಡಿದ್ದಾರೆ.
ಕಳೆದ 10-15 ವರ್ಷಗಳಿಂದ ತುಳು ಬ್ಯಾರಿ ಭಾಷೆಗಳಲ್ಲಿ ಕೆಲಸ ಮಾಡಿರುವ ಶರೀಪ್ ಕಾಟಿಪಳ್ಳ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಪ್ರಸಿದ್ಧ ತುಳು ಕಲಾವಿದರು ಅಭಿನಯಿಸಲಿದ್ದು, ಚಿತ್ರದ ಶೀರ್ಷಿಕೆ ಹಾಗೂ ಉಳಿದ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಸದ್ಯದಲ್ಲೇ ಇದನ್ನು ರಿವೀಲ್ ಮಾಡಲಿದೆ.
ಮೇ ತಿಂಗಳಿನಲ್ಲಿ ಚಿತ್ರದ ಮುಹೂರ್ತ ನಡೆಯಲಿದೆ ಎಂಬ ಮಾಹಿತಿ ಇದೆ. ಇಂದಿನ ಕಾರ್ಯಕ್ರಮದಲ್ಲಿ ಪ್ರಕಾಶ್ ನಾಯಕ್ ಮಣಿಪಾಲ, ಯು.ಪಿ. ಸುರೇಶ್ ಪಾಂಗಳ, ಸತೀಶ್ ಮೂಡಿಬಿದ್ರೆ ಇವರು ಹಾಜರಿದ್ದು ಚಿತ್ರತಂಡದವರಿಗೆ ಶುಭ ಹಾರೈಸಿದರು.
DAKSHINA KANNADA
ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ
ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.
ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.
DAKSHINA KANNADA
ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ
ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.
ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.
DAKSHINA KANNADA
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.
ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.
ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.
- FILM4 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM4 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM5 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru4 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!