ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ನಿಯಂತ್ರಣ ಮೀರಿ ಹಬ್ಬುತ್ತಿದ್ದು, ಅತಂಕದ ಸ್ಥಿತಿ ನಿರ್ಮಾಣವಾಗಿದೆ. , ಇಲ್ಲಿಯವರೆಗೆ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ ಶೇ.40.83 ಪಾಸಿಟಿವಿಟಿ ರೇಟ್ ದಾಖಲಾಗಿದೆ.
ಮೊದಲ ಮತ್ತು ಎರಡನೇ ಅಲೆಯಲ್ಲಿ ನಗರಕ್ಕಿಂತ ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚು ಸಾವುಗಳಾಗಿವೆ. ನಗರ ಪ್ರದೇಶಗಳಲ್ಲಿ 64 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದರೆ ಗ್ರಾಮಾಂತರ ಪ್ರದೇಶದಲ್ಲಿ 208 ಜನ ಕೋವಿಡ್‌ಗೆ ಬಲಿಯಾಗಿದ್ದಾರೆ..
ಈ ಬಾರಿ ಕೊರೊನಾ 2 ನೇ ಅಲೆ ಸೋಂಕು ನಗರಗಳಿಂದ ಹಳ್ಳಿಗಳಿಗೆ ತೀವ್ರವಾಗಿ ವ್ಯಾಪಿಸುತ್ತಿದೆ ಜೊತೆಗೆ ಹಳ್ಳಿಗರೇ ಹೆಚ್ಚಿನ ಸಂಖ್ಯೆಯಲ್ಲಿ ಈ ಮಹಾಮಾರಿಗೆ ಬಲಿಯಾಗುತ್ತಿದ್ದಾರೆ ಎಂಬ ಆತಂಕಕಾರಿ ಅಂಶಗಳು ಕೂಡ ಕಂಡುಬಂದಿವೆ.
ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರೀಯಿಸಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುಧೀರ್ ಚಂದ್ರಚೂಡ ಹಳ್ಳಿಯವರೇ ಕೊರೊನಾ ವೈರಸ್‌ಗೆ ಹೆಚ್ಚು ಬಲಿಯಾಗುತ್ತಿದ್ದು ಆತಂಕ ತಂದಿದೆ.
ಕೊರೊನಾ ವೈರಸ್ ಬಗ್ಗೆ ಹಳ್ಳಿಯ ಜನ ಕೂಡಲೇ ಎಚ್ಚೆತ್ತುಕೊಳ್ಳಬೇಕು. ಕೊರೊನಾದ ಲಕ್ಷಣ ಕಂಡುಬಂದ ಕೂಡಲೇ ಸರಕಾರಿ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು.
ರೋಗಲಕ್ಷಣವನ್ನು ಯಾವುದೇ ಕಾರಣಕ್ಕೂ ಅಸಡ್ಡೆ ಮಾಡಬೇಡಿ. ಸ್ವಯಂ ಚಿಕಿತ್ಸೆ ಮಾಡುವುದನ್ನು ಬಿಟ್ಟುಬಿಡಿ ಕೂಡಲೇ ಸರಕಾರಿ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.