Connect with us

LATEST NEWS

ಬೈಂದೂರು: ಸತ್ತ ಹಸುವನ್ನು ವಾಹನಕ್ಕೆ ಕಟ್ಟಿ ರಸ್ತೆಯಲ್ಲೇ ಎಳೆದೊಯ್ದ ಅಮಾನವೀಯತೆ

Published

on

ಬೈಂದೂರು: ಸತ್ತ ಹಸುವನ್ನು ಟೋಯಿಂಗ್ ವಾಹನಕ್ಕೆ ಕಟ್ಟಿ ರಸ್ತೆಯಲ್ಲೇ ಎಳೆದೊಯ್ದ ಅಮಾನವೀಯ ಘಟನೆ ಬೈಂದೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.


ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಎರಡು ಹಸುಗಳು ಸತ್ತು ಬಿದ್ದಿದ್ದು, ವಾಹನಕ್ಕೆ ಹಾಕಿ ಹಸುವಿನ ಶವ ಸಾಗಿಸುವ ಬದಲು ಹಸುವನ್ನ ವಾಹನಕ್ಕೆ ಕಟ್ಟಿ ಎಳೆದೊಯ್ದು ಅವಾಂತರ ಮಾಡುವ ಮೂಲಕ ಐಆರ್ ಬಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಸತ್ತ ಹಸುಗಳನ್ನು ಟೊಯಿಂಗ್ ವಾಹನದ ಮೂಲಕ ಎಳೆದೊಯ್ಯುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಬೈಂದೂರು ಹಿಂದೂ ಜಾಗರಣ ವೇದಿಕೆ ಐಆರ್‌ಬಿ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು,

ಹಸುಗಳನ್ನು ಈ ರೀತಿಯಾಗಿ ಬಿದಿಬೀದಿಗಳಲ್ಲಿ ಎಳೆದುಕೊಂಡು ಹೋಗುವ ಹೇಯ ಕೃತ್ಯಕ್ಕೆ ನಾಚಿಕೆಯಾಗಬೇಕು.

ನಿಮಗೆ ಗೋವಿನ ಶಾಪ ತಟ್ಟದೆ ಇರುವುದಿಲ್ಲ ಎಂದಿದೆ. ನಿಮ್ಮ ಬೇಜಾವಾಬ್ದಾರಿತನದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಇದರ ವಿರುದ್ದ ಹಿಂದೂ ಸಂಘಟನೆ ಪ್ರತಿಭಟನೆ ನಡೆಸಲಿದೆ ಎಂದು ಹೇಳಿದೆ.

FILM

ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

Published

on

ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು,  ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.

ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?

Published

on

ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.

ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.

ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.

ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್‌ಟೈಮ್‌ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.

ಈ ಸೀರಿಯಲ್‌ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್​ ತಂಡ ಸಂತಸ ಹಂಚಿಕೊಂಡಿದೆ.

Continue Reading

LATEST NEWS

Trending