Friday, July 1, 2022

ಸರಯೂ ನದಿಯಲ್ಲಿ ದಂಪತಿ ರೋಮ್ಯಾನ್ಸ್‌: ನೀರಿನಿಂದ ಹೊರಗೆಳೆದು ಥಳಿಸಿದ ಸಾರ್ವಜನಿಕರು

ಲಕ್ನೋ: ಅಯೋಧ್ಯೆಯ ಸರಯೂ ನದಿಯಲ್ಲಿ ಸ್ನಾನ ಮಾಡುವಾಗ ಪತ್ನಿಗೆ ಲಿಪ್ ಕಿಸ್ ಕೊಟ್ಟ ಪತಿಯನ್ನು ಸಾರ್ವಜನಿಕರು ಥಳಿಸಿರುವ ಘಟನೆ ನಡೆದಿದ್ದು,

ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಸರಯೂ ನದಿ ಗಂಗೆಯ ಏಳು ಉಪನದಿಗಳಲ್ಲಿ ಒಂದಾಗಿದ್ದು, ಹಿಂದೂಗಳು ಇದನ್ನು ಪವಿತ್ರ ಎಂದು ಪರಿಗಣಿಸುತ್ತಾರೆ.

ಅಲ್ಲದೆ ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆಯು ಸರಯೂ ನದಿಯ ದಡದಲ್ಲಿದೆ. ಇಲ್ಲಿ ಸ್ನಾನಕ್ಕಿಳಿದು ಪತಿ ಪತ್ನಿ ಇಬ್ಬರು ಸ್ವಲ್ಪ ಸಮಯದ ನಂತರ ಕಿಸ್ ಮಾಡಲು ಹೋಗಿದ್ದಾರೆ.

ಇದನ್ನು ನೋಡಿದ ಸುತ್ತಮುತ್ತಲಿನ ಜನರು ಪತಿಯನ್ನು ಎಳೆದೊಯ್ದು ಥಳಿಸಿದ್ದಾರೆ. ಅಲ್ಲದೆ ಅಯೋಧ್ಯೆಯಲ್ಲಿ ಇಂತಹ ಅಸಹ್ಯವನ್ನು ಸಹಿಸುವುದಿಲ್ಲ ಎಂದು ಒಬ್ಬ ವ್ಯಕ್ತಿ ಹೇಳುತ್ತಿರುವುದು ವೀಡಿಯೋದಲ್ಲಿದೆ.


ಥಳಿತದ ಸಂದರ್ಭದಲ್ಲಿ ತನ್ನ ಪತಿಯನ್ನು ರಕ್ಷಿಸಲು ಪತ್ನಿ ಮುಂದಾಗಿದ್ದಾರೆ. ನಂತರ ಅಲ್ಲಿದ್ದ ಜನರು ಆ ದಂಪತಿಯನ್ನು ನದಿಯಿಂದ ಹೊರಗೆ ಕಳುಹಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅಯೋಧ್ಯಾ ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕ್ಷುಲ್ಲಕ ಕಾರಣಕ್ಕೆ ಮಗುವನ್ನು ಕತ್ತು ಹಿಸುಕಿ ಕೊಂದು ತಾಯಿ ಜೀವಾಂತ್ಯ

ಬೆಂಗಳೂರು: ಮೂರೂವರೆ ವರ್ಷದ ಮಗುವನ್ನು ವೇಲ್‌ನಿಂದ ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ RR ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.ದೀಪಾ (31) ತನ್ನ ಮಗು...

ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದರಿಂದ ಮನನೊಂದು ಪಿಯುಸಿ ವಿದ್ಯಾರ್ಥಿನಿ ಜೀವಾಂತ್ಯ

ಉಡುಪಿ: ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಮತ್ತೆ ಅನುತ್ತೀರ್ಣಳಾಗಿದ್ದರಿಂದ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದಲ್ಲಿ ನಿನ್ನೆ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮಾನಸ (17)...

ಸುಳ್ಯ: ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಮತ್ತೆ ಕಂಪಿಸಿದ ಭೂಮಿ-ಸ್ತಬ್ಧರಾದ ಜನ

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ನಿನ್ನೆ ತಡರಾತ್ರಿ 1.15ಕ್ಕೆ ಭಾರಿ ಶಬ್ದದೊಂದಿಗೆ ಮತ್ತೆ ಭೂಮಿ ಕಂಪಿಸಿದ ಅನುಭವ ಆಗಿದೆ.ಸುಳ್ಯದ ಸಂಪಾಜೆ, ಚೆಂಬು, ಕಲ್ಲುಗುಂಡಿ ಗಡಿಭಾಗ ಹಾಗೂ ಕೊಡಗಿನ ಗಡಿಭಾಗಗಳು...