Connect with us

bangalore

ರಾತ್ರಿ 11ಗಂಟೆ ನಂತರ ರಸ್ತೆಯಲ್ಲಿ ತಿರುಗಾಡಿದ ದಂಪತಿಗೆ ದಂಡ-ಲಂಚ ಪಡೆದುಕೊಂಡ ಪೊಲೀಸರು ಅಮಾನತು

Published

on

ಬೆಂಗಳೂರು: ರಾತ್ರಿ 11 ಗಂಟೆ ನಂತರ ರಸ್ತೆಯಲ್ಲಿ ಹೋಗುತ್ತಿದ್ದ ದಂಪತಿಗೆ ಹೊಯ್ಸಳ ಪೊಲೀಸರು ದಂಡ ಹಾಕಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.


ಬೆಂಗಳೂರು ನಿವಾಸಿ ಕಾರ್ತಿಕ್ ಪಾತ್ರಿ ಮತ್ತು ಅವರ ಪತ್ನಿ ಸ್ನೇಹಿತರ ಮನೆಯಲ್ಲಿ ಹುಟ್ಟುಹಬ್ಬದ ಆಚರಣೆ ಮುಗಿಸಿ ಮನೆಗೆ ಹೋಗುತ್ತಿದ್ದು, ಈ ವೇಳೆ ಹೊಯ್ಸಳ ಗಸ್ತು ವಾಹನದಲ್ಲಿದ್ದವರು ತಡೆದು ಐಡಿ ಕಾರ್ಡ್ ಕೇಳಿದ್ದಾರೆ.

ತಕ್ಷಣ ಮೊಬೈಲ್‍ನಲ್ಲಿದ್ದ ಆಧಾರ್ ಕಾರ್ಡ್ ತೋರಿಸಿದ್ದು,ತಕ್ಷಣ ಪೊಲೀಸರು ಮೊಬೈಲ್ ಫೋನ್ ತೆಗೆದುಕೊಂಡು ನಮ್ಮ ಉದ್ಯೋಗದ ಮಾಹಿತಿ, ಸಂಬಂಧ, ಹೆತ್ತವರ ಬಗ್ಗೆ ಮಾಹಿತಿ ಕೇಳಿದ್ದಾರೆ.

ಎಲ್ಲಾ ಮಾಹಿತಿಯನ್ನು ಕೊಟ್ಟ ಮೇಲೆ ಚಲನ್ ಪುಸ್ತಕದಲ್ಲಿ ಎಲ್ಲಾ ಬರೆದುಕೊಂಡು 11 ಗಂಟೆ ಮೇಲೆ ಯಾಕೆ ತಿರುಗಾಡುತ್ತಿದ್ದೀರಾ, ತಿರುಗಾಡುವಂತಿಲ್ಲ ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.


ಅಷ್ಟೇ ಅಲ್ಲದೆ ಈ ರೀತಿ ರೂಲ್ಸ್ ಇದೆ ಎಂದು ನಮಗೆ ಅರಿವಿರಲಿಲ್ಲ ಎಂದು ದಂಪತಿ ಹೇಳಿದಾಗ ಈ ಹಿನ್ನೆಲೆಯಲ್ಲಿ ಹೊಯ್ಸಳ ವಾಹನದಲ್ಲಿದ್ದ ಪೊಲೀಸರು ಮೂರು ಸಾವಿರ ದಂಡ ಕಟ್ಟಿ ಅಂತಾ ಕೇಳಿದ್ದಾರೆ. ಅಷ್ಟು ದುಡ್ಡಿಲ್ಲ ಅಂದಾಗ ಕೇಸ್ ಹಾಕುತ್ತೇವೆ. ಸುಮ್ನೆ ಬಿಡಲ್ಲ ಅಂತಾ ದಂಪತಿಗೆ ಪೊಲೀಸರು ಅವಾಜ್ ಹಾಕಿದ್ದಾರೆ. ಅಷ್ಟರಲ್ಲಿ ಕಾರ್ತಿಕ್ ಪತ್ನಿ ಕಣ್ಣೀರು ಹಾಕಿ ಬಿಟ್ಟುಬಿಡುವಂತೆ ಕೋರಿದ್ದಾರೆ.

ಕೊನೆಗೆ 1,000 ರೂಪಾಯಿಯ ದಂಡ ಕಟ್ಟುತ್ತೇನೆ ಅಂತಾ ಕಾರ್ತಿಕ್ ಹೇಳಿ ದಂಡ ಕಟ್ಟಿ ಬಂದಿದ್ದಾರೆ ಎನ್ನಲಾಗಿದೆ.

ಈ ರೀತಿ ಪೊಲೀಸರು ವರ್ತಿಸುವುದನ್ನು ಖಂಡಿಸಿ ಕಾರ್ತಿಕ್ ಅವರು ಟ್ವಿಟರ್‌ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು ಇದಕ್ಕೆ ಪ್ರತಿಕ್ರಿಯಿಸಿದ ಬೆಂಗಳೂರು ಉತ್ತರ ಡಿಸಿಪಿ ಅನುಪ್ ಎ ಶೆಟ್ಟಿ, ಕಾರ್ತಿಕ್ ಅವರಿಗೆ ನಿಖರವಾದ ಸ್ಥಳ ಮತ್ತು ಸಂಪೂರ್ಣ ವಿವರಗಳನ್ನು ನೀಡುವಂತೆ ಕೇಳಿಕೊಂಡಿದ್ದು, ಕಾರ್ತಿಕ್ ಅವರ ಸಂಪರ್ಕ ವಿವರಗಳನ್ನು ಕೇಳಿದ ಟ್ವೀಟ್‌ಗೆ ಬೆಂಗಳೂರು ನಗರ ಪೊಲೀಸರೂ ಪ್ರತಿಕ್ರಿಯಿಸಿದ್ದಾರೆ.

ಕಾರ್ತಿಕ್ ಅವರ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಸೇರಿದಂತೆ ಅನೇಕರಿಂದ ಕ್ರಮ ಕೈಗೊಳ್ಳುವಂತೆ ಡಿಸಿಪಿಗೆ ಮನವಿ ಮಾಡಿದ್ದರು.

ಈ ಟ್ವೀಟ್ ಗೆ ಪ್ರತಿಕ್ರಿಯಿಸಿದ ಡಿಸಿಪಿ ಅನೂಪ್ ಎ ಶೆಟ್ಟಿ, ಮೇಲ್ನೋಟಕ್ಕೆ ಹೊಯ್ಸಳ ಸಿಬ್ಬಂದಿ ಹಣ ಪಡೆದಿರೋದು ಗೊತ್ತಾಗಿದೆ. ಕ್ಯೂ ಆರ್ ಕೋಡ್ ಮೂಲಕ 1 ಸಾವಿರ ರೂ. ಹಣ ಲಂಚ ಪಡೆದಿದ್ದಾರೆ. ಮೊದಲು ಡಾಕ್ಯುಮೆಂಟ್‍ಗಳನ್ನು ಕೇಳಿದ್ದಾರೆ.

ಡಾಕ್ಯುಮೆಂಟ್ ಎಲ್ಲವನ್ನೂ ಪರಿಶೀಲನೆ ಮಾಡಿದ ಬಳಿಕ ದಂಡ ಹಾಕುವುದಾಗಿ ಬೆದರಿಸಿದ್ದಾರೆ. ಬಳಿಕ 1 ಸಾವಿರ ದಂಡದ ರೂಪದಲ್ಲಿ ಲಂಚ ಪಡೆದಿದ್ದಾರೆ ಎಂದರು.

ಘಟನೆಗೆ ಸಂಬಂಧಿಸಿ ಹೆಚ್.ಸಿ ರಾಜೇಶ್ ಹಾಗೂ ಪಿಸಿ ನಾಗೇಶ್ ಇಬ್ಬರನ್ನು ಅಮಾನತು ಮಾಡಿದ್ದು, ತನಿಖೆ ನಡೆಸುತ್ತಿದ್ದೇವೆ. ತನಿಖೆ ಪೂರ್ಣವಾದ ಬಳಿಕ ಸತ್ಯಾಂಶ ಗೊತ್ತಾಗುತ್ತದೆ ಎಂದು ತಿಳಿಸಿದ್ದಾರೆ.

bangalore

ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ

Published

on

ಬೆಂಗಳೂರು : ಬಿಸಿಲಿನ ಉರಿಗೆ ಜನರು ಬೆಂದು ಹೋಗಿದ್ದಾರೆ. ವರುಣ ಕೃಪೆ ತೋರಯ್ಯ ಎಂದು ಬೇಡಿಕೊಳ್ಳುತ್ತಿದ್ದಾರೆ. ಈ ನಡುವೆ ಅಲ್ಲಲ್ಲಿ ಮಳೆಯಾಗಿದ್ರೂ ಸೂರ್ಯ ತಾಪವೇನೂ ಕಮ್ಮಿಯಾಗಿಲ್ಲ. ಇದೀಗ 8 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

heavy rain
ಎಲ್ಲೆಲ್ಲಿ ಮಳೆ ?
ರಾಜ್ಯದ ಜನತೆ ಮಳೆರಾಯನಿಗಾಗಿ ಕಾಯುತ್ತಿದ್ದಾರೆ. ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಶುಭ ಸುದ್ದಿ ನೀಡಿದೆ. ಏಪ್ರಿಲ್ 24ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಮೈಸೂರು, ಕೊಡಗು, ಹಾಸನ ಸೇರಿ 8 ಜಿಲ್ಲೆಗಳಲ್ಲಿ ಕೆಲವೆಡೆ ಮಳೆ ಬೀಳಬಹುದು ಎಂದು ಹೇಳಿದೆ.

ತಾಪಮಾನ ಹೆಚ್ಚಳ :
ಭಾರತೀಯ ಹವಾಮಾನ ಇಲಾಖೆ ದೇಶದ ಹಲವು ಭಾಗಗಳಲ್ಲಿ ಬಿಸಿಲಿನ ತಾಪ ತೀವ್ರವಾಗಲಿದೆ ಎಂದು ಕೂಡ ಮಾಹಿತಿ ನಡಿದೆ. ಅದರಲ್ಲೂ ಪೂರ್ವ ಮತ್ತು ದಕ್ಷಿಣ ಭಾರತದ ಹೆಚ್ಚಿನ ಭಾಗಗಳಲ್ಲಿ ಶಾಖದ ಅಲೆಗಳು ಹೆಚ್ಚಲಿವೆ ಎಂದಿದೆ. ಏಪ್ರಿಲ್ 25 ರ ವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಏಪ್ರಿಲ್ 27 ರ ವರೆಗೆ ಈ ಪ್ರದೇಶಗಳಲ್ಲಿ ಉಷ್ಣಾಂಶ 2 ರಿಂದ 2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಏಪ್ರಿಲ್ 6 ರಂದು ರಾಜಧಾನಿಯಲ್ಲಿ ಗರಿಷ್ಠ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಎಂಟು ವರ್ಷಗಳಲ್ಲಿ ಅತಿ ಹೆಚ್ಚು ಎಂದು ವರದಿಯಾಗಿದೆ.

ಮುಂದಿನವಾರ ನಗರದಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Continue Reading

bangalore

ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!

Published

on

ಬೆಂಗಳೂರು : ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್‌ರೂಮಿನಲ್ಲಿ ಪತ್ತೆಯಾಗಿತ್ತು. ಎಪ್ರಿಲ್ 19 ರಂದು ನಡೆದಿದ್ದ ಈ ಘಟನೆಯನ್ನು ಭೇದಿಸಿದ ಪೊಲೀಸರಿಗೆ ಶಾಕ್ ಆಗುವಂತ ವಿಚಾರಗಳು ಗೊತ್ತಾಗಿದೆ.

ಕೊಡಿಗೆ ಹಳ್ಳಿಯ ಭದ್ರಪ್ಪ ಲೇಔಟ್‌ನಲ್ಲಿ ನಡೆದಿದ್ದ ಶೋಭಾ ಎಂಬ ಮಹಿಳೆಯ ಕೊ*ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವ ನವೀನ್ ಎಂಬ ಯುವಕನನ್ನು ಕೊಡಿಗೆ ಹಳ್ಳಿಯ ಪೊಲೀಸರು ಬಂದಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ವಿಚಾರ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ. ಬಳಿಕ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಶೋಭಾಳ ಕಾಮದಾಹ ಬೆಳಕಿಗೆ ಬಂದಿದೆ.

ಇದನ್ನೂ ಓದಿ ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?

ಶೋಭಾಳಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ ನವೀನ್ ಬಳಿಕ ಸ್ನೇಹಿತನಾಗಿ, ಅದು ಪ್ರೀತಿಗೆ ತಿರುಗಿ ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧದವರೆಗೂ ಬಂದು ನಿಂತಿತ್ತು. ಮಗನ ವಯಸ್ಸಿನ ಹುಡುಗನ ಜೊತೆಯಲ್ಲಿ ನಿರಂತರ ಸೆಕ್ಸ್ ಮಾಡುತ್ತಿದ್ದ ಶೋಭಾಳ ಅತಿಯಾದ ಕಾಮಧಾಹದಿಂದ ಬೇಸತ್ತು ಆಕೆಯನ್ನು ಕೊಲೆ ಮಾಡಿದ್ದಾಗಿ ಹೇರೋಹಳ್ಳಿ ಮೂಲದ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ.

ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್‌ಗೆ ಸೆಕ್ಸ್‌ಗೆ ಒತ್ತಾಯಿಸಿದ್ದು ನಿರಾಕರಿಸಿದಾಗ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ. ಈಕೆ ಅತಿಯಾಗಿ ಸೆಕ್ಸ್‌ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್‌ ಬೆಡ್‌ ರೂಮಿನಲ್ಲೇ ಆಕೆಯ ಕಥೆ ಮುಗಿಸಿದ್ದ.

48ರ ಮಹಿಳೆಗೆ ಯುವಕರ ಮೇಲೆ ಹುಚ್ಚು

48ರ ಶೋಭಾ ಕೇವಲ ನವೀನ್ ಮಾತ್ರವಲ್ಲದೇ ಅನೇಕ ಯುವಕರ ಸಹವಾಸ ಬೆಳೆಸಿದ್ದಳು. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿದ್ದು, ನವೀನ್‌ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ. ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್‌ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು. ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೇ ಅಲ್ಲದೆ ಆ ಯುವಕರ ಮದುವೆಗೂ ಅಡ್ಡಿ ಪಡಿಸಿ ಮದುವೆ ನಿಲ್ಲಿಸಿದ್ದಳು.

ಇದನ್ನೂ ಓದಿ ರಿಯಾಲಿಟಿ ಶೋಗಳಲ್ಲೂ ಕಾಸ್ಟಿಂಗ್ ಕೌಚ್! ಡ್ಯಾನ್ಸಿಂಗ್ ಕ್ವೀನ್ ಬಿಚ್ಚಿಟ್ಟ ಸತ್ಯವೇನು?

ಕೊಲೆಯಾದ ದಿನವೂ ನವೀನ್‌ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್‌ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು‌ ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್‌, ಶೋಭಾಳ ಕತ್ತು ಹಿಸುಕಿ ಕೊ*ಲೆ‌ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.

Continue Reading

bangalore

ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

Published

on

ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶಿಸಿ ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ.

ishwarappaishwarappa

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕೆಎಸ್‌ ಈಶ್ವರಪ್ಪ, ತಮ್ಮ ನಾಮಪತ್ರವನ್ನು ಹಿಂಪಡೆಯಲು ನಿನ್ನೆ(ಎ.22) ಕೊನೆಯ ದಿನವಾಗಿತ್ತು. ಆದರೆ, ಈಶ್ವರಪ್ಪ ನಾಮಪತ್ರವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಆರು ವರ್ಷಗಳ ಕಾಲ ಅವರು ಬಿಜೆಪಿ ಪಕ್ಷದಡಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.

ಮುಂದೆ ಓದಿ..; ಚೌಟ ಪರ ಪ್ರಚಾರಕ್ಕೆ ಪುತ್ತೂರಿಗೆ ಬರಲಿದ್ದಾರೆ ಅಣ್ಣಾಮಲೈ

ಬಿಜೆಪಿ ಪಕ್ಷದಲ್ಲೇ ಇದ್ದುಕೊಂಡ ಕೆ ಎಸ್ ಈಶ್ವರಪ್ಪ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡು ನಿಂದಿಸುತ್ತಿದ್ದರು. ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ರಾಜಕಾರಣವನ್ನು ಕೆ ಎಸ್ ಈಶ್ವರಪ್ಪ ತೀವ್ರವಾಗಿ ಟೀಕಿಸುತ್ತಿದ್ದರು. ತನ್ನ ಬೆಂಬಲ ಮೋದಿ ಪ್ರಧಾನಿಗೆ ಇದೆ ಎಂದು ಹೇಳಿಕೊಂಡಿದ್ದ ಈಶ್ವರಪ್ಪ ತಾನು ಗೆದ್ದ ಬಳಿಕ ಮೋದಿಗೆ ಬೆಂಬಲ ನೀಡುವುದಾಗಿ ಹೇಳಿಕೆ ನೀಡುತ್ತಿದ್ದರು. ಆದರೆ ಇದೀಗ ಪಕ್ಷದಿಂದಲೇ ಇವರನ್ನು ಉಚ್ಛಾಟಿಸಲಾಗಿದೆ.

Continue Reading

LATEST NEWS

Trending