Connect with us

LATEST NEWS

ಹಸುವಿನ ಸಗಣಿ ಮತ್ತು ಮೂತ್ರ ದೇಶದ ಆರ್ಥಿಕತೆ ಬಲಿಷ್ಠಪಡಿಸುತ್ತದೆ: ಮಧ್ಯಪ್ರದೇಶ ಸಿಎಂ

Published

on

ಭೋಪಾಲ್‌: ಹಸುವಿನ ಸಗಣಿ ಮತ್ತು ಮೂತ್ರ ಒಬ್ಬ ವ್ಯಕ್ತಿಯ ಆರ್ಥಿಕತೆಯನ್ನು ಬಲಪಡಿಸುವ ಜತೆಗೆ ದೇಶದ ಆರ್ಥಿಕತೆಯನ್ನೂ ಬಲಿಷ್ಠಪಡಿಸುತ್ತದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್​ ಸಿಂಗ್ ಚೌಹಾಣ್​ ಹೇಳಿದ್ದಾರೆ.


ಭಾರತೀಯ ಪಶುವೈದ್ಯಕೀಯ ಸಂಘ ಏರ್ಪಡಿಸಿದ್ದ ಶಕ್ತಿ 2021 ಎಂಬ ಮಹಿಳಾ ಪಶುವೈದ್ಯರ ಸಮಾವೇಶದಲ್ಲಿ ಮಾತನಾಡಿದರು.

ಹಸುಗಳ ಸಗಣಿ, ಮೂತ್ರದಿಂದ ನಾವು ನಮ್ಮ ಸ್ವಂತ ಆರ್ಥಿಕತೆ ಸದೃಢಗೊಳಿಸಿಕೊಳ್ಳುವ ಜತೆ,

ದೇಶದ ಆರ್ಥಿಕತೆಯನ್ನೂ ಪ್ರಬಲಗೊಳಿಸಬಹುದು. ಸರ್ಕಾರಗಳು ಹಸು ಸಂರಕ್ಷಿತ ಪ್ರದೇಶಗಳು ಮತ್ತು ಗೋಶಾಲೆಗಳನ್ನು ಅಭಿವೃದ್ಧಿಪಡಿಸಬಹುದು. ಆದರೆ ಕೇವಲ ಸರ್ಕಾರವೊಂದೇ ಅದನ್ನು ನಡೆಸಲು ಸಾಧ್ಯವಿಲ್ಲ ಜನರ ಬೆಂಬಲವೂ ಬೇಕಾಗುತ್ತದೆ ಎಂದು ಹೇಳಿದ್ದಾರೆ.

ಮಧ್ಯಪ್ರದೇಶದ ಸ್ಮಶಾನಗಳಲ್ಲಿ ಮೃತದೇಹಗಳನ್ನು ಸುಡಲು ಶವಗಳ ಬದಲಿಗೆ ಮರಗಳ ಕಟ್ಟಿಗೆ ಬದಲು ಸಗಣಿಗಳನ್ನು ಒಣಗಿಸಿ ಮಾಡಲಾದ ದಿಮ್ಮಿಗಳನ್ನು ಬಳಸಲಾಗುತ್ತಿದೆ ಎಂದು ಹೇಳಿದ ಶಿವರಾಜ್​ ಸಿಂಗ್ ಚೌಹಾಣ್​,

ಸಣ್ಣ ರೈತರು ಮತ್ತು ಜಾನುವಾರು ಮಾಲೀಕರಿಗೆ ಹಸುಗಳ ಸಾಕಣೆ ಹೇಗೆಲ್ಲ ಲಾಭದಾಯಕವಾಗಬಹುದು ಎಂಬ ಬಗ್ಗೆ ತಜ್ಞರು, ಪಶುವೈದ್ಯರು ಹೆಚ್ಚೆಚ್ಚು ಸಂಶೋಧನೆಯಲ್ಲಿ ತೊಡಗಬೇಕು ಎಂದು ಸಲಹೆ ನೀಡಿದರು.

LATEST NEWS

ಪ್ರಿಯಕರನ ಮೇಲೆ ಆ್ಯ*ಸಿಡ್ ಎರಚಿದ ಯುವತಿ!

Published

on

ಮಂಗಳೂರು/ ಉತ್ತರ ಪ್ರದೇಶ : ಪ್ರೀತಿಸಿ ಮೋಸ ಮಾಡಿದರೆ ಯುವಕರು ಪ್ರೇಯಸಿಯನ್ನು ಹ*ತ್ಯೆ ಮಾಡುವುದನ್ನು, ಆ್ಯಸಿ*ಡ್ ಎರಚುವ ಸುದ್ದಿಗಳನ್ನು ಕೇಳುತ್ತೇವೆ. ಆದರೆ, ಉತ್ತರ ಪ್ರದೇಶದಲ್ಲಿ ವಿಭಿನ್ನವಾದ ಘಟನೆ ನಡೆದಿದೆ. ಇಲ್ಲಿ ಪ್ರೇಯಸಿಯೊಬ್ಬಳು ತನ್ನ ಪ್ರಿಯಕರನ ಮೇಲೆ ಆ್ಯ*ಸಿಡ್ ದಾಳಿ ನಡೆಸಿದ್ದಾರೆ. ಮಂಗಳವಾರ(ಏ.23) ಬಲಿಯಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.


ಕೃತ್ಯ ಎಸಗಿದ್ದು ಯಾಕೆ?

ಯುವತಿ ಈ ರೀತಿ ದುಷ್ಕೃತ್ಯ ಮೆರೆಯಲು ಕಾರಣ ‘ಪ್ರೀತಿ’. ಆಕೆಯ ಪ್ರಿಯತಮ ಪ್ರೀತಿಸಿ ಮೋಸ ಮಾಡಿ ಮತ್ತೊಬ್ಬಳನ್ನು ಮದುವೆಯಾಗಲು ಮುಂದಾಗಿದ್ದ ಎನ್ನಲಾಗಿದೆ. ಹೀಗಾಗಿ ಯುವತಿ ಆತನ ಮುಖದ ಮೇಲೆ ಆ್ಯ*ಸಿಡ್ ಎರಚಿದ್ದಾಳೆ. ಮದುವೆಯ ಮೆರವಣಿಗೆಯ ವೇಳೆ ಯುವತಿ ವೇಷ ಮರೆಸಿಕೊಂಡು ಬಂದು ವರನ ಮುಖಕ್ಕೆ ಆ್ಯಸಿಡ್ ಎರಚಿದ್ದಾಳೆ ಎನ್ನಲಾಗಿದೆ.

ಆ್ಯ*ಸಿಡ್ ಬಿದ್ದ ಪರಿಣಾಮ ಗಾಯಗೊಂಡ ಯುವಕನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನಿಗೆ ಆ್ಯ*ಸಿಡ್ ಎರಚಿದ ಯುವತಿಯನ್ನು ಹಿಡಿದ ಮಹಿಳೆಯರು ಸರಿಯಾಗಿ ಥಳಿಸಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಯುವಕನ ತಾಯಿಯ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 326 ಬಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಬಲಿಯಾದ ಪೊಲೀಸ್ ಅಧಿಕಾರಿ ಮುನ್ನಾ ಲಾಲ್ ಯಾದವ್ ತಿಳಿಸಿದ್ದಾರೆ.

ಇದನ್ನೂ ಓದಿ : ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್‌ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!
ಯುವಕ – ಯುವತಿ ಪರಸ್ಪರ ಪ್ರೀತಿಸಿದ್ದರು. ದೈಹಿಕ ಸಂಪರ್ಕ ಹೊಂದಿದ್ದರು. ಆದರೆ, ಇವರ ಸಂಬಂಧವನ್ನು ಎರಡೂ ಕುಟುಂಬ ವಿರೋಧಿಸಿತ್ತು ಎನ್ನಲಾಗಿದೆ. ಏಪ್ರಿಲ್ 22 ರಂದು ಯುವಕನ ಮನೆಯವರು ಬೇರೆ ಯುವತಿಯೊಂದಿಗೆ ಮದುವೆ ಮಾಡಲು ಸಿದ್ಧತೆ ಮಾಡಿದ್ದರು. ಇದರಿಂದ ಕೋಪಗೊಂಡ ಯುವತಿ ಮದುವೆ ಮೆರವಣಿಗೆಯಲ್ಲಿ ಈ ಕೃತ್ಯ ಎಸಗಿದ್ದಾಳೆ ಎಂದು ವರದಿಯಾಗಿದೆ.

 

Continue Reading

LATEST NEWS

ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್‌ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!

Published

on

ರಾಯಚೂರು : ಪತ್ನಿಗೆ ಮೆಸೇಜ್ ಮಾಡಿದ ಕಾರಣಕ್ಕೆ ಹನುಮ ಜಯಂತಿಯಂದು ಉಗ್ರ ರೂಪ ತಾಳಿದ ಆಂಜನೇಯ ಗುಡಿ ಪೂಜಾರಿ ಆ ಯುವಕನನ್ನು ಬರ್ಬರವಾಗಿ ಕೊ*ಲೆಗೈದಿರುವ ಘಟನೆ ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿ ನಡೆದಿದೆ.


ಖಾದರ್ ಭಾಷಾ (28) ಕೊ*ಲೆಯಾದ ವ್ಯಕ್ತಿ. ಮಾರುತಿ ಹ*ತ್ಯೆಗೈದ ಪೂಜಾರಿ. ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳು. ಆದರೆ, ಖಾದರ್ ಭಾಷಾ ಮಾರುತಿ ಪತ್ನಿ‌ ಮೇಲೆ ಕಣ್ಣು ಹಾಕಿದ್ದಾನೆ. ಹೀಗಾಗಿ ಮಾರುತಿ, ಖಾದರ್‌ ಭಾಷಾನ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಭೀ*ಭತ್ಸವಾಗಿ ಹ*ತ್ಯೆ ಮಾಡಿದ್ದಾನೆ.

ಕೊ*ಲೆಗೈದ ಮಾರುತಿ ಖುದ್ದಾಗಿ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಕೊ*ಲೆಯಲ್ಲಿ ಇತರರೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ : ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!

Continue Reading

International news

4 ಸಾವಿರ ಕೋಟಿಯ ಮನೆ..8 ಖಾಸಗಿ ಜೆಟ್..700 ಹೈಎಂಡ್ ಕಾರುಗಳು..! ಯಾರು ಈ ಶ್ರೀಮಂತ..?

Published

on

ಮಂಗಳೂರು : ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳ ಸಾಲಿನಲ್ಲಿ ಎಲೋನ್ ಮಸ್ಕ್ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಎಲ್ಲರೂ ಹುಬ್ಬೇರುವಷ್ಟು ಆಸ್ತಿ, ಪಾಸ್ತಿ ಹೊಂದಿದ್ದಾರೆ. ಆದರೆ, ಅವರಿಗಿಂತಲೂ ಶ್ರೀಮಂತರಿದ್ದಾರೆ ಗೊತ್ತಾ!? ಅಬ್ಬಾ! ಹೌದಾ! ಹಾಗಾದರೆ ಅವರ ಬಳಿ ಎಷ್ಟು ಆಸ್ತಿ ಇದೆ ಎಂದು ನೀವು ಹುಬ್ಬೇರಿಸುತ್ತಿರಬಹುದು. ಇಲ್ಲಿದೆ ಆ ಕುಟುಂಬದ ಸಂಪೂರ್ಣ ವಿವರ.

ಬ್ಲೂಮ್‌ಬರ್ಗ್ ವರದಿ ಮಾಡಿರೋ ಶ್ರೀಮಂತರು

ಎಲೋನ್ ಮಸ್ಕ್ ಮನೆ ಬರೋಬ್ಬರಿ 4 ಸಾವಿರ ಕೋಟಿ ಬೆಲೆ ಬಾಳಿದ್ರೆ, ಈ ಕುಟುಂಬ 8 ಖಾಸಗಿ ಜೆಟ್ ಗಳನ್ನು ಹೊಂದಿದೆ. 700 ಹೈ ಎಂಡ್ ಕಾರುಗಳು ಇವರಲ್ಲಿದೆ. ಬ್ಲೂಮ್‌ ಬರ್ಗ್ ಇತ್ತೀಚಿಗೆ ಮಾಡಿದ ವರದಿಯಂತೆ ಜಗತ್ತಿನ ಶ್ರೀಮಂತ ವ್ಯಕ್ತಿ ಎಂದು ಕರೆಸಿಕೊಳ್ಳುವ ಎಲೋನ್ ಮಸ್ಕ್ ಆಸ್ತಿ 14,87,360 ಕೋಟಿ(ಹದಿನಾಲ್ಕು ಲಕ್ಷದ ಎಂಬತ್ತೇಳು ಸಾವಿರದ ಮುನ್ನೂರ ಅರುವತ್ತು ಕೋಟಿ)ಯಾಗಿದೆ.

ಆದ್ರೆ, ಆ ಕುಟುಂಬದ ಒಟ್ಟು ಆಸ್ತಿ ಕನಿಷ್ಟ ಅಂದ್ರೂ 25,33,113 ಕೋಟಿ (ಇಪ್ಪತೈದು ಲಕ್ಷದ ಮೂವತ್ತಮೂರು ಸಾವಿರದ ನೂರ ಹದಿಮೂರು ಕೋಟಿ) ಎಂದು ಅಂದಾಜಿಸಿದೆ. ಆದ್ರೆ, ಎಲೋನ್ ಮಸ್ಕ್ ಆಸ್ತಿ ವೈಯಕ್ತಿಕವಾಗಿದ್ದರೆ, ಇವರದ್ದು ಕುಟುಂಬದ ಆಸ್ತಿಯಾಗಿದೆ. ಆದ್ರೆ ಜಗತ್ತಿನಲ್ಲೇ ಅತ್ಯಂತ ಐಶಾರಾಮಿ ಜೀವನ ನಡೆಸ್ತಾ ಇದೆ ಈ ಕುಟುಂಬ.

ಯಾವುದು ಆ ಕುಟುಂಬ?


ಅಂದಹಾಗೆ ಅತ್ಯಂತ ಐಷಾರಾಮಿ ಜೀವನ ಸಾಗಿಸುತ್ತಿರುವ ಆ ಕುಟುಂಬ  ‘ಅಬುಧಾಬಿಯ ರಾಜಮನೆತನ‘. ಇದನ್ನು ಅಲ್‌-ನಯನ್ ಕುಟುಂಬ ಎಂದೂ ಕೂಡಾ ಕರೆಯಲಾಗುತ್ತದೆ. ಸದ್ಯದ ಮಟ್ಟಿಗೆ ಜಗತ್ತಿನಲ್ಲಿ ಇವರೇ ಅತ್ಯಂತ ಐಶಾರಾಮಿ ಜೀವನ ಸಾಗಿಸುತ್ತಿರುವ ಕುಟುಂಬ. ಇವರು ವಾಸವಾಗಿರುವ ಅರಮನೆಯ ಅಂದಾಜು ಮೌಲ್ಯ 4000 ಕೋಟಿಯದ್ದಾಗಿದೆ. ಇನ್ನು 700 ಐಶಾರಾಮಿ ಕಾರುಗಳು, ಗಾಲ್ಫ್ ಆಡಬಹುದಾದ ದೊಡ್ಡದಾದ ವಿಹಾರ ನೌಕೆ, ಇನ್ನು ತಿರುಗಾಡಲು 8 ಖಾಸಗಿ ಜೆಟ್‌ಗಳು ಇವರ ಬಳಿ ಇದೆ.

ಜಗತ್ತಿನಾದ್ಯಂತ ಸಾವಿರಾರು ಕೋಟಿ ಹೂಡಿಕೆ


ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷ ಮತ್ತು ಮುಖ್ಯಸ್ಥ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಯಾನ್ ಅವರ ಕುಟುಂಬವು ಪ್ರಪಂಚದಾದ್ಯಂತ ಸಾವಿರಾರು ಹೂಡಿಕೆಗಳನ್ನು ಹೊಂದಿದೆ. ಅಲ್ಲದೇ, ಜಗತ್ತಿನಾದ್ಯಂತ ಸಾಕಷ್ಟು ಆಸ್ತಿಗಳನ್ನು ಈ ಕುಟುಂಬ ಖರೀದಿಸಿದೆ. ಪ್ಯಾರಿಸ್‌ನಲ್ಲಿರುವ ಚಟೌ ಡಿ ಬೈಲೊ ಮತ್ತು ಯುಕೆಯಲ್ಲಿನ ಅನೇಕ ಆಸ್ತಿಗಳ ಮಾಲೀಕತ್ವದ ಕಾರಣ ಶೇಖ್ ಖಲೀಫಾ ಅವರನ್ನು ಲಂಡನ್‌ನ ಜಮೀನುದಾರ ಎಂದು ಕರೆಯಲಾಗುತ್ತದೆ. ಈ ಕುಟುಂಬವು ಪ್ರಪಂಚದಾದ್ಯಂತ ಲೆಕ್ಕವಿಲ್ಲದಷ್ಟು ಹೂಡಿಕೆ ಮಾಡಿದೆ. ಇದು ಎಲೋನ್ ಮಸ್ಕ್ ಅವರ ಕಂಪನಿ ಸ್ಪೇಸ್‌ ಎಕ್ಸ್ ಮತ್ತು ರಿಹಾನ್ನಾ ಅವರ ಐಷಾರಾಮಿ ಕಂಪನಿ ಸ್ಯಾವೇಜ್ ಎಕ್ಸ್‌ನ ಹೆಸರುಗಳನ್ನು ಸಹ ಒಳಗೊಂಡಿದೆ.

ಇದನ್ನೂ ಓದಿ : ಅಂಬಾನಿ ಪುತ್ರನ ಮದುವೆ ಎಲ್ಲಿ ನಡೆಯುತ್ತೆ ಗೊತ್ತಾ…!! ಹೇಗಿದೆ ಅದ್ಧೂರಿ ತಯಾರಿ?

ರಾಯಲ್ ವಿಹಾರ ನೌಕೆ :


ರಾಯಲ್ ಫ್ಯಾಮಿಲಿ ಅಂದ್ರೆ ಕೇಳ್ಬೇಕಾ..! ಎಲ್ಲವೂ ರಾಯಲ್ ಆಗೇ ಇರುತ್ತದೆ. ಈ ಕುಟುಂಬ ಪ್ರಪಂಚದ ಅತಿದೊಡ್ಡ ವಿಹಾರ ನೌಕೆಯನ್ನು ಹೊಂದಿದೆ, ಅದರ ಮೇಲೆ ಗಾಲ್ಫ್ ಕೋರ್ಸ್ ಅನ್ನು ನಿರ್ಮಿಸಲಾಗಿದೆ. ನೀಲಿ ಸೂಪರ್‌ಯಾಚ್‌ನ ಉದ್ದವು ಸುಮಾರು 591 ಅಡಿಗಳು, ಇದರ ಬೆಲೆ ಸುಮಾರು 4,991 ಕೋಟಿ ರೂ. ಜೊತೆಗೆ ಹಲವು ಐಶಾರಾಮಿ ಕಾರುಗಳೂ ಇವೆ. ಬುಗಾಟಿ, ಫೆರಾರಿ, ಮೆಕ್ಲಾರೆನ್, ಮರ್ಸಿಡಿಸ್-ಬೆನ್ಜ್ ಮತ್ತು ಲಂಬೋರ್ಘಿನಿ ಸೇರಿದಂತೆ ಹಲವು ಕಾರುಗಳಿವೆ.

Continue Reading

LATEST NEWS

Trending