Connect with us

    DAKSHINA KANNADA

    ಪುತ್ತೂರು: ದಂಪತಿ ನೇಣುಬಿಗಿದು ಆತ್ಮಹತ್ಯೆ

    Published

    on

    ಪುತ್ತೂರು: ಇಲ್ಲಿನ ಬಡಗನ್ನೂರು ಗ್ರಾಮದ ಪಾದೆಕರ್ಯ ನಿವಾಸಿ ಸುಬ್ರಹ್ಮಣ್ಯ ಭಟ್ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಕಿಗೆ ಬಂದಿದೆ.

    ಪಾದೆಕರ್ಯ ಕೃಷಿಕರಾಗಿರುವ ಸುಬ್ರಹ್ಮಣ್ಯ ಭಟ್ ದಂಪತಿ ಅವರು ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಸುಬ್ರಹ್ಮಣ್ಯ ಭಟ್ ದಂಪತಿಯ ಮಕ್ಕಳು ನೋಡಿದಾಗ ಈ ಘಟನೆ ಬೆಳಗ್ಗೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಪ್ಯ ಪೊಲೀಸರು ತೆರಳಿದ್ದಾರೆ.

    DAKSHINA KANNADA

    ಅಂಗಾರಕ ಸಂಕಷ್ಟಿ ದಿನ ಗಣೇಶನಿಗೆ ಈ ರೀತಿ ಪೂಜೆ ಮಾಡಿದ್ರೆ ಸಂಕಷ್ಟಗಳೆಲ್ಲಾ ನಿವಾರಣೆ ಆಗುತ್ತದೆ..!

    Published

    on

    ಮಂಗಳೂರು: ಮಂಗಳವಾರ ಬರುವ ಸಂಕಷ್ಟಿಯನ್ನು ಅಂಗಾರಕ ಸಂಕಷ್ಟಿ ಎಂದು ಕರೆಯಲಾಗುತ್ತದೆ. ಈ ದಿನ ಉಪವಾಸ ಮಾಡಿ ವ್ರತ ಆಚರಣೆ ಮಾಡಿದರೆ ಜೀವನದಲ್ಲಿರುವ ಸಮಸ್ಯೆಗಳೆಲ್ಲಾ ಮಾಯವಾಗುತ್ತೆ ಎನ್ನಲಾಗುತ್ತದೆ. ಈ ದಿನ ಗಣೇಶನ ಪೂಜೆ ಮಾಡುವುದು ಹೇಗೆ ಎಂಬುದು ಇಲ್ಲಿದೆ.

    ಈ ದಿನ ಚಂದ್ರ ಹಾಗೂ ಗಣೇಶನ ಆರಾಧನೆ ಮಾಡುವುದು ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ. ಸಂಕಷ್ಟ ಚತುರ್ಥಿ ವ್ರತ ಚಂದ್ರ ದರ್ಶನ ಆಗದಿದ್ದರೆ ಅಪೂರ್ಣ ಎನ್ನಲಾಗುತ್ತದೆ. ಈ ಬಾರಿ ಚಂದ್ರ ರಾತ್ರಿ 10.12 ನಿಮಿಷಕ್ಕೆ ಉದಯಿಸಲಿದ್ದು, ಚಂದ್ರನ ದರ್ಶನ ಮಾಡಿ ಉಪವಾಸ ಪೂರ್ಣಗೊಳಿಸಬೇಕು. ಮಂಗಳವಾರ ಅಂದರೆ ಅಂಗಾರಕ ಸಂಕಷ್ಟಿಯ ದಿನ ಗಣೇಶನ ವ್ರತಾಚಾರಣೆ ಹಾಗೂ ಉಪವಾಸ ಮಾಡುವುದು ಇಡೀ ವರ್ಷದಲ್ಲಿ ಬರುವ ಸಂಕಷ್ಟ ಚತುರ್ಥಿ ಆಚರಣೆ ಮಾಡುವುದಕ್ಕೆ ಸಮ ಎನ್ನಲಾಗುತ್ತದೆ.

    ಅಂಗಾರಕ ಎಂದರೆ ಮಂಗಳಕರ ಎಂದು ಅರ್ಥ. ಈ ಸಂಕಷ್ಟಿ ಆಚರಣೆ ಮಾಡುವುದರಿಂದ ಜೀವನದಲ್ಲಿ ಯಾವುದೇ ಸಮಸ್ಯೆಗಳು ಬರುವುದಿಲ್ಲ ಹಾಗೂ ಇರುವ ಸಮಸ್ಯೆಗಳು ಸಹ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಇದೆ. ಹಾಗೆಯೇ ನಾವು ಮಾಡಿಕೊಂಡ ಸಂಕಲ್ಪಗಳು ಸಹ ಈಡೇರುತ್ತದೆ ಎನ್ನಲಾಗುತ್ತದೆ.

    ಪೂಜೆ ಮಾಡುವುದು ಹೇಗೆ?

    ಅಂಗಾರಕ ಸಂಕಷ್ಟಿಯ ದಿನ ಕೆಂಪು ಬಟ್ಟೆ ಮೇಲೆ ಗಣೇಶನ ವಿಗ್ರಹ ಅಥವಾ ಫೋಟೋವನ್ನು ಪ್ರತಿಷ್ಠಾಪನೆ ಮಾಡಬೇಕು. ನಂತರ ದೇವರಿಗೆ ಹೂವುಗಳನ್ನು ಅರ್ಪಣೆ ಮಾಡಿ. ಮಲ್ಲಿಗೆ ಹೂವಿನ ಅರ್ಪಣೆ ಮಾಡುವುದು ಶ್ರೇಷ್ಠ ಎನ್ನಲಾಗುತ್ತದೆ.

    ನಂತರ ಗರಿಕೆಯನ್ನು ಅರ್ಪಣೆ ಮಾಡಬೇಕು. ನೈವೇದ್ಯಕ್ಕೆ ಲಡ್ಡು ಅಥವಾ ಮೋದಕ ಇದ್ದರೆ ಬಹಳ ಉತ್ತಮ. ಈ ಎರಡು ವಸ್ತುಗಳು ಗಣೇಶನಿಗೆ ಇಷ್ಟ. ಹಾಗೆಯೇ ದೇವರಿಗೆ ತುಪ್ಪದ ದೀಪ ಹಚ್ಚಿ, ಗಣೇಶ ಸ್ತುತಿ ಪಠಿಸಿ ಆರತಿ ಮಾಡಿ. ಅಲ್ಲದೇ ಈ ದಿನ ಪೂರ್ತಿ ಉಪವಾಸ ಇದ್ದು, ರಾತ್ರಿ ಚಂದ್ರ ದರ್ಶನ ಮಾಡಿ ಆಹಾರ ಸೇವಿಸಿ.

    Continue Reading

    DAKSHINA KANNADA

    ಮಂಗಳೂರು : ಕುಮಾರಸ್ವಾಮಿ‌ ಚನ್ನಪಟ್ಟಣ ನೋಡುವ ಮೊದಲು ನಾನು‌ ನೋಡಿದ್ದೇನೆ : ಡಿಕೆಶಿ

    Published

    on

    ಮಂಗಳೂರು : ನಿನ್ನೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ದಕ್ಷಿಣ ಕನ್ನಡ ಜಿಲ್ಲೆಯ ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡಿದ್ದರು. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಬಿಎಸ್‌ವೈ ತುಲಾಭಾರ ಸೇವೆ ಕೂಡಾ ನಡೆಸಿದ್ದರು. ಇದೀಗ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುಕ್ಕೆ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಇಂದು(ಜೂ.25) ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಮಿಸಿದ ಅವರು ನೇರವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ.


    ಸಂಜೆಯ ವರೆಗೂ ಕುಕ್ಕೆ ಕ್ಷೇತ್ರದಲ್ಲಿ ಇದ್ದು ನೇರವಾಗಿ ಮಂಗಳೂರು ವಿಮಾನ ನಿಲ್ದಾಣದ ಮೂಲಕವಾಗಿ ಬೆಂಗಳೂರಿಗೆ ವಾಪಾಸಾಗಲಿದ್ದಾರೆ. ಕುಟುಂಬ ಸಮೇತರಾಗಿ ಕ್ಷೇತ್ರಕ್ಕೆ ಭೇಟಿ ನೀಡುತ್ತಿರುವ ಡಿ.ಕೆ.ಶಿವಕುಮಾರ್ ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ.

    ಚೆನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವನ್ನು ಖಚಿತ ಪಡಿಸಿದ ಡಿಕೆಶಿ, ಸುರೇಶ್‌ಗೆ ಆಸಕ್ತಿ ಇಲ್ಲ. ಹೀಗಾಗಿ ಚೆನ್ನಪಟ್ಟಣದ ಸೇವೆ ಮಾಡಲು ತೀರ್ಮಾನಿಸಿದ್ದೇನೆ. ಅಲ್ಲಿನ ಜನರು ಕುಮಾರಸ್ವಾಮಿಯನ್ನು ನೋಡುವ ಮೊದಲು ನನ್ನನ್ನು ನೋಡಿದ್ದಾರೆ. ಹೀಗಾಗಿ ಅಲ್ಲಿ ಒಂದಷ್ಟು ಅಳಿಲು ಸೇವೆ ಮಾಡಬೇಕು ಇದ್ದೇನೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ : ಮೊದಲ ಮಳೆಗೆ ಸೋರುತ್ತಿದೆ ರಾಮ ಮಂದಿರದ ಗರ್ಭಗೃಹ!

    ಇನ್ನು ಸರ್ಕಾರದಲ್ಲಿ ಡಿಸಿಎಂ ಹುದ್ದೆಯ ವಿಚಾರವಾಗಿ ಮಾತನಾಡಿದ ಡಿಕೆಶಿ, ಟಿವಿ ನ್ಯೂಸ್ ನೋಡಿ ಕೆಲವರು ಖಷಿ ಪಡ್ತಾ ಇದ್ದಾರೆ. ಆದರೆ ಯಾರು ಏನ್ ಬೇಡಿಕೆ ಇಟ್ರೂ ಪಾರ್ಟಿ ಯಾರಿಗೆ ಏನು ಕೊಡಬೇಕೋ ಅದನ್ನು ಕೊಡುತ್ತದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಬಳ್ಳಾರಿಯಲ್ಲಿ ಮೈನಿಂಗ್ ಗೆ ಕುಮಾರಸ್ವಾಮಿ ಅನುಮತಿ ನೀಡಿದ ಬಗ್ಗೆ ಮಾತನಾಡಿ ಅವರಿಗೆ ಎಷ್ಟು ನಾಲೇಜ್ ಇದೆ ಗೊತ್ತಿಲ್ಲ. ನನಗಂತೂ ಏನೂ ಗೊತ್ತಿಲ್ಲ ಎಂದು ಹೇಳಿದ್ದಾರೆ.

    Continue Reading

    DAKSHINA KANNADA

    ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಂಸದ ಬ್ರಿಜೇಶ್ ಚೌಟ

    Published

    on

    ಮಂಗಳೂರು: ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಲೋಕಸಭೆಯಲ್ಲಿ ಸೋಮವಾರ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

    ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ” ಮಾತೆರೆಗ್ಲಾ ಸೊಲ್ಮೆಲು” ಎಂದು ತುಳುವಿನಲ್ಲಿ ಧನ್ಯವಾದ ಸಲ್ಲಿಸಿದರು.

    ಪ್ರಮಾಣವಚನ ಸ್ವೀಕರಿಸಿದ ಬಳಿಕ ಅವರು ನವದೆಹಲಿಯ ಬಿಜೆಪಿ ಕೇಂದ್ರ ಕಾರ್ಯಾಲಯಕ್ಕೆ ಭೇಟಿ ನೀಡಿ, ಶ್ಯಾಮಾಪ್ರಸಾದ್ ಮುಖರ್ಜಿ ಮತ್ತು ದೀನದಯಾಳ್ ಉಪಾಧ್ಯಾಯ ಅವರ ಪುತ್ಥಳಿಗೆ ನಮಿಸಿದರು.

    Continue Reading

    LATEST NEWS

    Trending