Connect with us

    BANTWAL

    ಕೊರೊನಾ  ಸೋಂಕಿತ  ವಕೀಲರಿಂದ ಕೋವಿಡ್ ನಿಯಮ ಉಲ್ಲಂಘನೆ:ಪಿ.ಡಿ.ಒ., ಟಾಸ್ಕ್ ಫೋರ್ಸ್ ಸಮಿತಿ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲು..!

    Published

    on

     ಬಂಟ್ವಾಳ: ಕೊರೊನಾ ಸೋಂಕಿತ ವಕೀಲರೋರ್ವರು ಕೋವಿಡ್ ನಿಯಮ ಉಲ್ಲಂಘಿಸಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕಾಗಿ ಅವರ ಮೇಲೆ ಪ್ರಕರಣ ದಾಖಲಾದ ಪ್ರಥಮ ಪ್ರಕರಣ ಬಂಟ್ವಾಳದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಬೊಳ್ಳುಕಲ್ಲು ನಿವಾಸಿ ನ್ಯಾಯವಾದಿ ರಾಜೇಶ್ ಪೂಜಾರಿ ಬೊಳ್ಳುಕಲ್ಲು ಅವರು ಕಾರ್ಕಳದಲ್ಲಿ ನಡೆದ ಮದುವೆ ಕಾರ್ಯ ಕ್ರಮವೊಂದರಲ್ಲಿ ಭಾಗಿಯಾಗಿದ್ದರು ಎಂಬ ಆರೋಪದ ಮೇಲೆ ಮಣಿನಾಲ್ಕೂರು ಗ್ರಾಮ ಪಂಚಾಯತ್ ಪಿ.ಡಿ.ಒ.ಹಾಗೂ ಟಾಸ್ಕ್ ಫೋರ್ಸ್ ಸಮಿತಿ ನೀಡಿದ ದೂರಿನ ಮೇಲೆ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲಿಸರು  ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಜೇಶ್ ಬೊಳ್ಳುಕಲ್ಲು ಅವರಿಗೆ ಮೂರು ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಎಂದು ರಿಪೋರ್ಟ್  ಬಂದಿತ್ತು.ಹಾಗಾಗಿ ಅವರು ಮನೆಯಲ್ಲಿ ಯೇ ಹೋಮ್ ಕ್ವಾರಂಟೈನ್ ಆಗಿ ಇರುವಂತೆ ಸ್ಥಳೀಯ ಗ್ರಾಮ ಪಂಚಾಯತ್ ಟಾಸ್ಕ್ ಫೋರ್ಸ್ ಕಮಿಟಿ ಸರಕಾರದ ನಿಯಮಾವಳಿಯನ್ನು ಪಾಲಿಸುವಂತೆ ಸೂಚನೆ ನೀಡಿತ್ತು.

    ಆದರೆ ವೃತ್ತಿಯಲ್ಲಿ ವಕೀಲರಾಗಿರುವ ರಾಜೇಶ್ ಪೂಜಾರಿ ಬೊಳ್ಳುಕಲ್ಲು ಅವರು ಕೋವಿಡ್ ನಿಯಮ ಪಾಲನೆ ಮಾಡದೆ ಕಾರ್ಕಳದಲ್ಲಿ ಗುರುವಾರ ನಡೆದ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

    ಈ ಬಗ್ಗೆ ನೆರೆ ಹೊರೆಯವರು ಮಣಿನಾಲ್ಕೂರು ಗ್ರಾಮ ಪಂಚಾಯತ್.ಪಿ.ಡಿ.ಒ.ಹಾಗೂ ಟಾಸ್ಕ್ ಫೋರ್ಸ್ ಸಮಿತಿ ಗೆ ದೂರು ನೀಡಿದ ಹಿನ್ನೆಲೆಯಲ್ಲಿ ರಾಜೇಶ್ ಪೂಜಾರಿ ಅವರ  ಮನೆಗೆ ವಿಚಾರಣೆಗೆಂದು ಬಂದು ನೋಡಿದಾಗ ಮನೆಯಲ್ಲಿ ಯಾರು ಇರಲಿಲ್ಲ.

    ಆ ಬಳಿಕ ಇವರು ಕಾರ್ಕಳದಲ್ಲಿ ಸಂಬಂಧಿಕರ ಮನೆಯಲ್ಲಿ ನಡೆಯುವ ಮದುವೆ ಕಾರ್ಯಕ್ರಮ ದಲ್ಲಿ ಭಾಗಿಯಾಗಿರುವ ಮಾಹಿತಿ ಪಡೆದುಕೊಂಡ ಬಳಿಕ ಪಿ.ಡಿ.ಒ.ಮತ್ತು ಟಾಸ್ಕ್ ಫೋರ್ಸ್ ಸಮಿತಿ ಸದಸ್ಯ ರು ರಾಜೇಶ್ ಅವರು ಕೋವಿಡ್ ರೋಗವನ್ನು ಸಾರ್ವಜನಿಕ ವಾಗಿ ಹರಡುವುದಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿ, ಇವರ ಮೇಲೆ ಪ್ರಕರಣ ದಾಖಲಿಸುವಂತೆ ದೂರು ನೀಡಿದ್ದು, ಅದರಂತೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ…

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    BANTWAL

    ಬಂಟ್ವಾಳ: ಹಂಚಿಕಟ್ಟೆಯಲ್ಲಿ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸೋರಿಕೆ

    Published

    on

    ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಹಂಚಿಕಟ್ಟೆಯಲ್ಲಿ ಗೇಲ್ ಕಂಪನಿಯ ಸಿಎನ್‌ಜಿ ಗ್ಯಾಸ್ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾದ ಘಟನೆ ನಡೆದಿದೆ.

    ಸಿಎನ್‌ಜಿ ಸೋರಿಕೆ ಗಮನಕ್ಕೆ ಬಂದ ತಕ್ಷಣ ಲಾರಿ ಚಾಲಕ ಹೆದ್ದಾರಿ ಬದಿಗೆ ನಿಲ್ಲಿಸಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿದ್ದಾರೆ.

    ಅದಾಗಲೇ ಸೋರಿಕೆಯನ್ನು ಚಾಲಕ ಹಾಗೂ ಸ್ಥಳೀಯರು ಸೇರಿ ತಡೆದಿದ್ದಾರೆ.

    Continue Reading

    LATEST NEWS

    Trending