Monday, January 24, 2022

ದಕ್ಷಿಣ ಕನ್ನಡದಲ್ಲಿ ಮಾರಣಾಂತಿಕವಾಗುತ್ತಿದೆ ಕೊರೊನಾ : ಕಠಿಣ ಮಾರ್ಗಸೂಚಿ ಜಾರಿಗೊಳಿಸಿದ ಜಿಲ್ಲಾಧಿಕಾರಿ..!

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 20 ಕ್ಕೂ ಅಧಿಕವಿರುವ ಕಾರಣ ಜಿಲ್ಲೆಯಲ್ಲಿ ಲಾಕ್​ಡೌನ್ ಮಾರ್ಗಸೂಚಿಗಳನ್ನು ‌ಕಠಿಣಗೊಳಿಸಲಾಗುತ್ತದೆ‌‌. ಕೊರೊನಾ ಪ್ರಮಾಣ ತಗ್ಗಿಸಲು ಈ ಕ್ರಮ ಅನಿವಾರ್ಯವಾಗಿದ್ದು ಜನತೆ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಮನವಿ ಮಾಡಿದ್ದಾರೆ.

ಮಂಗಳೂರಿನಲ್ಲಿಂದು ತುರ್ತು ಸುದ್ದಿಗೋಷ್ಟಿ ನಡೆಸಿದ ಜಿಲ್ಲಾಧಿಕಾರಿಗಳು ಈ ಸಂದರ್ಭ ಜಿಲ್ಲೆಯಾದ್ಯಂತ ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಲಾಗುತ್ತದೆ.‌ ಆದ್ದರಿಂದ ಯಾರೂ ಅನಗತ್ಯ ಸಂಚಾರ ಮಾಡದಿರುವಂತೆ ಮನವಿ ಮಾಡಿದರು.

ಸರ್ಕಾರದ ಗೈಡ್​​ಲೈನ್ ಪ್ರಕಾರ‌ ಪಾಸಿಟಿವಿಟಿ ರೇಟ್ 5% ಬಂದರೆ ಮಾತ್ರ ಅನ್​​ಲಾಕ್ ಅವಕಾಶ ಇದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವಿಟಿ ಶೇ 20 ರಿಂದ 21 ಇರುವ ಕಾರಣ ಅನ್​ಲಾಕ್​ಗೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ನುಡಿದರು. .

ದ.ಕ.ಜಿಲ್ಲೆಯಲ್ಲಿ 11 ಗ್ರಾಪಂಗಳಲ್ಲಿ ಸೋಂಕಿತರ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ವಿಶೇಷ ಲಾಕ್​ಡೌನ್ ಮಾಡಲಾಗಿದ್ದು, ಅಲ್ಲಿ ಪಾಸಿಟಿವಿಟಿ ರೇಟ್ ನಿಯಮಿತ ಸಂಖ್ಯೆಗೆ ಬರುವವರೆಗೆ ಆ ಗ್ರಾಮಗಳಲ್ಲಿ ಮದುವೆ, ಇನ್ನಿತರ ಸಮಾರಂಭಗಳನ್ನು ಸಂಪೂರ್ಣ ರದ್ದುಗೊಳಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಮಾತನಾಡಿ, ಕೊರೊನಾ ಎರಡನೆಯ ಅಲೆಯ ಸಂದರ್ಭದಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕೋವಿಡ್ ಲಾಕ್​ಡೌನ್ ನಿಯಮ‌ ಉಲ್ಲಂಘನೆಗೆ ಸಂಬಂಧಿಸಿದಂತೆ ಈವರೆಗೆ 2,410 ವಾಹನಗಳನ್ನು ಜಪ್ತಿ ಮಾಡಲಾಗಿದೆ.‌ ಮಾಸ್ಕ್ ಧಾರಣೆ ಮಾಡದ ಕುರಿತು 13,578 ಪ್ರಕರಣ ದಾಖಲಾಗಿದ್ದು, ಸುರಕ್ಷಿತ ಅಂತರ ಕಾಯ್ದುಕೊಳ್ಳದ ಬಗ್ಗೆ 91, ರಾಷ್ಟ್ರೀಯ ವಿಪತ್ತು‌ ನಿರ್ವಹಣಾ ಕಾಯ್ದೆಯಡಿ 253 ಹಾಗೂ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ 286 ಪ್ರಕರಣಗಳು ದಾಖಲಾಗಿವೆ ಎಂದರು.

Hot Topics

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...

‘ಪುಷ್ಪ’ ಸಿನಿಮಾ ನೋಡಿ ಅಪ್ರಾಪ್ತರಿಂದ ಯುವಕನ ಬರ್ಬರ ಹತ್ಯೆ- ಕೃತ್ಯದ ವೀಡಿಯೋ ಚಿತ್ರೀಕರಣ

ನವದೆಹಲಿ: ಟಾಲಿವುಡ್‌ನ ಅಲ್ಲು ಅರ್ಜುನ್‌ ನಟನೆಯ ಸೂಪರ್‌ ಹಿಟ್‌ 'ಪುಷ್ಪ' ಸಿನಿಮಾ ನೋಡಿ ಅದರಿಂದ ಪ್ರಭಾವಿತರಾಗಿ ಯುವಕನನ್ನು ಮೂವರು ಆರೋಪಿಗಳು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ದೆಹಲಿಯಲ್ಲಿ ನಡೆದಿದೆ.ಕೊಲೆಗೀಡಾದ ಯುವಕ...

ಸುಳ್ಯ: ಅಂಗಡಿಗೆ ಬಂದ ಗ್ರಾಹಕನಿಗೆ ಮಾಲಕನಿಂದ ಹಲ್ಲೆ- ದೂರು ದಾಖಲು

ಸುಳ್ಯ: ಬೆಳ್ಳಿಯ ಚೈನಿಗೆ ಲೇಪನ ಮಾಡಲು ಬಂದ ಗ್ರಾಹಕನೊಬ್ಬನಿಗೆ ಅಂಗಡಿ ಮಾಲಕನೇ ಕಬ್ಬಿಣದ ಪೈಪಿನಿಂದ ಹೊಡೆದು ಗಾಯಗೊಳಿಸಿದ ಘಟನೆ ಸುಳ್ಯದಲ್ಲಿ ನಿನ್ನೆ ನಡೆದಿದೆ.ಗಾಯಗೊಂಡ ಗ್ರಾಹಕರನ್ನು ಗೋಪಾಲ ಶೇಟ್ ಕೆ (47) ಎಂದು ಗುರುತಿಸಲಾಗಿದೆ. ಗೋಪಾಲ...