Friday, August 12, 2022

ತಲಪಾಡಿ: ಅಕ್ರಮವಾಗಿ ದನದ ಮಾಂಸ ಸಾಗಾಟ- ನಾಲ್ವರ ಬಂಧನ

ಮಂಗಳೂರು: ಅಕ್ರಮವಾಗಿ ದನದ ಮಾಂಸ ಸಾಗಾಟ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸ್ ತಂಡ ತಲಪಾಡಿ ಟೋಲ್ ಗೇಟ್ ಸಮೀಪ ಇಂದು ಬೆಳಿಗ್ಗೆ ಬಂಧಿಸಿದೆ.


ಖಚಿತ ಮಾಹಿತಿ ಮೇರೆಗೆ ಟೋಲ್ ಗೇಟ್ ಸಮೀಪ ತಪಾಸಣೆಗಿಳಿದ ಸಿಸಿಬಿ ತಂಡ ಇಕೋ ಕಾರಲ್ಲಿ ಕೇರಳದಿಂದ ಉಳ್ಳಾಲ ಕೋಡಿಗೆ ಸಾಗಣೆ ಮಾಡುತ್ತಿದ್ದ 160 ಕೆ.ಜಿ ದನದ ಮಾಂಸವನ್ನ ವಶಪಡಿಸಿದ್ದು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.

ಉಳ್ಳಾಲ ಕೋಟೆಪುರ, ಕೋಡಿ ನಿವಾಸಿಗಳಾದ ಶೋಯೆಬ್ ಅಕ್ತರ್, ಮಹಮ್ಮದ್ ಮುಝಮ್ಮಿಲ್, ಅಮೀನ್ ಮತ್ತು ಹುಸೇನ್ ಬಂಧಿತರಾಗಿದ್ದು. ಸಿಸಿಬಿಯವರು ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದಾರೆ.
ಕಾಸರಗೋಡು ಜಿಲ್ಲೆಯ ಬಂದ್ಯೋಡಿನ ಮೊಹಮ್ಮದ್ ಎಂಬವರಿಂದ ದನ ಖರೀದಿಸಿ, ಅವರ ಮನೆಯಲ್ಲೇ ಮಾಂಸ ಮಾಡಿ ಉಳ್ಳಾಲಕ್ಕೆ ತಂದು ಯುಸಿ ಇಬ್ರಾಹಿಂ ಕೋಡಿ ಎಂಬವರ ಕೋಡಿ ಮತ್ತು ಮುಕ್ಕಚ್ಚೇರಿಯಲ್ಲಿರುವ ಬೀಫ್ ಸ್ಟಾಲ್ ನಲ್ಲಿ ಮಾರಾಟ ಮಾಡುತ್ತಿದ್ದರು. ‌

ಈಕೋ ಕಾರಿನಲ್ಲಿ ದನದ ಮಾಂಸ, ಮೂರು ತಲೆಗಳು, ದನದ ಚರ್ಮ ಪತ್ತೆಯಾಗಿದೆ. ‌ಪೊಲೀಸರ ದಾಳಿಯ ಸಂದರ್ಭ ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ 3.10 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು ಪಾಲಿಕೆಯ ಸದಸ್ಯ ಎ.ಸಿ ವಿನಯ್ ರಾಜ್‌ಗೆ ಪುತ್ರ ವಿಯೋಗ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಹಾಗೂ ವಿಪಕ್ಷ ನಾಯಕ ಎ.ಸಿ ವಿನಯ್ ರಾಜ್ ಅವರ ಪುತ್ರ ರಾಹುಲ್ ವಿನಯರಾಜ್ ಅಲ್ಪಕಾಲದ ಅನಾರೋಗ್ಯದಿಂದ ನಿನ್ನೆ ನಿಧನರಾಗಿದ್ದಾರೆ.ಇಂದು ಸಂಜೆ ಮಂಗಳೂರಿನ ಜೆಪ್ಪುವಿನಲ್ಲಿರುವ ಸಂತ. ಆಂತೋನಿ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳು 5 ದಿನ ಪೊಲೀಸ್ ಕಸ್ಟಡಿಗೆ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಬಂಧಿತರಾದ ಮೂವರು ಮುಖ್ಯ ಆರೋಪಿಗಳನ್ನು ಸುಳ್ಯ ನ್ಯಾಯಾಲಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.ಬಂಧಿತ ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್ (33), ರಿಯಾಝ್ ಅಂಕತ್ತಡ್ಕ (27),...

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಿಟ್‌ ಆ್ಯಂಡ್‌ ರನ್‌: ಓರ್ವ ಸ್ಪಾಟ್‌ ಡೆತ್‌, ಮತ್ತೋರ್ವನಿಗೆ ಗಾಯ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು...