Connect with us

LATEST NEWS

10ರಲ್ಲಿ 9 ದನ ಕದ್ದೊಯ್ದ ಕಳ್ಳರು: ಪ್ರತಿನಿತ್ಯ ಕಣ್ಣೀರಿಡುತ್ತಿರುವ ಲಕ್ಷ್ಮೀದೇವಿ

Published

on

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಹಸುಗಳ್ಳರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾತ್ರೋರಾತ್ರಿ ಕೊಟ್ಟಿಗೆಯಲ್ಲಿರುವ ಅಥವಾ ರಸ್ತೆ ಬದಿಯಲ್ಲಿ ಮೇಯಿತ್ತಿರುವ ಹಸುಗಳ ಮೇಲೆ ದಾಳಿ ಮಾಡುವ ದನಗಳ್ಳರ ಅಟ್ಟಹಾಸಕ್ಕೆ ಗೋವುಗಳು ಬಲಿಯಾಗುತ್ತಿವೆ.


ಇದು ಹಸುಗಳನ್ನು ಸಾಕಿಕೊಂಡು ಹೈನುಗಾರಿಕೆ ಮಾಡುತ್ತಿದ್ದ ಅದೆಷ್ಟೋ ಕುಟುಂಬಗಳ ಬದುಕಿಗೆ ದೊಡ್ಡ ಪೆಟ್ಟು ನೀಡುತ್ತಿದೆ. ಇದಕ್ಕೆ ಉದಾಹರಣೆಯಾಗಿ ನಿಂತಿದ್ದಾರೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆ ನಿವಾಸಿಯಾದ ಲಕ್ಷ್ಮೀದೇವಿ.
ತನ್ನ ಇಳಿ ವಯಸ್ಸಿನಲ್ಲಿ ಯಾರ ಹಂಗಿನಲ್ಲೂ ಇರದೇ ಲಕ್ಷ್ಮೀದೇವಿ 10ಕ್ಕೂ ಹೆಚ್ಚು ಹಸುಗಳನ್ನು ಸಾಕಿ ಹೈನುಗಾರಿಕೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ ದನಗಳ್ಳರ ಹಾವಳಿಯಿಂದ ಇಳಿವಯಸ್ಸಿನಲ್ಲಿ ಲಕ್ಷ್ಮಿದೇವಿ ಬೇರೆಯವರ ಮನೆಗೆಲಸ ಮಾಡಿಕೊಂಡು ಬದುಕು ಕಟ್ಟಿಕೊಳ್ಳಬೇಕಾದ ಅನಿವಾರ್ಯತೆ ಬಂದಿದೆ.
ಕಳೆದ ಎರಡು ವರ್ಷದಲ್ಲಿ ಲಕ್ಷ್ಮೀದೇವಿ ಬದುಕೇ ಅತಂತ್ರವಾಗಿದೆ. ಕಳೆದ ಎರಡ್ಮೂರು ತಿಂಗಳಲ್ಲೇ ಸುಮಾರು ನಾಲ್ಕು ಹಸುಗಳನ್ನು ಕದ್ದಿದ್ದಾರೆ. ಕಳೆದ ಎರಡು ವರ್ಷದಿಂದ 10 ಹಸುಗಳು ಗೋಕಳ್ಳರ ಪಾಲಾಗಿದೆ.

ಮೇಯಲು ಹೋದ ಹಸುಗಳಿಂದ ಹಿಡಿದು ಕೊಟ್ಟಿಗೆಯಲ್ಲಿದ್ದ ಹಸುಗಳನ್ನು ಸಹ ಬಿಡದೇ ಕದ್ದೊಯ್ಯಲಾಗಿದೆ. ಒಂಟಿ ಅಜ್ಜಿಯ ದೌರ್ಬಲ್ಯವನ್ನು ಅರಿತ ಗೋಕಳ್ಳರು ಲಕ್ಷ್ಮಿದೇವಮ್ಮರ ಸ್ವಾಭಿಮಾನದ ಬದುಕಿಗೆ ಪೆಟ್ಟು ನೀಡಿದೆ ಎಂದು ಅವರು ಕಣ್ಣೀರಾಗುತ್ತಾರೆ.

ಗೋಕಳ್ಳರು ಅಜ್ಜಿಯ ಸಾಕಿದ್ದ ಎಳೆಯ ಕರು ಸೇರಿದಂತೆ, ದೇವರಿಗೆ ಅರ್ಪಿಸಿದ್ದ ಬಸವನನ್ನು ಬಿಟ್ಟಿಲ್ಲ. ಹೈಟೆಕ್ ಕಾರಿನಲ್ಲಿ ಬರುವ ಕಳ್ಳರು ಮನೆ ಮುಂದೆ ಮಲಗಿದ್ದ ರಾಸುಗಳನ್ನು ಕಾರಿನಲ್ಲಿ ತುಂಬಿಕೊಂಡು ಹೋಗಿದ್ದಾರೆ.

ಗೋಕಳ್ಳರ ಗೋಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಲಕ್ಷ್ಮಿದೇವಮ್ಮರ ಬಳಿ ಇದ್ದ 11 ಹಸುಗಳಲ್ಲಿ ಈಗ ಒಂದು ಹಸು ಮಾತ್ರ ಬಾಕಿ ಇದೆ. ಒಂದೊಂದು ಹಸು ಕಳ್ಳತನವಾದಾಗಲೂ ಅಜ್ಜಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ.

ಜೊತೆಗೆ ಪೊಲೀಸ್ ಇಲಾಖೆ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಭೆ ನಡೆಸಿದಾಗಲೂ ಮನವಿ ಸಲ್ಲಿಸಿದ್ದಾರೆ. ಆದರೆ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಲಕ್ಷ್ಮಿದೇವಮ್ಮ ಅಸಹಾಯಕತೆ ತೋಡಿಕೊಂಡಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಹಸುಗಳನ್ನು ಸಾಕಿಕೊಂಡು ಹಾಲು ಮಾರಿ ಜೀವನ ಸಾಗಿಸುತ್ತಿದ್ದ ಲಕ್ಷ್ಮಿದೇವಿ ಈಗ ಹೊಟ್ಟೆಪಾಡಿಗಾಗಿ ಮನೆಗೆಲಸಕ್ಕೆ ಹೋಗುತ್ತಿದ್ದಾರೆ.

ಪ್ರತಿಬಾರಿ ಹಸು ಕಳ್ಳತವಾಗಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದರೂ, ಕಳ್ಳರನ್ನು ಈವರೆಗೆ ಬಂಧಿಸಿಲ್ಲ. ತೀರಾ ಬಡತನದಲ್ಲಿರುವ ಈ ತಾಯಿಗೆ ಆಸರೆಯಾಗಿದ್ದ ಗೋಮಾತೆಗಳು ಕಳ್ಳರ ಪಾಲಾಗಿದ್ದು ಮಾತ್ರ ದುರಂತ.

LATEST NEWS

ಗೋಪಾನ್ ಸ್ವಾಮಿ ಅವರ ದೇಹದಲ್ಲಿ ಯಾವುದೇ ಗಾಯಗಳಿಲ್ಲ: ಪ್ರಾಥಮಿಕ ವರದಿ

Published

on

ಮಂಗಳೂರು/ತಿರುವನಂತಪುರ : ಗೋಪಾನ್‌ಸ್ವಾಮಿಯದು ಸಹಜ ಸಾವು ಎಂದು ಪ್ರಾಥಮಿಕ ವರದಿಯಲ್ಲಿ ಕಂಡುಬಂದಿದೆ.

ಸ್ವಯಂ ಘೋಷಿತ ಗುರು ಗೋಪನ್ ಸ್ವಾಮಿಯ “ಸಮಾಧಿ” ವಿಚಾರವಾಗಿ ಕೇರಳ ಹೈಕೋರ್ಟ್ ಬುಧವಾರ ಕಾಂಕ್ರಿಟ್ ಚೇಂಬರ್ ಅನ್ನು ತೆರೆಯಲು ಅನುಮತಿ ನೀಡಿತ್ತು. ಇಂದು ಬೆಳಗ್ಗೆ ವಿವಾದಕ್ಕಿಡಾಗಿದ್ದ ಗೋಪಾನ್‌ಸ್ವಾಮಿಯವರ ಗೋರಿಯನ್ನು ಕೆಡವಿ ಪಾರ್ಥಿವ ಶರೀರವನ್ನು ಹೊರ ತೆಗೆಯಲಾಯಿತು.

ಕುಳಿತ ಸ್ಥಿತಿಯಲ್ಲಿ ಪತ್ತೆಯಾದ ಮೃತದೇಹವನ್ನು ಕುತ್ತಿಗೆಯವರೆಗೂ ಪೂಜಾ ಸಾಮಾಗ್ರಿಗಳಿಂದ ಮುಚ್ಚಲಾಗಿತ್ತು. ಬೆಳಗ್ಗೆ 7 ಗಂಟೆಗೆ ಪೊಲೀಸ್ ಬಂದೋಬಸ್ತ್‌ನಲ್ಲಿ ಸಮಾಧಿ ಕೆಡವಲು ಆರಂಭವಾಯಿತು. ಒಂದೂವರೆ ಗಂಟೆಯಲ್ಲಿ ವಿಚಾರಣೆ ಮುಗಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು.

ಮೃತದೇಹದ ಪ್ರಾಥಮಿಕ ಪರೀಕ್ಷೆಯಲ್ಲಿ ಗೋಪಾನ್ ಸ್ವಾಮಿಯದು ಸಹಜ ಸಾವು ಎಂದು ವೈದ್ಯರು ಧೃಡಪಡಿಸಿದ್ದಾರೆ. ದೇಹದ ಮೇಲೆ ಯಾವುದೇ ಮಾರಣಾಂತಿಕ ಗಾಯಗಳಿಲ್ಲ ಎಂದು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ಗೊತ್ತಾಗಲಿದೆ. ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತಿದ್ದು, ವಿಧಿ ವಿಧಾನಗಳ ಪ್ರಕಾರ ಕುಟುಂಬಸ್ಥರು ಅಂತ್ಯ ಸಂಸ್ಕಾರ ನಡೆಸಲಿದ್ದಾರೆ.

ಇದನ್ನೂ ಓದಿ: ಕೋಟಿ ಬೆಲೆಯ ಕಾರಿದ್ರೂ ಆಟೋದಲ್ಲಿ ಆಸ್ಪತ್ರೆಗೆ ಹೋದ್ರಾ ಸೈಫ್? ಈಗ ಹೇಗಿದ್ದಾರೆ ನಟ?

ಏನಿದು ಪ್ರಕರಣ ?
ತಿರುವನಂತಪುರ ಜಿಲ್ಲೆಯ ನೆಯ್ಯತ್ತಿಂಕರದಲ್ಲಿನ ಗೋಪನ್ ಕಳೆದ ಶುಕ್ರವಾರ ಕಾಣೆಯಾಗಿದ್ದಾರೆ ಎನ್ನಲಾಗಿತ್ತು. ಗೋಪನ್ ಸ್ವಾಮಿಗಳ ಮಕ್ಕಳಾದ ಸನಂದನ್ ಮತ್ತು ರಾಜಸೇನನ್ ಅವರು ಸ್ಥಳೀಯ ಸಮುದಾಯ ಅಥವಾ ಸಂಬಂಧಿಕರಿಗೆ ತಿಳಿಸದೆ ತಮ್ಮ ತಂದೆಯನ್ನು ನೆಯ್ಯಟಿಂಕರಾದ ದೇವಸ್ಥಾನದ ಬಳಿ ಸಮಾಧಿ ಮಾಡಿದ ನಂತರ ಈ ವಿವಾದ ಭುಗಿಲೆದ್ದಿತ್ತು.

ಈ ಬಗ್ಗೆ ಗೋಪನ್ ಅವರ ಮಕ್ಕಳು, ‘ತಮ್ಮ ತಂದೆ ಕುಳಿತ ಭಂಗಿಯಲ್ಲಿ ಧ್ಯಾನ ಮಾಡುತ್ತಿದ್ದಾಗ ನಿಧನರಾದರು ಮತ್ತು ಅವರ ಸಾವಿಗೆ ಯಾರಿಗೂ ಅವಕಾಶ ನೀಡದಂತೆ ಸೂಚನೆ ನೀಡಿದ್ದರು’ ಎಂದು ಹೇಳಿದ್ದಾರೆ. ನಂತರ ಅವರು ತಮ್ಮ ತಂದೆಯ ಸಮಾಧಿಯ ಕುರಿತ ಪೋಸ್ಟರ್ ಗಳನ್ನು ಕುಟುಂಬದವರು ಹಾಕಿದ್ದರು. ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ನೆರೆಹೊರೆಯವರು ಪೊಲೀಸರಿಗೆ ದೂರು ನೀಡಿದ್ದರಿಂದ ಪೊಲೀಸರು ತನಿಖೆ ಆರಂಭಿಸಿದ್ದರು.

ಹಾಗಾಗಿ ಕಂದಾಯ ಅಧಿಕಾರಿಯ ಆದೇಶ ಪತ್ರದೊಂದಿಗೆ ಪೊಲೀಸರು ತಪಾಸಣೆಗೆ ಮುಂದದಾಗ ಕುಟುಂಬವು ಆಕ್ಷೇಪ ವ್ಯಕ್ತಪಡಿಸಿತ್ತು. ಜತೆಗೆ ಕೆಲವು ಹಿಂದೂ ಸಂಘಟನೆಗೆಳೂ ಕುಟುಂಬದ ಪರ ನಿಂತಿದ್ದವು.
ಜತೆಗೆ ಪೊಲೀಸರು ತಪಾಸಣೆಗೆ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಸಮಾಧಿ ತೆರೆಯಲು ಪೊಲೀಸರಿಗೆ ಅನುಮತಿ ನೀಡಿತ್ತು.

 

Continue Reading

LATEST NEWS

ಮಾವನ ದೈ*ಹಿಕ ಕಿರುಕುಳ ಸಹಿಸಲಾಗದೆ ಆ*ತ್ಮಹ*ತ್ಯೆಗೆ ಶರಣಾದ ಸೊಸೆ

Published

on

ಮಂಗಳೂರು/ಬೆಂಗಳೂರು: 25 ವರ್ಷದ ಯುವತಿಯೊಬ್ಬಳು ದೈ*ಹಿಕ ಸಂಪರ್ಕಕ್ಕೆ ಪೀಡಿಸಿದಕ್ಕೆ ಪೆಟ್ರೋಲ್ ಸುರಿದು, ಬೆಂ*ಕಿ ಹಚ್ಚಿಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಆರೋಪಿ ಸಂಬಂಧದಲ್ಲಿ ಯುವತಿಗೆ ಮಾವನಾಗಬೇಕು. ಮೊದಲು ಇಬ್ಬರು ಚೆನ್ನಾಗಿದ್ದು, ಟ್ರಿಪ್ ಹೋಗುತ್ತಿದ್ದರು. ಇತ್ತೀಚೆಗೆ ಆರೋಪಿ ದೈ*ಹಿಕ ಸಂಪರ್ಕಕ್ಕೆ ಪೀಡಿಸುತ್ತಿದ್ದ. ನಗರದ ಹೋಟೆಲ್ ವೊಂದರಲ್ಲಿ ರೂಮ್ ಬುಕ್ ಮಾಡಿದ್ದ ಯುವತಿಯನ್ನು ಹೋಟೆಲ್ ರೂಮ್ ಗೆ ಬರುವಂತೆ ಕರೆದಿದ್ದಾನೆ. ಬರದಿದ್ದರೆ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಇದರಿಂದ ನೊಂದ ಯುವತಿ ಪೆ*ಟ್ರೋಲ್ ಸುರಿ*ದುಕೊಂಡು ಬೆಂ*ಕಿ ಹಚ್ಚಿಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾಳೆ.

 

ಇದನ್ನೂ ಓದಿ : 2 ದಿನದ ಕಂದಮ್ಮನನ್ನು ತೋಟದಲ್ಲಿ ಬಿಟ್ಟು ಹೋದ ಹೆತ್ತಮ್ಮ

 

ಈ ಘಟನೆ ಸಂಬಂಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

FILM

ಕೋಟಿ ಬೆಲೆಯ ಕಾರಿದ್ರೂ ಆಟೋದಲ್ಲಿ ಆಸ್ಪತ್ರೆಗೆ ಹೋದ್ರಾ ಸೈಫ್? ಈಗ ಹೇಗಿದ್ದಾರೆ ನಟ?

Published

on

ಮಂಗಳೂರು/ಮುಂಬೈ : ಸೈಫ್ ಅಲಿ ಖಾನ್ ಮೇಲೆ ನಡೆದ ಚೂ*ರಿ ಇ*ರಿತ ಪ್ರಕರಣ ಇಡೀ ಬಾಲಿವುಡನ್ನೇ ಬೆಚ್ಚಿ ಬೀಳಿಸಿದೆ. ಆರು ಕಡೆಗಳಿಗೆ  ಚೂ*ರಿ ಇರಿ*ತಕ್ಕೊಳಗಾಗಿ ತೀ*ವ್ರ ರ*ಕ್ತಸ್ರಾವವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ  ಪ್ರಾ*ಣಾಪಾಯದಿಂದ ಅವರು ಪಾರಾಗಿದ್ದಾರೆ.  ಘಟನೆ ಸಂಬಂಧ ಓರ್ವನನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಇದೆ.

ಆಟೋದಲ್ಲಿ ಆಸ್ಪತ್ರೆಗೆ ಹೋದ್ರಾ ಸೈಫ್?

ಸದ್ಯ ಈ ಪ್ರಕರಣ ಹಲವು ಅನುಮಾನ ಹುಟ್ಟು ಹಾಕಿದೆ. ಏನೇನೋ  ವದಂತಿಗಳು ಹರಿದಾಡುತ್ತಿವೆ.  ಈ ನಡುವೆ ಗಮನಕ್ಕೆ ಬಂದ ಮತ್ತೊಂದು ವಿಚಾರವಂದ್ರೆ ಅದು ಸೈಫ್ ಆಸ್ಪತ್ರೆ ಸೇರಿದ್ದು ಹೇಗೆ ಎಂಬುದು.

ಹೇಳಿ ಕೇಳಿ ಸಿನಿಮಾ ನಟ. ಅದರಲ್ಲೂ ಶ್ರೀಮಂತ ಮನೆತನದ ನಟ. ಭವ್ಯವಾದ ಮನೆ, ಆಳು ಕಾಳು ಇದ್ದಾರೆ.  ಸಿನಿಮಾ ಮಂದಿಗೆ ಕಾರಿನ ಕ್ರೇಜ್ ಇದ್ದೇ ಇದೆ. ಸೈಫ್ ಬಳಿಯೂ ಕೋಟಿಗಟ್ಟಲೆ ಬೆಲೆ ಬಾಳುವ ಕಾರುಗಳಿವೆ. ಆದ್ರೆ, ಹ*ಲ್ಲೆಗೊಳಗಾದ ವೇಳೆ ಅವರು ಆಟೋದಲ್ಲಿ ಆಸ್ಪತ್ರೆಗೆ ಹೋಗಿದ್ದಾರೆ ಎನ್ನಲಾಗಿದೆ.

ಸದ್ಯ ವೀಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಆಟೋ ಹಾಗೂ ಅದರ ಪಕ್ಕದಲ್ಲಿ ಕರೀನಾ ಕಪೂರ್ ನಿಂತಿರೋದನ್ನು ಕಾಣಬಹುದಾಗಿದೆ.  ವರದಿಗಳ ಪ್ರಕಾರ, ಸೈಫ್ ಅಲಿ ಖಾನ್ ದಾ*ಳಿಗೊಳಗಾದಾಗ ಕಾರು ರೆಡಿ ಇರಲಿಲ್ಲ. ತೀವ್ರ ರ*ಕ್ತಸ್ರಾವದಿಂದ ಪರದಾಡುತ್ತಿದ್ದಾಗ ಆಟೋ ಹಿಡಿದು ಆಸ್ಪತ್ರೆಗೆ ಹೋಗಿದ್ದಾರೆ ಎನ್ನಲಾಗಿದೆ.

ಸೈಫ್ ಹಿರಿಯ ಪುತ್ರ ಇಬ್ರಾಹಿಂ  ಸೈಫ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದು, ಕಾರಿನಲ್ಲಿ ಹೋದ್ರೆ ಹೆಚ್ಚು ಸಮಯವಾಗುತ್ತೆ ಎಂಬ ಕಾರಣಕ್ಕೆ ಈ ನಿರ್ಧಾರ ತಳೆಯಲಾಗಿತ್ತು ಎಂದೂ ಹೇಳಲಾಗಿದೆ.

ಸೈಫ್ ಔಟ್ ಆಫ್ ಡೇಂ*ಜರ್ :

ಸದ್ಯ ಲೀಲಾವತಿ ಆಸ್ಪತ್ರೆಯಲ್ಲಿ ಸೈಫ್ ಚೇತರಿಸಿಕೊಳ್ಳುತ್ತಿದ್ದಾರೆ. ಖಾನ್ ಅವರ ದೇಹಕ್ಕೆ 6 ಬಾರಿ ಇರಿಯಲಾಗಿದೆ. ಎರಡು ಕಡೆ ಆಳವಾದ ಗಾ*ಯಗಳಾಗಿದ್ದು, ತುರ್ತು ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಜೀ*ವಕ್ಕೆ ಯಾವುದೇ ಅ*ಪಾಯವಿಲ್ಲ.

ಇದನ್ನೂ ಓದಿ : ಎಟಿಎಂಗೆ ಹಣ ತುಂಬಲು ಬಂದ ಸಿಬ್ಬಂದಿ ಮೇಲೆ ಗುಂ*ಡಿನ ದಾ*ಳಿ; 93 ಲಕ್ಷ ದರೋಡೆ

ಬೆನ್ನು ಮೂಳೆಯಿಂದ ಚಾ*ಕುವಿನ ತುದಿಯನ್ನು ಹೊರತೆಗೆಯಲಾಗಿದೆ. ಖಾನ್ ಆರೋಗ್ಯ ಸ್ಥಿರವಾಗಿದೆ. ನಾಳೆ ಬೆಳಿಗ್ಗೆ ಐಸಿಯುವಿನಿಂದ ಹೊರತರುತ್ತೇವೆ ಎಂದು ಆಸ್ಪತ್ರೆಯ ವೈದ್ಯ ನಿತಿನ್ ಡಾಂಗೆ ಮಾಹಿತಿ ನೀಡಿದ್ದಾರೆ.

 

 

 

Continue Reading

LATEST NEWS

Trending

Exit mobile version