DAKSHINA KANNADA
ನೇತ್ರಾವತಿ-ಕುಮಾರದಾರ ನದಿಗಳ ಸಂಗಮಕ್ಕೆ ಕ್ಷಣಗಣನೆ..!
ಉಪ್ಪಿನಂಗಡಿ: ಸಂಗಮ ಕ್ಷೇತ್ರವೆಂದೇ ಪ್ರಸಿದ್ಧಿ ಹೊಂದಿರುವ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿಯ ಸಂಗಮವನ್ನು ಕಣ್ತುಂಬಿಕೊಳ್ಳಲು ಜನರು ಕಾತುರರಾಗಿದ್ದಾರೆ.
ನಿನ್ನೆಯಿಂದ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಇಲ್ಲಿಯ ಜೀವನದಿಗಳಾದ ನೇತ್ರಾವತಿ ಮತ್ತು ಕುಮಾರದಾರ ನದಿಗಳ ನದಿ ನೀರಿನ ಹರಿವು ಅಪಾಯದ ಮಟ್ಟವನ್ನು ಮೀರಿ ಮೈದುಂಬಿ ಹರಿಯುತ್ತಿದೆ.
ಕಳೆದ ಎರಡು ದಿನಗಳಿಂದ ನೀರಿನ ಮಟ್ಟದಲ್ಲಿ ಏರುಗತಿ ದಾಖಲಾಗಿದೆ. ನಿನ್ನೆ ಸಂಜೆಗೆ ಜೀವನದಿಗಳ ಸಂಗಮ ಸ್ಥಾನವಾದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳದ ಬಳಿ ನದಿ ನೀರಿನ ಮಟ್ಟ ಅಪಾಯದ ಮಟ್ಟ ದಾಟಿದೆ. ಇಂದು(ಜು.30) ನೀರು ದೇವಳದ ಅಂಗಣ ಪ್ರವೇಶಕ್ಕೆ ಎರಡು ಮೆಟ್ಟಿಲುಗಳಷ್ಟೇ ಉಳಿದಿದೆ. ನೀರಿನ ಮಟ್ಟ 31.5 ಮೀಟರ್‌ಗೆ ಏರಿದರೆ ಎರಡೂ ನದಿಗಳ ನೀರು ದೇವಳದ ಎರಡೂ ಭಾಗಗಳಿಂದ ಆವರಿಸಿ ಬಂದು ಸಂಗಮವಾಗುತ್ತದೆ. ಸದ್ಯ ಯಾರನ್ನು ನದಿಯ ಭಾಗಕ್ಕೆ ಹೋಗದಂತೆ ಎಚ್ಚರಿಕೆ ಫಲಕಗಳನ್ನು ಹಾಕಲಾಗಿದೆ. ಜೊತೆಗೆ ಎನ್ ಡಿ ಆರ್ ಎಫ್, ಹೋಂಗಾರ್ಡ್, ಅಗ್ನಿಶಾಮಕ ದಳದವರು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಸದ್ಯ ದೇವಳದ ಮುಂಭಾಗ ನೂರಾರು ಮಂದಿ ಜೀವನದಿಗಳು ಸಂಗಮವಾಗುವುದನ್ನು ನೋಡಲು ಕಾತರರಾಗಿದ್ದಾರೆ. ದೇವಸ್ಥಾನದ ಮುಂಭಾಗ ನೂರಾರು ಮಂದಿ ನೆರೆದಿದ್ದಾರೆ.
ಉಪ್ಪಿನಂಗಡಿ ಹಳೇಗೇಟು ಎಂಬಲ್ಲಿ ಐತ ಮುಗೇರ ಎಂಬವರ ಮನೆ ಭಾಗಶಃ ನೀರಿನಲ್ಲಿ ಮುಳುಗಡೆಯಾಗಿದ್ದು, ಕುಟುಂಬವನ್ನು ಅಲ್ಲಿಂದ ಸ್ಥಳಾಂತರಿಸಲಾಗಿದೆ. ಪಂಜಳ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಗೆ ನೀಡು ನುಗ್ಗಿದ್ದು ಹೆದ್ದಾರಿಯ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರ ನಡೆಸುವಂತಾಗಿದೆ.
DAKSHINA KANNADA
ಪತ್ನಿ, ಮಗುವನ್ನು ಕೊಂ*ದು ಪತಿ ಆ*ತ್ಮಹತ್ಯೆ ಪ್ರಕರಣ; ಡೆ*ತ್ ನೋಟ್‌ನಲ್ಲಿ ಏನಿತ್ತು ಗೊತ್ತಾ?
ಮುಲ್ಕಿ : ಕಾರ್ತಿಕ್ ಎಂಬಾತ ಹೆಂಡತಿ ಮತ್ತು ಮಗುವನ್ನು ಗ್ಲಾಸ್ ಚೂರಿನಿಂದ ತಿ*ವಿದು ಕೊ*ಲೆ ಮಾಡಿ ಬಳಿಕ ತಾನು ರೈಲಿಗೆ ತಲೆಕೊಟ್ಟು ಆ*ತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದ್ದು, ಪ್ರಕರಣದ ಕುರಿತಂತೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೆಚ್ಚಿನ ಮಾಹಿತಿ ನೀಡಿದ್ದಾರೆ.
ಶುಕ್ರವಾರ ಮಧ್ಯಾಹ್ನ ಮುಲ್ಕಿ ಬಳಿಯ ಬೆಳ್ಳಾಯರು ಎಂಬಲ್ಲಿ ಯುವಕನೊಬ್ಬ ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ಪು*ಡಿ ಪು*ಡಿಯಾಗಿದ್ದು, ಯಾರೋ ಆ*ತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಮುಲ್ಕಿ ಪೊಲೀಸರಿಗೆ ಲಭಿಸಿತ್ತು. ಯುವಕನ ದೇಹ ಛಿ*ದ್ರಗೊಂಡಿದ್ದರಿಂದ ಗುರುತು ಪತ್ತೆಯಾಗಿರಲಿಲ್ಲ. ಮುಲ್ಕಿಯ ರೈಲ್ವೇ ಪೊಲೀಸರು ಕೇಸು ದಾಖಲಿಸಿದ್ದರು. ಯುವಕನ ಮೃ*ತದೇಹ ಸಿಕ್ಕಿದ ತುಸು ದೂರದಲ್ಲೇ ಬೈಕ್ ಒಂದು ಪತ್ತೆಯಾಗಿತ್ತು. ಆತನ ದೇಹದಲ್ಲಿ ಬೇರಾವುದೇ ಗುರುತು ಪತ್ರಗಳಿರಲಿಲ್ಲ. ಶನಿವಾರ ಬೆಳಗ್ಗೆ ಸ್ಥಳದಲ್ಲಿ ಬೈಕ್ ಕೀ ಸಿಕ್ಕಿದ್ದು ಬೈಕನ್ನು ಚೆಕ್ ಮಾಡಿದಾಗ, ಅದರಲ್ಲಿ ಆರ್ ಸಿ ಕಾರ್ಡ್ ಸಿಕ್ಕಿದ್ದರಿಂದ ಪಕ್ಷಿಕೆರೆಯ ವಿಳಾಸ ತೋರಿಸಿತ್ತು. ಪಕ್ಷಿಕೆರೆಯಲ್ಲಿ ಜನಾರ್ದನ ಭಟ್ ಹೊಟೇಲ್ ನಡೆಸುತ್ತಿದ್ದು, ಜನಾನುರಾಗಿ ವ್ಯಕ್ತಿಯಾಗಿದ್ದರು. ಅವರ ಮಗನೇ ಮೃ*ತಪಟ್ಟ ಕಾರ್ತಿಕ್ ಎಂದು ತಿಳಿದು ಪೊಲೀಸರು ಅವರ ಬಳಿಗೆ ತೆರಳಿದ್ದರು.
ಮಧ್ಯಾಹ್ನ 1.30ರ ಸುಮಾರಿಗೆ ಪೊಲೀಸರು ಜನಾರ್ದನ ಭಟ್ ಅವರ ಹೊಟೇಲಿಗೆ ತೆರಳಿ, ಕಾರ್ತಿಕ್ ಬಗ್ಗೆ ಕೇಳಿದಾಗ ನಿನ್ನೆ ಬೆಳಗ್ಗೆ ಮನೆಯಲ್ಲಿದ್ದರು. ಸಂಜೆ ಬಾಗಿಲು ಹಾಕ್ಕೊಂಡಿತ್ತು. ಇವತ್ತು ಬೆಳಗ್ಗೆ ಕಾಣಿಸಿರಲಿಲ್ಲ. ನಾವು ಬೆಳಗ್ಗೆಯೇ ಹೊಟೇಲಿಗೆ ಬಂದಿದ್ದವು ಎಂದು ತಿಳಿಸಿದ್ದಾರೆ. ಫೋನ್ ಮಾಡಿದರೆ ಮಗ ಮತ್ತು ಸೊಸೆಯ ಫೋನ್ ಸ್ವಿಚ್ ಆಫ್ ಬರುತ್ತಿತ್ತು. ಕೂಡಲೇ ಮನೆಗೆ ತೆರಳಿ, ಅವರಿದ್ದ ಕೋಣೆಯ ಬಾಗಿಲು ಒಡೆದು ನೋಡಿದಾಗ ಬೆಡ್ ನಲ್ಲಿ ಮಗು ಕೊ*ಲೆಯಾದ ಸ್ಥಿತಿಯಲ್ಲಿ ಬಿದ್ದಿತ್ತು. ಅಲ್ಲಿಯೇ ಕೆಳಗಡೆ ಸೊಸೆ ಪ್ರಿಯಾಂಕ ಮೃ*ತದೇಹ ಪತ್ತೆಯಾಗಿದೆ. ಕಾರ್ತಿಕನ ವೃದ್ಧ ತಂದೆ, ತಾಯಿ ಅದೇ ಮನೆಯಲ್ಲಿ ನಿನ್ನೆ ರಾತ್ರಿ ಕಳೆದಿದ್ದರೂ, ಮನೆಯಲ್ಲಿ ಸೊಸೆ, ಮಗು ಮೃ*ತಪಟ್ಟಿರುವುದು ಅವರ ಗಮನಕ್ಕೆ ಬಂದಿರಲಿಲ್ಲ.
ಇದನ್ನೂ ಓದಿ : ಮೂಲ್ಕಿ : ಪತ್ನಿ, ಮಗುವನ್ನು ಹ*ತ್ಯೆಗೈದು ಆತ್ಮಹ*ತ್ಯೆ ಮಾಡಿಕೊಂಡ ಪತಿ
ಒಂದೇ ಮನೆಯಲ್ಲಿದ್ದರೂ ಮಗ, ಸೊಸೆ, ದಿನವೂ ಹೊಟೇಲೇ ತಮ್ಮ ಜಗತ್ತು ಅಂದ್ಕೊಂಡಿದ್ದ ಜನಾರ್ದನ ಭಟ್ ಮತ್ತು ಶ್ಯಾಮಲಾ ಜೊತೆಗೆ ಮಾತುಕತೆ ಇರಲಿಲ್ಲ. ಹೀಗಾಗಿ ಕೆಲವೊಮ್ಮೆ ಮಗ, ಸೊಸೆ ಮನೆಯಿಂದ ಹೊರಗೆ ಹೋಗುತ್ತಿದ್ದರೂ, ತಡವಾಗಿ ಮನೆಗೆ ಬರುತ್ತಿದ್ದರೂ, ಇವರು ಚಿಂತೆ ಮಾಡುತ್ತಿರಲಿಲ್ಲ. ಪೊಲೀಸರ ಮಾಹಿತಿ ಪ್ರಕಾರ, ಶುಕ್ರವಾರ (ನ.8) ಬೆಳಗ್ಗೆ 11 ಗಂಟೆ ಸುಮಾರಿಗೆ ಪತ್ನಿ ಮತ್ತು ಮಗುವನ್ನು ಗ್ಲಾಸಿನ ಚೂರಿನಿಂದ ತಿ*ವಿದು ಹ*ತ್ಯೆ ಮಾಡಲಾಗಿದೆ. ಅಲ್ಲದೆ, ಮನೆಯ ಕೋಣೆಯಲ್ಲಿ ಸೀರೆಯನ್ನು ಬಿಗಿದ ರೀತಿ ಕಂಡುಬಂದಿದ್ದು, ಕಾರ್ತಿಕ್ ಆ*ತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದಾನೆ ಎನ್ನುವ ಸಂಶಯ ವ್ಯಕ್ತವಾಗಿದೆ. ಅಲ್ಲದೆ, ಮನೆಯಲ್ಲಿ ಸಿಕ್ಕ ಡೈರಿಯಲ್ಲಿ ಸುದೀರ್ಘ ಡೆತ್ ನೋಟ್ ಇದ್ದು, ಅದರಲ್ಲಿ ಹಲವು ವಿಚಾರಗಳನ್ನು ಬರೆದಿಟ್ಟಿದ್ದಾನೆ.
ತಮ್ಮ ಶ*ವಗಳನ್ನು ಪತ್ನಿಯ ತಂದೆ, ತಾಯಿಗೆ ನೀಡುವಂತೆ ಹೇಳಿದ್ದು, ತಂದೆ, ತಾಯಿ ತಮ್ಮ ಅಂತ್ಯ ಸಂಸ್ಕಾರ ಮಾಡಬಾರದು ಎಂದು ಬರೆದಿಟ್ಟಿದ್ದಾನೆ. ಅಲ್ಲದೆ, ತನಗೆ ಸೇರಬೇಕಾದ ಆಸ್ತಿಯ ವಿಚಾರವನ್ನೂ ಯಾರಿಗೆ ಸೇರಬೇಕು ಎನ್ನುವ ಬಗ್ಗೆ ಬರೆಯಲಾಗಿದೆ. ತನ್ನ ಸಾ*ವಿಗೆ ಯಾರೂ ಕಾರಣರಲ್ಲ ಎಂಬುದನ್ನೂ ಬರೆಯಲಾಗಿದೆ. ಕಾರ್ತಿಕ್ ಪತ್ನಿ ಪ್ರಿಯಾಂಕ ಶಿವಮೊಗ್ಗ ಮೂಲದವರಾಗಿದ್ದು, ಆಕೆಯ ಹೆತ್ತವರು ಬಂದ ಬಳಿಕವೇ ಪೋಸ್ಟ್ ಮಾರ್ಟಂ ನಡೆಸಲಾಗುವುದು ಎಂದು ಸ್ಥಳಕ್ಕೆ ಬಂದ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
DAKSHINA KANNADA
ಟ್ಯಾಂಕರ್ ಸ್ಕೂಟರ್ ಭೀ*ಕರ ಅ*ಪಘಾತ: ಮಹಿಳೆ ಸಾ*ವು
ಉಳ್ಳಾಲ: ಟ್ಯಾಂಕರ್ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅ*ಪಘಾತದಲ್ಲಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಉಳ್ಳಾಲ ಪ್ರೆಸ್ ಕ್ಲಬ್ ಎದುರಿನ ತೊಕ್ಕೊಟ್ಟು – ಮಂಗಳೂರು ವಿಶ್ವವಿದ್ಯಾನಿಲಯ ರಸ್ತೆಯಲ್ಲಿ ನಿನ್ನೆ (ನ.9) ಸಂಜೆ ಸಂಭವಿಸಿದೆ.
ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಸಿಬ್ಬಂದಿ ರೆಹಮತ್ (47) ಮೃ*ತ ಮಹಿಳೆ ಎಂದು ಗುರುತಿಸಲಾಗಿದೆ.
ದೇರಳಕಟ್ಟೆ ಕಡೆಯಿಂದ ಸ್ಕೂಟರ್ ನಲ್ಲಿ ತೊಕ್ಕೊಟ್ಟು ಕಡೆಗೆ ದಂಪತಿ ತೆರಳುತ್ತಿದ್ದ ಸಂದರ್ಭ ರಸ್ತೆ ಹೊಂಡ ತಪ್ಪಿಸುವ ಹಂತದಲ್ಲಿ ಸ್ಕೂಟರ್ ಆ*ಯತಪ್ಪಿ ರಸ್ತೆಗೆ ಉರುಳಿಬಿದ್ದಿದೆ. ಈ ಸಂದರ್ಭ ಹಿಂಬದಿಯಲ್ಲಿದ್ದ ಟ್ಯಾಂಕರ್ ಲಾರಿ ರಸ್ತೆಗೆ ಬಿದ್ದಿದ್ದ ರೆಹಮತ್ ಮೇಲೆ ಚ*ಲಿಸಿದೆ. ಪರಿಣಾಮವಾಗಿ ರೆಹಮತ್ ಸ್ಥಳದಲ್ಲೇ ದಾ*ರುಣವಾಗಿ ಸಾ*ವನ್ನಪ್ಪಿದ್ದಾರೆ.
ರಸ್ತೆ ಅವ್ಯವಸ್ಥೆಯಿಂದಾಗಿ ಘಟನೆ ನಡೆದಿರುವುದಾಗಿ ಆರೋಪಿಸಿದ ಉದ್ರಿಕ್ತ ಗುಂಪು ರಸ್ತೆಗೆ ಅಡ್ಡವಾಗಿ ಕಲ್ಲುಗಳನ್ನು ಇಟ್ಟು ಪ್ರತಿಭಟನೆ ನಡೆಸಿದೆ. ಇದರಿಂದಾಗಿ ತೊಕ್ಕೊಟ್ಟು ಕೊಣಾಜೆ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ವಾಹನಗಳೆಲ್ಲವೂ ಸರತಿ ಸಾಲುಗಳಲ್ಲಿ ನಿಂತರೆ, ಹಲವು ವಾಹನಗಳು ಬೀರಿ ಮಾರ್ಗವಾಗಿ ಸಂಚರಿಸುತ್ತಿದೆ.
ಉದ್ರಿಕ್ತ ಗುಂಪು ಹಾಗೂ ಉಳ್ಳಾಲ ಪೊಲೀಸರ ನಡುವೆ ತೀವ್ರ ವಾಗ್ದಾಳಿ ನಡೆದಿದೆ. ಫೋಳೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
DAKSHINA KANNADA
ಮೂಲ್ಕಿ : ಪತ್ನಿ, ಮಗುವನ್ನು ಹ*ತ್ಯೆಗೈದು ಆತ್ಮಹ*ತ್ಯೆ ಮಾಡಿಕೊಂಡ ಪತಿ
ಮೂಲ್ಕಿ : ಪತ್ನಿ, ಮಗುವನ್ನು ಹ*ತ್ಯೆಗೈದು ಪತಿ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಮೂಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ನಡೆದಿದೆ.
ಪತ್ನಿ ಪ್ರಿಯಾಂಕ (28) ಮಗು ಹೃದಯ್ (4) ಕೊ*ಲೆಗೀಡಾದವರು. ಕಾರ್ತಿಕ್ ಭಟ್ (32) ಹ*ತ್ಯೆ ಮಾಡಿದಾತ. ಶುಕ್ರವಾರ(ನ.8) ಈ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿ ಕಾರ್ತಿಕ್ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹ*ತ್ಯೆಗೈದು ಮೂಲ್ಕಿಯ ಬೆಳಾಯರು ನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹ*ತ್ಯೆ ಮಾಡಿಕೊಂಡಿದ್ದಾನೆ.
ಇದನ್ನೂ ಓದಿ : ಅಮೃತಧಾರೆ ನಟಿ ಬದುಕಲ್ಲಿ ಅಯ್ಯೋ ಇದೇನಾಯ್ತು! ಸೋಶಿಯಲ್ ಮೀಡಿಯಾದಲ್ಲಿ ನೋವು ಹಂಚಿಕೊಂಡ ಕಲಾವಿದೆ
ಶುಕ್ರವಾರ ಮಧ್ಯಾಹ್ನ ಯುವಕನೋರ್ವ ರೈಲಿಗೆ ತಲೆಕೊಟ್ಟು ಅತ್ಮಹ*ತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪಕ್ಷಿಕೆರೆಯ ಕಾರ್ತಿಕ್ ಭಟ್ ಆತ್ಮಹತ್ಯೆಗೈದಾತ ಎಂದು ತಿಳಿದುಬಂದಿದ್ದು, ಮನೆಗೆ ಬಂದಾಗ ಪತ್ನಿ, ಮಗು ಹ*ತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
- LATEST NEWS3 days ago
ವಧುವಿನಿಂದ ʼಮೊದಲ ರಾತ್ರಿʼ ನಿರಾಕರಣೆ; ಕಾರಣ ತಿಳಿದು ವರನಿಗೆ ಶಾ*ಕ್
- FILM4 days ago
ಕೋರ್ಟ್ ಮೆಟ್ಟಿಲೇರಿದ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್
- LATEST NEWS5 days ago
ರೈಲ್ವೆ ನಿಲ್ದಾಣದಲ್ಲಿ ಸೂಟ್ಕೇಸ್ನಲ್ಲಿ ಮಹಿಳೆಯ ಶ*ವ ಪತ್ತೆ; ತನಿಖೆ ವೇಳೆ ಬಯಲಾಯ್ತು ಸತ್ಯ!
- LATEST NEWS6 days ago
ಮಹಿಳೆಯರಿಗೆ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ 450 ರೂ.ಗೆ ಗ್ಯಾಸ್ ಸಿಲಿಂಡರ್