Sunday, May 22, 2022

ಸೈರನ್ ಹಾಕಿ ಅಂಬುಲೆನ್ಸ್‌ನಲ್ಲಿ ಕಪಲ್ಸ್‌ ಜಾಲಿರೈಡ್‌: ಕೇಸ್‌ ದಾಖಲು

ಕೇರಳ: ಆಂಬ್ಯುಲೆನ್ಸ್ ನಲ್ಲಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸುವ ಬದಲು ಮದುವೆಯಾಗುವ ವಧು-ವರರು ಪ್ರಯಾಣಿಸಿ ಆಂಬ್ಯುಲೆನ್ಸ್‌ನ್ನು ದುರ್ಬಳಕೆ ಮಾಡಿಕೊಂಡಿರುವ ಘಟನೆ ಕೇರಳ ರಾಜ್ಯದ ಕಾಯಂಗುಲಂ ಎಂಬಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.


ತುರ್ತು ಚಿಕಿತ್ಸೆಗಾಗಿ ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ರೀತಿ ಮದುವೆ ಬಳಿಕ ಸೈರನ್ ಹಾಕಿಕೊಂಡು ವಧು-ವರರನ್ನು ಕೆರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಈ ಘಟನೆಯ ವಿಡಿಯೋ ಈ ಎಲ್ಲಾ ಕಡೆ ವೈರಲ್ ಆಗಿದೆ. ಈ ಘಟನೆಯನ್ನು ಗಂಭಿರವಾಗಿ ಪರಿಗಣಿಸಿದ ಸಾರಿಗೆ ಇಲಾಖೆ, ವಾಹನದ ಲೈಸನ್ಸ್ ರದ್ದು ಮಾಡಿದೆ.

ರಿಜಿಸ್ಟರ್ ಕ್ಯಾನ್ಸಲ್ ಮಾಡಿದೆ. ಡ್ರೈವರ್ ನ ಲೈಸನ್ಸ್ ಕೂಡ ರದ್ದು ಮಾಡಲಾಗಿದೆ. ಆಂಬ್ಯುಲೆನ್ಸ್ ದುರುಪಯೋಗ ತಡೆಯಲು ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಕಾಂಗ್ರೆಸ್ ನಾರಾಯಣ ಗುರು ಹೆಸರಲ್ಲಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ: ಬಿಜೆಪಿ

ಮಂಗಳೂರು: ಕಾಂಗ್ರೆಸ್ ಮತ್ತು ಮಾಜಿ ಶಾಸಕ ಜೆ ಆರ್ ಲೋಬೋ ಅವರು ಗೊಂದಲ ಸೃಷ್ಟಿಸಿ ನಾರಾಯಣ ಗುರುಗಳ ಹೆಸರಿನಲ್ಲಿ ರಾಜಕೀಯ ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್...

‘ಶಿವಲಿಂಗ’ ಪತ್ತೆ ಕುರಿತಂತೆ ಆಕ್ಷೇಪಾರ್ಹ ಪೋಸ್ಟ್: ದೆಹಲಿ ವಿವಿ ಪ್ರಾಧ್ಯಾಪಕನ ಬಂಧನ

ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ 'ಶಿವಲಿಂಗ' ಪತ್ತೆ ಕುರಿತಂತೆ ಹೇಳಿಕೆಗಳನ್ನು ಉಲ್ಲೇಖಿಸಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ದೆಹಲಿ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ರತನ್ ಲಾಲ್ ಅವರನ್ನು ನಿನ್ನೆ ರಾತ್ರಿ ದೆಹಲಿಯ ಉತ್ತರ...

ಮರಕ್ಕೆ ಡಿಕ್ಕಿ ಹೊಡೆದ ಟೆಂಪೋ ಟ್ರಾಕ್ಸ್: 3 ಮಕ್ಕಳು ಸೇರಿ 7 ಮಂದಿ ದುರಂತ ಅಂತ್ಯ

ಧಾರವಾಡ: ಟೆಂಪೋ ಟ್ರಾಕ್ಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 7 ಜನ ಮೃತಪಟ್ಟಿದ್ದಾರೆ. 13 ಜನರಿಗೆ ಗಾಯಗಳಾಗಿವೆ. ಅನನ್ಯ, ಹರೀಶ, ಶಿಲ್ಪಾ , ನೀಲವ್ಚ, ಮಧುಶ್ರೀ, ಮಹೇಶ್ವರಯ್ಯ, ಶಂಭುಲಿಂಗಯ್ಯ, ಸಾವನ್ನಪ್ಪಿದ ದುರ್ದೈವಿಗಳು.ಬಾಡ ಗ್ರಾಮದ ಬಳಿ...