ಕಾಸರಗೋಡು: ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಉದ್ಯೋಗ ನಿರ್ವಹಿಸುವ ಸ್ಥಳಗಳನ್ನೂ ಸೇರಿಸಿ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ವಾಹನ ಚಲಾಯಿಸುವ ವೇಳೆ ಕೂಡಾ ಮಾಸ್ಕ್ ಧರಿಸಲೇಬೇಕೆಂಬ ನಿಯಮವನ್ನು ಆದೇಶದಲ್ಲಿ ತಿಳಿಸಲಾಗಿದೆ.
ನಿನ್ನೆ ಕೇರಳದಲ್ಲಿ ಎರಡು ಸಾವಿರಕ್ಕಿಂತ ಹೆಚ್ಚು ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿತ್ತು. ಕಾಸರಗೋಡಿನಲ್ಲಿ 31 ಮಂದಿಯಲ್ಲಿ ಸೋಂಕು ಪತ್ತೆಯಾಗಿತ್ತು.
ಇನ್ನು ಮಾಸ್ಕ್ ಧರಿಸುವಿಕೆ ಕುರಿತಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದ್ದು ಮಾಸ್ಕ್ ಧರಿಸುವ ಆದೇಶ ಉಲ್ಲಂಘಿಸಿದಲ್ಲಿ ದಂಡ ಹಾಗೂ ಕೇಸು ದಾಖಲಿಸುವಂತೆ ಸೂಚಿಸಲಾಗಿದೆ.