Wednesday, December 1, 2021

ಕೊವೀಡ್ 3 ನೇ ಅಲೆ ಭೀತಿ : ಹೊರ ರಾಜ್ಯಗಳಿಂದ ಕರ್ನಾಟಕ ಪ್ರವೇಶಿಸಲು RTPCR ನೆಗಟಿವ್ ಕಡ್ಡಾಯ..!

ಬೆಂಗಳೂರು : ದೇಶದಲ್ಲಿ ಕೋವಿಡ್ 3 ನೇ ಅಲೆ ಈಗಾಗಲೇ ಆರಂಭವಾಗಿದೆ ಜೊತೆಗೆ ಝೀಕಾ ವೈರಸ್ ಭೀತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ.

ರಾಜ್ಯದ ಗಡಿ ಭಾಗಗಳಲ್ಲಿ ಈಗಾಗಲೇ ಈಗಾಗಲೇ ತಂಡಗಳನ್ನು ರಚನೆ ಮಾಡಿ ಎಲ್ಲರನ್ನು ಕಡ್ಡಾಯವಾಗಿ ತಪಾಸಣೆಯೊಂದಿಒಗೆ ಭಾರೀ ನಿಗಾ ವಹಿಸಲಾಗ್ತಿದೆ.

ಕರ್ನಾಟಕ-ಮಹಾರಾಷ್ಟ್ರ, ಮತ್ತು ಕೇಳದಿಂದ ರಾಜ್ಯ ಪ್ರವೇಶಿಸುವ ಗಡಿಯಲ್ಲೂ ಹೈ ಅಲರ್ಟ್​ ಇದ್ದು, ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು ಕಡ್ಡಾಯವಾಗಿ RTPCR ನೆಗೆಟಿವ್​ ರಿಪೋರ್ಟ್ ಹೊಂದಿರಬೇಕಿದೆ.

ಇಲ್ಲವಾದಲ್ಲಿ ಅಲ್ಲೇ ತಡೆದು ವಾಪಾಸ್ ಕಳಿಸುವ ಪ್ರಕ್ರೀಯೆ ಜಾರಿಗೆ ತರಲಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಳಿ ಇರುವ ಕೋಗನೋಳಿ ಚೆಕ್ ಪೋಸ್ಟ್​​ನಲ್ಲಿ‌ ನಿಗಾ ವಹಿಸಲಾಗಿದೆ.

ಝೀಕಾ,  ಡೆಲ್ಟಾ ವೈರಸ್ ಹಾಗೂ ಮೂರನೇ ಅಲೆ ಆತಂಕದ ಹಿನ್ನೆಲೆ ವಾಹನಗಳನ್ನು ಕಟ್ಟುನಿಟ್ಟಿನ ತಪಾಸಣೆ ಮಾಡಲಾಗ್ತಿದೆ.

ಕೇರಳ ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳಿಂದ ಕರ್ನಾಟಕ್ಕೆ ಬರುವ ಎಲ್ಲ ವಾಹನಗಳ ತಪಾಸಣೆ ನಡೆಸಲಾಗ್ತಿದ್ದು, ಆರ್‌ಟಿ‌ಪಿಸಿಆರ್ ನೆಗಟಿವ್ ರಿಪೋರ್ಟ್ ಹೊಂದುವುದು ಖಡ್ಡಾಯವಾಗಿದೆ.

ಇತ್ತ ಕೇರಳ ಮತ್ತು ಕಾಸರಗೋಡಿನಿಂದ ರಾಜ್ಯಕ್ಕೆ ಆಗಮಿಸುವ ಕೊಡಗು , ತಲಪಾಡಿ ಸೇರಿದಂತೆ ಎಲ್ಲಾ ಗಡಿಗಳಲ್ಲೂ ತೀವ್ರ ನಿಗಾ ವಹಿಸಲಾಗುತ್ತಿದ್ದು ಆರ್ ಟಿ ಪಿ ಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ಕಡ್ಡಾಯ ಮಾಡಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...