Wednesday, January 27, 2021

ಅಧಿಕೃತವಾಗಿ ಕೋವಿಶೀಲ್ಡ್ ಜನವರಿ 16ರಿಂದ ಲಭ್ಯ; ಡಾ.ರಾಜೇಂದ್ರ..!

ಅಧಿಕೃತವಾಗಿ ಕೋವಿಶೀಲ್ಡ್ ಜನವರಿ 16ರಿಂದ ಲಭ್ಯ; ಡಾ.ರಾಜೇಂದ್ರ..!

ಮಂಗಳೂರು: ಕೊರೊನಾ ಲಸಿಕೆ ಕೋವಿಶೀಲ್ಡ್‌ ಅನ್ನು ಜನವರಿ 16 ರಿಂದ ಅಧಿಕೃತವಾಗಿ ನೀಡಲಾಗುತ್ತಿದ್ದು, ಎಲ್ಲಾ‌ ಲಸಿಕಾ ಕೇಂದ್ರದಲ್ಲಿ ಜಾಗರೂಕತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ  ಕೋವಿಶೀಲ್ಡ್  ಲಸಿಕಾ ಶಿಬಿರದ ಪೂರ್ವ ಸಿದ್ದತೆಯ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯ 6 ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡುವ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದು, ವ್ಯಾಕ್ಸಿನೇಷನ್ ಪಡೆಯುವ ಫಲಾನುಭವಿಗಳನ್ನು ವೀಕ್ಷಣೆಯಲ್ಲಿಟ್ಟು  ಅಡ್ಡ ಪರಿಣಾಮದ ಕುರಿತು ಖಾತ್ರಿ ಪಡಿಸಿಕೊಳ್ಳಿ.

ಮಂಗಳೂರು ಕೇಂದ್ರ‌ಕ್ಕೆ ಲಸಿಕೆ ತಲುಪಲಿದ್ದು, ಅದನ್ನು ಜಿಲ್ಲೆಯ 6 ಕೇಂದ್ರಗಳಿಗೆ ತಲುಪಿಸುವ ತಯಾರಿ ನಡೆದಿದೆ. ಫಲಾನುಭವಿಗಳನ್ನು ವೈದ್ಯಕೀಯ ತಪಾಸಣೆ ನಡೆಸಿ,

18 ವರ್ಷಕ್ಕಿಂತ ಮೇಲ್ಪಟ್ಟವರನ್ನು ಅತ್ಯಂತ ಸೂಕ್ಷ್ಮವಾಗಿ ತಪಾಸಣೆ ನಡೆಸಬೇಕು. ಫಲಾನುಭವಿಗಳಿಗೆ ಯಾವುದೇ ರೀತಿಯ ಗೊಂದಲ ಉಂಟಾಗದಂತೆ ಜಾಗೃತಿ ವಹಿಸಬೇಕು‌.

ವ್ಯಾಕ್ಸಿನ್ ಕೇಂದ್ರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಮಾಸ್ಕ್, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ಸಮರ್ಪಕವಾಗಿ ಬಳಕೆಯಾಗುವಂತೆ ನಿಗಾ ವಹಿಸಬೇಕು ಹಾಗೂ ಇನ್ನಿತರ ಅಗತ್ಯ ವೈದ್ಯಕೀಯ ಉಪಕರಣಗಳು ಲಭ್ಯವಿರಬೇಕು.

ಅದರ ಜೊತೆಗೆ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ. ಅಪರ ಜಿಲ್ಲಾಧಿಕಾರಿ ಎಂ ಜೆ ರೂಪಾ, ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮೀ ಪ್ರಸಾದ್ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಕೋವಿಡ್-19 ನಿಯಂತ್ರಣಕ್ಕಾಗಿ ಜಿಲ್ಲೆಗೆ ಗುರುವಾರ ಜಿಲ್ಲೆಗಾಗಮಿಸಿದ ಕೋವಿಶೀಲ್ಡ್  ಲಸಿಕೆಯನ್ನು ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ  ವೆನ್ಲಾಕ್ಆವರಣದಲ್ಲಿ ಸ್ವಾಗತಿಸಿ ಅವುಗಳನ್ನು ಇಳಿಸಿಕೂಂಡರು

ಜಿಲ್ಲೆಗೆ  24,500 ಸಾವಿರ ಕೊವೀಡ್-19 ರ ಕೋವಿಶೀಲ್ಡ್ ಲಸಿಕೆಯು ಮೈಸೂರಿನಿಂದ ಆಗಮಿಸಿದೆ.
ರಾಜ್ಯ ಸರ್ಕಾರದಿಂದ ಹೊಸದಾಗಿ ನೀಡಿರುವ ಐ.ಎಲ್.ಆರ್ ಲಸಿಕಾ ಸಂಗ್ರಹಣದ ಕೋಲ್ಡ್ ಸ್ಟೋರೆಜ್‌ನಲ್ಲಿ ಲಸಿಕೆಯನ್ನು ಸಂಗ್ರಹಿಸಿ ಇಡಲಾಗಿದೆ.

ಜನವರಿ 16 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರದಾದ್ಯಂತ ಲಸಿಕಾಕರಣಕ್ಕೆ , ಆನ್‌ಲೈನ್ ಮೂಲಕ ಚಾಲನೆ ದೊರೆಯಲಿದೆ.

ಇದನ್ನು ಎಲ್ಲ ಸರಕಾರಿ ಆಸ್ಪತ್ರೆಗಳ ನೊಂದಾಯಿತ ಆರೋಗ್ಯ ಸಿಬ್ಬಂದಿಗೆ . ಮುಂದಿನ ದಿನಗಳಲ್ಲಿ ಹಂಚಿಕೆಯಾಗಿ ಬರುವ ಲಸಿಕೆಯನ್ನು ಉಳಿದ ನೊಂದಾಯಿತ ಆರೋಗ್ಯ ಸಿಬ್ಬಂದಿ ಹಾಗೂ ಕೊರೋನಾ ವಾರಿಯರ್ಸ್ ಗಳಿಗೆ ನೀಡಲಾಗುತ್ತದೆ .

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.