Connect with us

    DAKSHINA KANNADA

    ಕೋವಿಡ್ ತಡೆಗಟ್ಟುವ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ..!

    Published

    on

    ಮಂಗಳೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವುದರಿಂದ ಕೋವಿಡ್ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಉದ್ದೇಶದಿಂದ ನಗರ ವ್ಯಾಪ್ತಿಗೆ ಸೀಮಿತವಾಗಿ ತುರ್ತು ಕ್ರಮ ಕೈಗೊಳ್ಳುವ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮತ್ತು ಮಂಗಳೂರು ಮೇಯರ್ ಹಾಗೂ ಆಯುಕ್ತರ ಉಪಸ್ಥಿತಿಯಲ್ಲಿ

    ಮೇ 10ರ ಸೋಮವಾರ ನಡೆದ ಸಭೆಯಲ್ಲಿ ನಗರ ಆರೋಗ್ಯ ಕೇಂದ್ರಕ್ಕೆ ಅನುಗುಣವಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ನೋಡೆಲ್ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳ ಸಭೆ ನಡೆಸಿ, ಈ ಕೆಳಗಿನಂತೆ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ. .
    1. ಸ್ಥಳೀಯ ಮನಪಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆಹಚ್ಚಿ ಕೋವಿಡ್ ಪರೀಕ್ಷೆಗೆ ಒಳಪಡಿಸುವುದು.

    2. ಕೋವಿಡ್ ಖಚಿತ ಪ್ರಕರಣಗಳು ಹೊಂದಿರುವ ಮನೆಗಳನ್ನು ಕಂಟೈನ್‍ಮೆಂಟ್ ಜೋನ್ ಎಂದು ಪರಿಗಣಿಸಿ “ಈ ಮನೆ ನಿಗಾವಣೆಯಲ್ಲಿದೆ” ಎಂಬ ಸ್ಟಿಕ್ಕರನ್ನು ಹಚ್ಚುವುದು. ಹಾಗೂ ಗೃಹ ಬಂಧನದಲ್ಲಿರುವವರ ಮೇಲೆ ನಿಗಾವಹಿಸುವುದು.

    3. ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಪರೀಕ್ಷೆ ಹಾಗೂ ಹಾಗೂ ಲಸಿಕೆ ಉದ್ದೇಶದಿಂದ ಜನಸಂದಣಿ ಉಂಟಾಗುತ್ತಿರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲು ಅವಶ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ.

    • ಬಿಸಿಲಿನಿಂದ ಹಾಗೂ ಮಳೆಯಿಂದ ಸೂಕ್ತ ರಕ್ಷಣೆ ನೀಡುವ ಸಲುವಾಗಿ ಶಾಶ್ವತ ಮೇಲ್ಛಾವಣಿ ಸಾಕಷ್ಟು ಆಸನ ವ್ಯವಸ್ಥೆಗಾಗಿ ಕುರ್ಚಿಗಳನ್ನು ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮವಹಿಸಿದೆ.

    • ಈ ಕೇಂದ್ರಗಳಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ ಮಾರ್ಗಸೂಚಿಗಳಂತೆ ಲಸಿಕೆಗಾಗಿ ಹಾಗೂ ಕೋವಿಡ್ ಪರೀಕ್ಷೆಗೆ ಪ್ರತ್ಯೇಕ ಪ್ರವೇಶವನ್ನು ಕಲ್ಪಿಸಿ ವ್ಯವಸ್ಥಿತವಾಗಿ ನಿರ್ವಹಿಸಲು ಪ್ರತೀ ಕೇಂದ್ರಕ್ಕೆ 2 ಸಂಖ್ಯೆಯ ಹೋಮ್ ಗಾರ್ಡ್ಗಳನ್ನು ನಿಯೋಜಿಸಿದೆ.

    4. ಪ್ರಸ್ತುತ ಇರುವ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು ಪಾಲಿಕೆ ವ್ಯಾಪ್ತಿಯ ಆರೋಗ್ಯ ಕೇಂದ್ರಗಳಿಗೆ ಅನುಗುಣವಾಗಿ ಸಂಚಾರಿ ಗಂಟಲು ದ್ರವ ಮಾದರಿ ಸಂಗ್ರಹ ತಂಡವನ್ನು ರಚಿಸಲಾಗುವುದು.

    5. ಪಾಲಿಕೆ ವ್ಯಾಪ್ತಿಯ ಆರೋಗ್ಯ ಕೇಂದ್ರಗಳಲ್ಲಿ ಸ್ಥಳಾವಕಾಶದ ಕೊರತೆ ಕಂಡು ಬಂದಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಲಸಿಕೆ ನೀಡುವ ಪ್ರಕ್ರಿಯೆಯನ್ನು ಹತ್ತಿರದ ಸರ್ಕಾರಿ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಸ್ಥಳಾಂತರಿಸಲಾಗುವುದು.

    6. ಆಶಾ ಕಾರ್ಯಕರ್ತೆಯರು ಹಾಗೂ ಪಾಲಿಕೆ ಎಂಪಿಡಬ್ಲ್ಯು ವರ್ಕರ್ಸ್‍ಗಳ ಮೂಲಕ ಮನೆ ಮನೆ ಸಮೀಕ್ಷೆ ನಡೆಸಿ ಕೋವಿಡ್ ಲಕ್ಷಣಗಳ ಬಗ್ಗೆ ಸ್ಕ್ರೀನಿಂಗ್ ಮಾಡಲಾಗುವುದು.ಎಂಬುದಾಗಿ ಸಭೆಯಲ್ಲಿ ತೀರ್ಮಾನ ಹೊರಬಿದ್ದಿದೆ.
    .

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending