Connect with us

DAKSHINA KANNADA

ದಸರಾ ಹಬ್ಬ ಹಿನ್ನೆಲೆ: ಕೋವಿಡ್‌ ಮಾರ್ಗಸೂಚಿ ಮಾರ್ಪಾಡು

Published

on

ಮಂಗಳೂರು: ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಕೋವಿಡ್-19 ಪ್ರಕರಣಗಳ ಸಂಭಾವ್ಯ ಏರಿಕೆಯನ್ನು ತಡೆಯಲು ಈವರೆಗೆ ಹೊರಡಿಸಿರುವ ಮಾರ್ಗಸೂಚಿ

ಮತ್ತು ಆದೇಶಗಳಿಗೆ ಕೆಲವೊಂದು ಸೇರ್ಪಡೆಗಳು ಮತ್ತು ಮಾರ್ಪಾಡುಗಳನ್ನು ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.


ಪ್ರಸ್ತುತ ಚಾಲ್ತಿಯಲ್ಲಿರುವ ರಾತ್ರಿ ಕರ್ಫ್ಯೂ ಮುಂದುವರಿಯಲಿದ್ದು, ರಾತ್ರಿ ಕರ್ಫ್ಯೂ 10 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ಅಕ್ಟೋಬರ್ 1ರಿಂದ ಕಡ್ಡಾಯವಾಗಿ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವ ಷರತ್ತಿಗೊಳಪಟ್ಟು ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಚಿತ್ರಮಂದಿರ,

ಮಲ್ಟಿಪ್ಲೆಕ್ಸ್, ಥಿಯೇಟರ್, ರಂಗಮಂದಿರ ಹಾಗೂ ಆಡಿಟೋರಿಯಂಗಳು ಮತ್ತು ಇದೇ ರೀತಿಯ ಸ್ಥಳಗಳು ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ.

ಇಂತಹ ಸ್ಥಳಗಳಿಗೆ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಪ್ರವೇಶ ನಿರ್ಬಂಧವಿರುತ್ತದೆ ಹಾಗೂ ಇಂತಹ ಸ್ಥಳಗಳಿಗೆ ಗರ್ಭಿಣಿಯರು ಮತ್ತು ಹಿರಿಯ ನಾಗರಿಕರು ಭೇಟಿ ನೀಡದಂತೆ ಸಲಹೆ ನೀಡಲಾಗಿದೆ.

ಇಲ್ಲಿನ ಪ್ರವೇಶದ್ವಾರದಲ್ಲಿ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು. ಪ್ರತಿ ಪ್ರದರ್ಶನದ ನಂತರ ವಿಶ್ರಾಂತ ಕೊಠಡಿಗಳು, ಶೌಚಾಲಯ ಸೇರಿದಂತೆ ಎಲ್ಲ ಸ್ಥಳಗಳನ್ನು ಸ್ವಚ್ಛಗೊಳಿಸುವುದು. ಪ್ರವೇಶ ಮತ್ತು ನಿರ್ಗಮನ ಅಲ್ಲದೇ ಆಯಕಟ್ಟಿನ ಸ್ಥಳಗಳಲ್ಲಿ ಹ್ಯಾಂಡ್ ಸ್ಯಾನಿಟೈಝ್ ಸಂಬಂಧಪಟ್ಟ ಆಡಳಿತ ವರ್ಗ, ಮಾಲಕರು ಅಥವಾ ಸಂಘಟಕರು ಒದಗಿಸಬೇಕು.

ಅ.3ರಿಂದ ಕಡ್ಡಾಯವಾಗಿ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವ ಪರತ್ತಿಗೊಳಪಟ್ಟು ಪಬ್‌ಗಳು ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ. ಜಿಲ್ಲೆಯಲ್ಲಿ ಶಾಲೆಗಳ ಕಾರ್ಯಚರಣೆ ಬಗ್ಗೆ ಈಗಾಗಲೇ ಹೊರಡಿಸಲಾದ ಆದೇಶ ಮುಂದುವರಿಯಲಿದೆ.

ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶವಿರುವ ಗಡಿಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಕಾರ್ಯವನ್ನು ಮುಂದುವರಿಸ ಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending