Connect with us

    LATEST NEWS

    ಭಾರತದಲ್ಲಿ 3ನೇ ಅಲೆ ಭೀತಿ.! ಒಂದೇ ದಿನ 43,509 ಮಂದಿಗೆ ಪಾಸಿಟಿವ್..! ಕೇರಳದಲ್ಲಿ ವೀಕೆಂಡ್ ಕರ್ಫ್ಯೂ ಜಾರಿ

    Published

    on

    ಬೆಂಗಳೂರು : ದೇಶದಲ್ಲಿ ಮತ್ತೆ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ  ಏರಿಕೆ ಕಂಡಿದೆ. ಕಳೆದ 24 ಗಂಟೆಗಳಳ್ಲಿ 43,509 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

    ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 3.15 ಕೋಟಿ ಗಡಿ ದಾಟಿದೆ.ಸೋಂಕು ಹೆಚ್ಚಳಗೊಳ್ಳುತ್ತಿರುವುದರಿಂದ ಕಳೆದ ಎರಡು ದಿನಗಳಿಂದ ಸಕ್ರಿಯ ಸೋಂಕು ಪ್ರಕರಣದಲ್ಲೂ ಏರಿಕೆ ಕಂಡು ಬರುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

    ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 640 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ, ಇದುವರೆಗೂ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,22,662 ಲಕ್ಷಕ್ಕೆ ಏರಿಕೆಯಾಗಿದೆ.

    ರಾಷ್ಟ್ರೀಯ ಕೊರೊನಾ ಚೇತರಿಕೆ ಪ್ರಮಾಣ ಶೇ.97.38 ರಷ್ಟಿದ್ದರೂ ಸೋಂಕು ಹೆಚ್ಚುತ್ತಿರುವುದರಿಂದ ಸಕ್ರೀಯ ಸೋಂಕು ಪ್ರಕರಣಗಳು 4,03,840 ಲಕ್ಷಕ್ಕೆ ಹೆಚ್ಚಳಗೊಂಡಿದೆ.

    3.15 ಕೋಟಿ ಸೋಂಕಿತರ ಪೈಕಿ ಈಗಾಗಲೇ 3.7 ಕೋಟಿ ಸೋಂಕಿತರು ಗುಣಮುಖರಾಗಿದ್ದರೆ, ಸಾವಿನ ಪ್ರಮಾಣ ಶೇ,1.34 ರಷ್ಟಿದೆ ಎಂದು ವರದಿಯಾಗಿದೆ. ದಿನೇ ದಿನೇ ಲಸಿಕೆ ಹಾಕುವ ಕಾರ್ಯವನ್ನು ಹೆಚ್ಚಿಸಲಾಗುತ್ತಿದ್ದು, ಇದುವರೆಗೂ 45.07 ಕೋಟಿ ಮಂದಿಗೆ ಲಸಿಕೆ ಹಾಕಲಾಗಿದೆ.

     ಕೇರಳದಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ : 

    ಇತ್ತ ಕೇರಳದಲ್ಲಿ ದೈನಂದಿನ ಕೋವಿಡ್‌ ಪ್ರಕರಣಗಳಲ್ಲಿ ಆತಂಕಕಾರಿಯಾದ ಹೆಚ್ಚಳ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಈ ವಾರದಿಂದ ವಾರಾಂತ್ಯದ ಲಾಕ್‌ಡೌನ್ ಅನ್ನು ಸರ್ಕಾರ ಮತ್ತೆ ವಿಸ್ತರಿಸಿದೆ.

    ದೇಶಾದ್ಯಂತ ಎರಡನೇ ಕೋವಿಡ್‌ ಅಲೆಯ ಒಟ್ಟಾರೆ ಕೋವಿಡ್ ಪ್ರಕರಣಗಳು ವೇಗವಾಗಿ ಕುಸಿಯುತ್ತಿರುವಾಗ ದಕ್ಷಿಣ ರಾಜ್ಯದಲ್ಲಿ ಕಳೆದ ಹಲವು ವಾರಗಳಿಂದ ಹೆಚ್ಚಿನ ಸಂಖ್ಯೆಯ ಕೋವಿಡ್‌ ಸೋಂಕು ಪ್ರಕರಣಗಳನ್ನು ವರದಿ ಮಾಡುತ್ತಿದೆ.

    ಆರೋಗ್ಯ ಸಚಿವಾಲಯವು ಪರಿಸ್ಥಿತಿಯ ಬಗ್ಗೆ ಎಚ್ಚರಿಕೆ ನೀಡಿದ ಒಂದು ದಿನದ ನಂತರ, ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ರಾಜ್ಯದ ಕೋವಿಡ್ ನಿರ್ವಹಣಾ ಪ್ರಯತ್ನಗಳಿಗೆ ನೆರವಾಗಲು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದಿಂದ ಆರು ಸದಸ್ಯರ ತಂಡವನ್ನು ರಾಜ್ಯಕ್ಕೆ ಕಳುಹಿಸಲು ಕೇಂದ್ರ ನಿರ್ಧರಿಸಿದೆ.
    ಕೇಂದ್ರ ಸರ್ಕಾರವು ಆರು ರೋಗಿಗಳ ತಂಡವನ್ನು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರದಿಂದ ರಾಜ್ಯಕ್ಕೆ ಕಳುಹಿಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ. “ಕೇರಳದಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವುದರಿಂದ, ಕೋವಿಡ್ ನಿರ್ವಹಣೆಯಲ್ಲಿ ರಾಜ್ಯದ ನಿರಂತರ ಪ್ರಯತ್ನಗಳಿಗೆ ತಂಡವು ನೆರವಾಗಲಿದೆ,” ಎಂದು ಮಾಂಡವಿಯಾ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
    ಆರೋಗ್ಯ ಸಚಿವಾಲಯದ ಈ ಹಿಂದೆ ಕೇರಳ ರಾಜ್ಯವು ಕೋವಿಡ್‌ ಪ್ರಕರಣಗಳ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದೆ. ಕೋವಿಡ್ ನಿರ್ವಹಣೆಯ ಮೂಲಕ ವಿಶ್ವದಲ್ಲೇ ಶ್ಲಾಘನೆಗೆ ಒಳಗಾಗಿದ್ದ ದಕ್ಷಿಣ ರಾಜ್ಯವು ಈಗ ದೇಶದಲ್ಲಿ ಪ್ರತಿದಿನ ಶೇಕಡ 40 ರಷ್ಟು ಪಾಸಿಟಿವ್ ಕೇಸ್‌ಗಳಿಗೆ ಕೊಡುಗೆ ನೀಡುತ್ತಿದೆ.
    ಕೇರಳದಲ್ಲಿ ಹೆಚ್ಚುತ್ತಿರುವ ‘ಆರ್’ ಮೌಲ್ಯ ಅಥವಾ ಕೋವಿಡ್ ಸಂತಾನೋತ್ಪತ್ತಿ ದರವು ಈ ತಿಂಗಳ ಆರಂಭದಲ್ಲಿ ಹೊಸ ಅಲೆಯ ಕಳವಳವನ್ನು ಉಂಟುಮಾಡಿದೆ. ಇದು ರಾಷ್ಟ್ರೀಯ ಕೋವಿಡ್‌ ಪ್ರಕರಣಗಳ ಏರಿಕೆಗೆ ಸಹ ಕಾರಣವಾಗಬಹುದು ಎಂದು ಹೇಳಲಾಗಿದೆ..ಕೇರಳದಲ್ಲಿ ಬುಧವಾರ 22,056 ಹೊಸ ಕೋವಿಡ್‌ ಪ್ರಕರಣಗಳು 33,27,301 ಕ್ಕೆ ಏರಿದೆ. ಕೋವಿಡ್‌ ವೈರಸ್‌ಗೆ 31 ಮಂದಿ ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 16,457 ಕ್ಕೆ ಏರಿಕೆಯಾಗಿದೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending